ಬಾಲ್ಯ ವಿವಾಹ ತಡೆಗೆ ಸಹಕಾರ ಅಗತ್ಯ: ನ್ಯಾ| ಬನಸೊಡೆ


Team Udayavani, Oct 27, 2018, 3:30 PM IST

yad-2.jpg

ಯಾದಗಿರಿ: ಬಾಲ್ಯ ವಿವಾಹ ಒಂದು ಸಾಮಾಜಿಕ ಪಿಡಗು, ಇದನ್ನು ಎಲ್ಲಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳ ಪರಸ್ಪರ ಸಹಕಾರದಿಂದ ತಡೆಗಟ್ಟಬಹುದಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧಿಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ ಹೇಳಿದರು.

ಜಿಲ್ಲಾ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪಂಚಾಯತ್‌, ಜಿಲ್ಲಾ ಪೊಲೀಸ್‌ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಆಶ್ರಯದಲ್ಲಿ ಗುರುವಾರ ಜಿಲ್ಲಾ, ತಾಲೂಕು ಮಟ್ಟದ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು, ಪ್ರೌಢಶಾಲಾ ಮುಖ್ಯ ಗುರುಗಳು, ವಸತಿ ನಿಲಯ ಮೇಲ್ವಿಚಾರಕರಿಗೆ ಬಾಲ್ಯ ವಿವಾಹ ನಿಷೇಧ-2006 ಹಾಗೂ ಕರ್ನಾಟಕ ತಿದ್ದುಪಡಿ
ಕಾಯ್ದೆ ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. 

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹಣಮಂತ್ರಾಯ ಕರಡಿ ಮಾತನಾಡಿ, ಪಾಲಕರಿಗೆ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ಮನವರಿಕೆ ಮಾಡಬೇಕು. ಜಿಲ್ಲೆಯಾದ್ಯಂತ ಬಾಲ್ಯ ವಿವಾಹ ತಡೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ
ಜಾಗೃತಿ ಮೂಡಸಬೇಕಿದೆ ಎಂದರು. 

ಜಿಲ್ಲಾ ಬಾಲ್ಯ ವಿವಾಹ ತಡೆ ಮತ್ತು ಸಮನ್ವಯ ಸಮಿತಿ ಸದಸ್ಯೆ ನಾಗರತ್ನಾ ಅನಪುರ ಮಾತನಾಡಿ, 7ನೇ ತರಗತಿ ಉತ್ತೀರ್ಣರಾಗಿ 8ನೇ ತರಗತಿಯಿಂದ ವಂಚಿತರಾದ ಮಕ್ಕಳನ್ನು ಅನುಪಾಲನೆ ಮಾಡುವುದರ ಮೂಲಕ ಬಾಲ್ಯವಿವಾಹ ತಡೆಯಬಹುದಾಗಿದೆ ಎಂದು ಸಲಹೆ ನೀಡಿದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಕಾಂತ ಕುಲಕರ್ಣಿ ಬಾಲ್ಯ ವಿವಾಹ ನಿಷೇಧ-2006 ಹಾಗೂ ಕರ್ನಾಟಕ ತಿದ್ದುಪಡಿ ಕಾಯ್ದೆ ಕುರಿತು ವಿವರಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಭರತೇಶ ಶೀಲವಂತರ ತರಬೇತಿ ನೀಡಿದರು.

ಡಿವೈಎಸ್‌ಪಿ ಯು. ಶರಣಪ್ಪ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಠ್ಠಲ್‌ ಮದೂರ, ಜಿಲ್ಲಾ ಬಾಲ್ಯವಿವಾಹ ತಡೆ ಮತ್ತು ಸಮನ್ವಯ ಸಮಿತಿ ಸದಸ್ಯ ಫಾದರ್‌ಜೀ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಗುರುಲಿಂಗಪ್ಪ ಮಿಣಜಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ್‌ ಬಿರಾದಾರ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ರಾಜೇಂದ್ರ ನಿರೂಪಿಸಿದರು. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಜಿಲ್ಲಾ ಸಂಯೋಜಕ ಕೆ. ಯಲ್ಲಪ್ಪ ಸ್ವಾಗತಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚಂದ್ರಕಾಂತ ಚಲುವಾದಿ ವಂದಿಸಿದರು.

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.