ಅಜೆಕಾರು ಕಲಾಭಿಮಾನಿ ಬಳಗದಿಂದ ಯಕ್ಷಗಾನ ಪ್ರದರ್ಶನ, ಸಾಧಕರಿಗೆ ಸಮ್ಮಾನ

Team Udayavani, Oct 26, 2018, 12:12 PM IST

2510mum12.jpg

ನವಿಮುಂಬಯಿ: ಕಲಾವಿದರನ್ನು ಗೌರವಿಸುವ ಕೆಲಸ ಅರ್ಥಪೂರ್ಣವಾಗಿದೆ. ಅಜೆ ಕಾರು ಕಲಾಭಿಮಾನಿಗಳ ಬಳಗ ಮುಂಬಯಿ ಯಲ್ಲಿ ಕಲಾಸೇವೆ ಮಾಡುವುದರೊಂದಿಗೆ ಕಲಾವಿದರನ್ನು, ಕಲಾಪೋಷಕರನ್ನು ಗುರುತಿಸಿ ಸಮ್ಮಾನಿಸುತ್ತಾ ಬರುತ್ತಿದೆ. ಯಕ್ಷಗಾನವನ್ನು ಉಳಿಸಿ- ಬೆಳೆಸುವಲ್ಲಿ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ಕಾರ್ಯ ಅಭಿನಂದನೀಯ ಎಂದು ನೆರೂಲ್‌ ಶ್ರೀ ಶನೀಶ್ವರ ಮಂದಿರದ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ ಅವರು ನುಡಿದರು.
ಅ.24 ರಂದು ಐರೋಲಿಯ ಹೆಗ್ಗಡೆ ಭವನದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ ವತಿಯಿಂದ ನಡೆದ ಕೊರªಬ್ಬು ಬಾರಗ ಯಕ್ಷ ಗಾನ ಪ್ರದರ್ಶನದ ಮಧ್ಯೆ ನಡೆದ ಸಮ್ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಕಲಾವಿ ದರಿಗೆ ಕಲಾಭಿಮಾನಿಗಳೇ ಆಸ್ತಿಯಾಗಿದ್ದು, ಓರ್ವ ಕಲಾವಿದನನ್ನು ಬೆಳೆಸುವ ಜವಾಬ್ದಾರಿ ಕಲಾಭಿಮಾನಿಗಳಿಗಿದೆ. ಅಜೆಕಾರು ಬಾಲಕೃಷ್ಣ ಶೆಟ್ಟಿ ಓರ್ವ ಕಲಾವಿದರಾಗಿದ್ದುಕೊಂಡು, ಕಲೆ- ಕಲಾವಿದರನ್ನು ಪೋಷಿಸುವ ಕಾರ್ಯದಲ್ಲಿ ಕಳೆದ ಹಲವಾರು ವರ್ಷಗಳಿಂದ ತೊಡಗಿರುವುದು ನಿಜವಾಗಿಯೂ ಅಭಿನಂದನೀಯ ಎಂದರು.

ಸಮ್ಮಾನ
ಸಮಾರಂಭದಲ್ಲಿ ಹಿರಿಯ ರಂಗಕರ್ಮಿ ವಿ. ಕೆ. ಸುವರ್ಣ ಮತ್ತು ಕಲಾವಿದ-ಕಲಾಪೋಷಕ ಚಂದ್ರಹಾಸ ಶೆಟ್ಟಿ ದೆಪ್ಪುಣಿಗುತ್ತು ದಂಪತಿಯನ್ನು  ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರವನ್ನಿತ್ತು ಸಮ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹೆಗ್ಗಡೆ ಸೇವಾ ಸಂಘದ ಅಧ್ಯಕ್ಷ ವಿಜಯ ಬಿ. ಹೆಗ್ಡೆ ಅವರು ಮಾತನಾಡಿ, ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರು ಊರಿನ ಕಲಾವಿದರನ್ನು ಆಹ್ವಾನಿಸಿ ಇಲ್ಲಿ ಅವರಿಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತಾ, ಮುಂಬಯಿಯಲ್ಲಿ ನಿರಂತರವಾಗಿ ಯಕ್ಷಗಾನವನ್ನು ಪ್ರದರ್ಶಿಸಿ ಯಕ್ಷಪ್ರೇಮಿಗಳಿಗೆ ಯಕ್ಷಸವಿಯನ್ನು ಉಣಿಸುತ್ತಿದ್ದಾರೆ. ಅವರ ಇಂತಹ ಕಾರ್ಯಕ್ರಮಗಳಿಗೆ ಎಲ್ಲರು ತುಂಬು ಹೃದಯದಿಂದ ಸಹಕರಿಸಬೇಕು. ಹೆಗ್ಗಡೆ ಸೇವಾ ಸಂಘವು ಕಲಾಕ್ಷೇತ್ರಕ್ಕೆ ಸದಾ ಸಹಕಾರವನ್ನು ನೀಡುತ್ತಾ ಬಂದಿದೆ. ಭವಿಷ್ಯದಲ್ಲೂ ಇದು ಮುಂದುವರಿಯಲಿದೆ ಎಂದರು. 

ಗೌರವ ಅತಿಥಿಗಳಾಗಿ ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಜೊತೆ ಕೋಶಾಧಿಕಾರಿ ಚಂದ್ರಶೇಖರ್‌ ಎಸ್‌. ಶೆಟ್ಟಿ, ಕನ್ನಡ ಸಂಘ ವರ್ತಕ್‌ನಗರ ಥಾಣೆ ಅಧ್ಯಕ್ಷ ಜಯಂತ್‌ ಎನ್‌. ಶೆಟ್ಟಿ, ನವಿಮುಂಬಯಿ ಹೊಟೇಲ್‌ ಓನರ್ ಅಸೋಸಿಯೇಶನ್‌ ಅಧ್ಯಕ್ಷ ದಯಾನಂದ ಶೆಟ್ಟಿ, ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಕನ್ನಡ ಸಂಘ ಬಾಲ್ಕುಮ್‌ ಥಾಣೆ ಅಧ್ಯಕ್ಷ ಮನೋಜ್‌ಕುಮಾರ್‌ ಎಲ್‌. ಹೆಗ್ಡೆ, ಅಯ್ಯಪ್ಪ ಭಕ್ತ ಮಂಡಳಿ ಚಾರಿಟೇಬಲ್‌ ಟ್ರಸ್ಟ್‌ ನೆರೂಲ್‌ ಉಪಾಧ್ಯಕ್ಷ ಪ್ರಭಾಕರ ಎಸ್‌. ಹೆಗ್ಡೆ, ರಾಜಲಕ್ಷಿ¾ ಹಾಸ್ಪಿಟಾಲಿಟಿ ರಸಾಯನಿ ಆಡಳಿತ ನಿರ್ದೇಶಕ ಚಂದ್ರಶೇಖರ ಶೆಟ್ಟಿ ಕುಕ್ಕುಂದೂರು, ಉದ್ಯಮಿಗಳಾದ ಮೇಘರಾಜ್‌ ಶೆಟ್ಟಿ ಸಾನಾ³ಡಾ, ನವಿಮುಂಬಯಿ ಶಿವಾಜಿ ಶೆಟ್ಟಿ. ರಾಘವೇಂದ್ರ ಎಂಟರ್‌ಪ್ರೈಸಸ್‌ ಘನ್ಸೋಲಿ ಮಾಲಕ ರಾಜೇಂದ್ರ ಎಸ್‌. ಶೆಟ್ಟಿ, ಉದ್ಯಮಿ ಆನಂದ ಬಂಗೇರ ಬಜ್ಪೆ ಮೊದಲಾದವರು ಉಪಸ್ಥಿತರಿದ್ದು ಮಾತನಾಡಿ ಶುಭಹಾರೈಸಿದರು.

ಸಮ್ಮಾನಿತರ ಅಭಿನಂದನಾ ಭಾಷಣವನ್ನು ರಂಗನಟ ರವಿ ಎಸ್‌. ಹೆಗ್ಡೆ ಹೆರ್ಮುಂಡೆ ಅವರು ಮಾಡಿದರು. ಕವಿ ಲಕ್ಷಿ¾à ನಾರಾಯಣ ರೈ ಹರೇಕಳ ಅವರು ಸಮ್ಮಾನ ಪತ್ರ ವಾಚಿಸಿದರು. ರಂಗನಟ, ನಿರ್ದೇಶಕ ಅನಿಲ್‌ ಕುಮಾರ್‌ ಹೆಗ್ಡೆ ಪೆರ್ಡೂರು ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಅಜೆಕಾರು ಕಲಾಭಿಮಾನಿ ಬಳಗದ ಸಂಚಾಲಕ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಅತಿಥಿಗಳನ್ನು ಗೌರವಿಸಿದರು.

ಇದು ನನ್ನ ಕಲಾಸೇವೆಗೆ ಸಂದ ಗೌರವವಾಗಿದೆ ಎಂದು ಪರಿಗಣಿಸಿ ಸಮ್ಮಾನವನ್ನು ಸ್ವೀಕರಿಸುತ್ತಿದ್ದೇನೆ. ಕಲಾಕ್ಷೇತ್ರದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ ಸೇವೆ ಅಭಿಮಾನ ಪಡುವಂಥದ್ದಾಗಿದೆ. ಯಾವುದೆ ವ್ಯಕ್ತಿಗೆ ಕಲೆ ಮತ್ತು ಕಲಾವಿದರ ಬಗ್ಗೆ ಇರುವ ಕಾಳಜಿಯಿಂದ ಮಾತ್ರ ಇಂತಹ ಕಾರ್ಯಕ್ರಮಗಳು ನಡೆಯಲು ಸಾಧ್ಯ. ಬಳಗದ ಕಲಾಸೇವೆಗೆ ಕಲಾಭಿಮಾನಿಗಳ, ಕಲಾಪೋಷಕರ ಸಹಕಾರ ಸದಾಯಿರಲಿ.
  –  ವಿ. ಕೆ. ಸುವರ್ಣ, ಸಮ್ಮಾನಿತರು

 ಈ ಸಮ್ಮಾನ ನನ್ನ ಕಲಾಜೀವನಕ್ಕೆ ಪ್ರೇರಣೆಯಾಗಿದೆ. ಇನ್ನಷ್ಟು ಕಲಾಸೇವೆ ಮಾಡಲು ಕಲಾಮಾತೆಯ ಅನುಗ್ರಹ ಈ ಸಮ್ಮಾನದಿಂದ ಸಿಕ್ಕಂತಾಗಿದೆ. ಅಜೆಕಾರು ಕಲಾಭಿಮಾನಿ ಬಳಗವು ಕಲೆಯೊಂದಿಗೆ ಕಲಾವಿದರನ್ನು ಬೆಳೆಸುತ್ತಿದೆ. ಊರಿನ ಯುವ ಪ್ರತಿಭೆಗಳಿಗೆ ಇಲ್ಲಿ ಅವಕಾಶವನ್ನಿತ್ತು ಅವರ ಪ್ರತಿಭೆಗೆ ವೇದಿಕೆಯನ್ನು ಕಲ್ಪಿಸಿಕೊಡುತ್ತಿರುವುದು ಅಭಿನಂದನೀಯ. ಅವರ ಇಂತಹ ಸೇವೆ ಹೀಗೆಯೇ ಮುಂದುವರಿಯಲಿ.
– ದೆಪ್ಪುಣಿಗುತ್ತು ಚಂದ್ರಹಾಸ ಶೆಟ್ಟಿ,  ಸಮ್ಮಾನಿತರು

 ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

16-bng

Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.