ಸುಪ್ರೀಂ ತೀರ್ಪಿಗೆ ಭಕ್ತರ ಅಸಮಾಧಾನ
Team Udayavani, Oct 26, 2018, 3:52 PM IST
ಚಿತ್ರದುರ್ಗ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಶ್ರೀ ಶಬರಿಮಲೈ ಅಯ್ಯಪ್ಪಸ್ವಾಮಿ ಸೇವಾ ಸಮಾಜಂ ಕರ್ನಾಟಕ, ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ
ಚಾಮುಂಡೇಶ್ವರಿ ಅಯ್ಯಪ್ಪ ಭಜನಾ ಮಂಡಳಿ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಆನೆಬಾಗಿಲು ಗಣಪತಿ ದೇವಸ್ಥಾನ ಸಮೀಪ ಸಮಾವೇಶಗೊಂಡ ಭಕ್ತರು, ಶಬರಿಮಲೆಯ ಧಾರ್ಮಿಕ ಆಚರಣೆ ಪದ್ಧತಿ ಉಳಿಸಿ ಹಾಗೂ ಧಾರ್ಮಿಕ ನಂಬಿಕೆಗಳಿಗೆ ಗೌರವ ಕೊಡಿ ಎಂಬ ಘೋಷಣೆಯುಳ್ಳ ಫಲಕಗಳನ್ನು ಪ್ರದರ್ಶಿಸಿದರು. ಶಬರಿಮಲೆಯ ಮೂಲ ಸಂಪ್ರದಾಯ ಮತ್ತು ಆಶಯಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ನೀಡಿರುವ ಸರ್ವೋತ್ಛ ನ್ಯಾಯಾಲಯದ ತೀರ್ಪು ಖಂಡನೀಯ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದರು.
ಶಬರಿಮಲೆಯಲ್ಲಿ ಶತಮಾನಗಳಿಂದ ನಡೆದುಕೊಂಡು ಬಂದ ಪದ್ಧತಿ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪು ಭಕ್ತರ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ಇದನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಗಂಭೀರ ಸ್ವರೂಪದ ಹೋರಾಟ ನಡೆಸಲಿದ್ದೇವೆ ಎಂದು ಎಚ್ಚರಿಸಿದರು. ಯಾವುದೋ ಸರ್ಕಾರೇತರ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಈ ತೀರ್ಪು ನೀಡಿರುವುದು ಸರಿಯಲ್ಲ. ತೀರ್ಪು ಮರು ಪರಿಶೀಲನೆಗಾಗಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು. ಶಬರಿಮಲೆ ದೇವಸ್ಥಾನದ ನಂಬಿಕೆ ಹಾಗೂ ಪರಂಪರೆಗೆ ಧಕ್ಕೆಯಾಗಿದ್ದು ಅದನ್ನು ರಕ್ಷಿಸಲು ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬಳಿಕ ದೇಶದಲ್ಲಿನ ಹಿಂದೂ ಪರ ಸಂಘಟನೆಗಳು, ಬುಡಕಟ್ಟು ಜನರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಮಹಿಳೆಯರಿಗೆ ಅಯ್ಯಪ್ಪಸ್ವಾಮಿ ದೇವಾಲಯದ ಒಳಗೆ ಪ್ರವೇಶಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಬುಡಕಟ್ಟು ಜನರ ಭಾವನೆಗಳನ್ನು ಸುಪ್ರೀಂ ಕೋರ್ಟ್ ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಶ್ರೀ ಶಬರಿಮಲೈ ಅಯ್ಯಪ್ಪಸ್ವಾಮಿ ಸೇವಾ ಸಮಾಜಂ ಕರ್ನಾಟಕದ ಜಿಲ್ಲಾಧ್ಯಕ್ಷ ಶರಣ್ ಕುಮಾರ್, ಕಾರ್ಯದರ್ಶಿ ಬಿ.ಎಸ್. ಮೋಹನ್ ಕುಮಾರ್, ಚಿತ್ರದುರ್ಗ ಅಯ್ಯಪ್ಪಸ್ವಾಮಿ ದೇವಸ್ಥಾನದ ಕಾರ್ಯದರ್ಶಿ ಎಂ.ಪಿ. ವೆಂಕಟೇಶ್, ಗುರುಸ್ವಾಮಿ, ಸತೀಶ್ ಸ್ವಾಮಿ, ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಚಾಮುಂಡೇಶ್ವರಿ ಅಯ್ಯಪ್ಪ ಭಜನಾ ಮಂಡಳಿ ಸದಸ್ಯರು, ಮುಖಂಡರು ಸೇರಿದಂತೆ ನೂರಾರು ಭಕ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.