ತಾಪಮಾನ ಹೆಚ್ಚಾಗದಂತೆ ತಡೆಯಿರಿ


Team Udayavani, Oct 27, 2018, 5:12 PM IST

cta-2.jpg

ಹೊಳಲ್ಕೆರೆ: ಭೂಮಿಯ ಮೇಲೆ ಹೆಚ್ಚುತ್ತಿರುವ ತಾಪಮಾನದ ಪರಿಣಾಮ ಪ್ರಕೃತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ನೀರು ಸೇರಿದಂತೆ ಎಲ್ಲ ಆಂಶಗಳು ಕಲುಷಿತಗೊಳ್ಳುತ್ತಿವೆ ಎಂದು ಚಿತ್ರದುರ್ಗದ ನಬಾರ್ಡ್‌ ಎಲ್‌ಡಿಎಂ ಮಾಲಿನಿ ಹೇಳಿದರು.

ತಾಲೂಕಿನ ಅವಿನಹಟ್ಟಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಯೋಜಿಸಿದ್ಧ ಶುದ್ಧ ಗಂಗಾ ನೀರಿನ ಮಹತ್ವ ಹಾಗೂ ಸೃಜನಶೀಲಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಭೂಮಿಯೇ ಆಶುದ್ಧಗೊಳ್ಳುತ್ತಿದೆ. ಹಾಗಾಗಿ ಶುದ್ಧ ನೀರನ್ನು ಪಡೆದುಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ. ನೀರಿದ್ದರೂ ಹಲವಾರು ಕಾರಣಗಳಿಂದ ಆಶುದ್ಧಗೊಂಡು ಕುಡಿಯುಲು ಯಾಗ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜನರಿಗೆ ಶುದ್ಧ ನೀರು ಪೂರೈಸಲು ಶುದ್ಧ ಗಂಗಾ ಯೋಜನೆ ಜಾರಿಗೆ ತರಲಾಗಿದೆ. ಜನರು ಸದ್ಭಳಕೆ ಮಾಡಿಕೊಂಡು ಶುದ್ಧ ನೀರು ಸೇವಿಸಬೇಕು ಎಂದರು.

ಯೋಜನೆಯ ಜಿಲ್ಲಾ ನಿರ್ದೇಶಕ ಬಿ. ಗಣೇಶ್‌ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿರುವ ಜನರಿಗೆ ಶುದ್ಧ ನೀರಿನ ಸೌಲಭ್ಯ ಕಲ್ಪಿಸಲು ಶುದ್ಧಗಂಗಾ ಯೋಜನೆಯಡಿ ನೀರಿನ ಘಟಕಗಳನ್ನು ಆಳವಡಿಸಿ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಶ್ರಮಿಸುತ್ತಿದೆ ಎಂದು ಹೇಳಿದರು. 

ಗ್ರಾಮೀಣ ಭಾಗದಲ್ಲಿರುವ ಜನರಿಗೆ ಕುಡಿಯುವ ನೀರಿಲ್ಲದೆ ಹಾಹಾಕಾರ ಉಂಟಾಗಿದೆ. ಅಂತಂಹ ಸಮಯದಲ್ಲಿ ಸಿಕ್ಕಸಿಕ್ಕ ನೀರು ಕುಡಿದು ಮಾರಕ ರೋಗಕ್ಕೆ ಹಲವಾರು ಜನರು ಬಲಿಯಾಗಿರುವ ನಿರ್ದಶನಗಳು ಸಾಕಷ್ಟಿವೆ. ಶುದ್ಧ ನೀರಿಲ್ಲದೆ ಜನರು ಆಶುದ್ಧ ನೀರು ಕುಡಿದು ಬದುಕು ಕಟ್ಟಿಕೊಳ್ಳುವ ಸ್ಥಿತಿಯಿಂದ ಮುಕ್ತಿ ನೀಡಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಶುದ್ಧ ನೀರಿನ ಘಟಕಗಳನ್ನು ಆರಂಭಿಸಲಾಗಿದೆ. ಜನರು ಶುದ್ಧ ನೀರು ಕುಡಿದು ಆರೋಗ್ಯವಂತರಾಗಬೇಕು ಎಂದರು.

ತಾಲೂಕು ಯೋಜನಾ ಧಿಕಾರಿ ಮಾದಪ್ಪ ಮಾತನಾಡಿ, ನೀರಿಲ್ಲದೆ ಹಾಹಾಕಾರ ಅನುಭವಿಸುತ್ತಿದ್ದ ಜನರಿಗೆ ನೀರಿನ ಜತೆ ಆರೋಗ್ಯ ತಪಾಸಣೆ ಶಿಬಿರ, ಪೌಷ್ಟಿಕಾಂಶಯುತ್ತ ಆಹಾರದ ಮಾಹಿತಿ, ಸಾಂಕ್ರಾಮಿಕ ರೋಗಗಳ ವಿರುದ್ಧ ಜಾಗೃತಿ ಶಿಬಿರಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜ್ಞಾನ ವಿಕಾಸ ಸಮನ್ವಯಾಧಿಕಾರಿ ದ್ಯಾಮಕ್ಕ ಮಾತನಾಡಿ, ಅವಿನಹಟ್ಟಿ ಹಾಗೂ ಎಮ್ಮಿಹಟ್ಟಿಯಲ್ಲಿರುವ ಎಲ್ಲಾ ಕುಟುಂಬಗಳಿಗೂ ಶುದ್ಧ ನೀರಿನ ಮಹತ್ವ ತಿಳಿಸಿದೆ. ಜತೆಗೆ ನೀರು ಸಂಗ್ರಹಿಸಲು ಉಚಿತವಾಗಿ ಕ್ಯಾನ್‌ಗಳನ್ನು ವಿತರಿಸಲಾಗಿದೆ. ಜನರು ಯೋಜನೆಯ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರೋಗ್ಯವಂತರಾಗಬೇಕು ಎಂದರು.

ಗ್ರಾಪಂ ಸದಸ್ಯ ಪಿ.ಸಿ. ರಾಮಚಂದ್ರಪ್ಪ, ಸುರ್ವಣಮ್ಮ, ಒಕ್ಕೂಟದ ಅಧ್ಯಕ್ಷ ರಂಗಸ್ವಾಮಿ, ಸೇವಾ ಪ್ರತಿನಿಧಿ  ಆಶೋಕ್‌, ರಂಗಸ್ವಾಮಿ, ಅವಿನಹಟ್ಟಿ ಹಾಗೂ ಎಮ್ಮೆಹಟ್ಟಿನ ಗ್ರಾಮಸ್ಥರು ಇದ್ದರು.  

ಟಾಪ್ ನ್ಯೂಸ್

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.