ನಾನು ಅಷ್ಟು ಸುಲಭವಾಗಿ ಸಾಯಲ್ಲ: ಎಚ್ಡಿಕೆ
Team Udayavani, Oct 29, 2018, 6:00 AM IST
ಶಿರಾಳಕೊಪ್ಪ: “ನಾನು ಅಷ್ಟು ಸುಲಭವಾಗಿ ಸಾಯುವುದಿಲ್ಲ. ಈ ರಾಜ್ಯದ ಜನರ ಸೇವೆ ಮಾಡಲು ನನಗೆ ಎರಡನೇ ಬಾರಿ ಜೀವ ಬಂದಾಗಿದೆ. ನನ್ನ ಆರೋಗ್ಯದ ವಿಚಾರದಲ್ಲಿ ಕೆ.ಎಸ್.ಈಶ್ವರಪ್ಪ ಸಲಹೆ ನೀಡಿದ್ದಾರೆ. ಅದನ್ನು ನಾನು ಸ್ವಾಗತಿಸುತ್ತೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಸಮೀಪದ ಮಂಚಿಕೊಪ್ಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಜೀವನದಲ್ಲಿ ಸಾಕಷ್ಟು ಘಟನೆಗಳು ನಡೆದಿವೆ. ನನಗಾದ ನೋವನ್ನು ರಾಜ್ಯದ ಜನರ ಬಳಿ ತೋಡಿಕೊಂಡಿದ್ದೇನೆ. ಆ ಸಂದರ್ಭದಲ್ಲಿ ನನ್ನ ಜತೆ ಇದ್ದ ಬಸವರಾಜ ಹೊರಟ್ಟಿ ಹಾಗೂ ಪುಟ್ಟರಾಜು ಅವರಿಗೆ ಮಾತ್ರ ನನಗೆ ಏನಾಗಿತ್ತು ಎಂಬುದು ಗೊತ್ತು’ ಎಂದರು. “ನಾನು ರಾಜ್ಯದ ರೈತರ ಸಾಲಮನ್ನಾ ಮಾಡುವುದಿಲ್ಲ
ಎಂದು ಎಲ್ಲಿಯೂ ಹೇಳಿಲ್ಲ. ಈಗಾಗಲೇ ಸಹಕಾರ ಬ್ಯಾಂಕಿನಲ್ಲಿರುವ ರಾಜ್ಯದ ರೈತರ ಸಾಲವನ್ನು ಮನ್ನಾ ಮಾಡಿದ್ದೇನೆ. ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಕೂಡ ಮನ್ನಾ ಮಾಡಲಾಗಿದೆ. ನ.1ರಂದು ರಾಜ್ಯದ ರೈತರಿಗೆ ಋಣಮುಕ್ತ ಪತ್ರವನ್ನು ಕಳುಹಿಸಲಾಗುತ್ತಿದೆ. ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಾಲಮನ್ನಾ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ.
ಈಗಾಗಲೇ ರಾಷ್ಟ್ರೀಕೃತ ಬ್ಯಾಂಕುಗಳ ಜತೆ ಮಾತುಕತೆ ನಡೆಸಲಾಗಿದ್ದು, ಮುಂದಿನ ತಿಂಗಳ ಒಂದರಿಂದ ರಾಜ್ಯದ ಎಲ್ಲ ರೈತರಿಗೆ ಸಾಲಮನ್ನಾದ ಆದೇಶವನ್ನು ಕಳುಹಿಸಲಾಗುತ್ತಿದೆ’ ಎಂದರು. ಇಸ್ರೇಲ್‌ಗೆ ಪ್ರವಾಸಕ್ಕೆಂದು ಹೋಗಿರಲಿಲ್ಲ. ಅಲ್ಲಿಯ ಕೃಷಿ ಪದಟಛಿತಿಯನ್ನು ಅಧ್ಯಯನ ಮಾಡಿ, ರಾಜ್ಯದಲ್ಲಿ ಅಳವಡಿಸಲು ಹೋಗಿದ್ದೆ. ಇಸ್ರೇಲ್ ಪದಟಛಿತಿಯನ್ನು ನಮ್ಮ ರೈತರು ಅಳವಡಿಸಿಕೊಂಡರೆ ಅವರಿಗೆ ಕೃಷಿಯಲ್ಲಿ ಹೆಚ್ಚಿನ ಆದಾಯ ಬರುತ್ತದೆ ಎಂದು ಅಭಿಪ್ರಾಯಪಟ್ಟರು.
ಶಾಸಕಾಂಗ ಪಕ್ಷದ ನಾಯಕರಾಗಿರುವ ಯಡಿಯೂರಪ್ಪ ಸದನದಲ್ಲಿ ಯಾವ ರೀತಿಯ ಭಾಷೆ ಬಳಸಿದ್ದರು ಎಂಬುದನ್ನು ಬಿಜೆಪಿಯವರು ನೆನಪಿಸಿಕೊಳ್ಳಲಿ. ಈಶ್ವರಪ್ಪ ಮೊದಲು ಯಡಿಯೂರಪ್ಪಗೆ ಬುದ್ಧಿ ಹೇಳಲಿ. ನಂತರ, ನಾನು ಸಿದ್ದರಾಮಯ್ಯ ಅವರ ಜತೆ ಮಾತನಾಡುತ್ತೇನೆ.
● ಎಚ್.ಡಿ.ಕುಮಾರಸ್ವಾಮಿ, ಸಿಎಂ.
ಕುಮಾರಸ್ವಾಮಿ ಸಾಯೋ ಮಾತಾಡಬಾರದು
ಶಿವಮೊಗ್ಗ: “ಸಿಎಂ ಕುಮಾರಸ್ವಾಮಿ ಅವರ ಮೇಲೆ ನನಗೆ ವಿಶ್ವಾಸವಿದೆ. ಅವರು ಇನ್ನಷ್ಟು ಹೆಚ್ಚು ಕಾಲ ಬದುಕಲಿ. ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿ’ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಸಲಹೆ ನೀಡಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕುಮಾರಸ್ವಾಮಿಗೆ ಬರೆದ ಪತ್ರ ಬಿಡುಗಡೆ ಮಾಡಿದರು. “ಇಸ್ರೇಲ್‌ನಿಂದ ಬರುವಾಗ ಸಾಯುತ್ತಿದ್ದೆ ಎಂದು ಕುಮಾರಸ್ವಾಮಿ ಅವರು ಹೇಳಿರುವುದು ನನಗೆ ನೋವು ತಂದಿದೆ. ಅವರು ಈ ರೀತಿ ಹೇಳಿಕೆ ಕೊಡಬಾರದು. ರೈತರಿಗೆ,
ಸಾರ್ವಜನಿಕರಿಗೆ ಆತ್ಮಸ್ಥೈರ್ಯ ತುಂಬಬೇಕು. ಸಾಲ ಮನ್ನಾ ಮಾಡಲಿ. ಆಗ ಜನರೇ ನಿಮಗೆ ಆಶೀರ್ವಾದ ಮಾಡುತ್ತಾರೆ. ಇನ್ನು 20, 30 ವರ್ಷಗಳ ಕಾಲ ಬಾಳಿ ಬದುಕಲಿ’ ಎಂದರು.
ಕುಮಾರಸ್ವಾಮಿ ಶಿವಮೊಗ್ಗಕ್ಕೆ ಬರುತ್ತಿರುವುದು ಸಂತೋಷದ ವಿಷಯ. ಅವರು ಇಲ್ಲಿಂದ ಹೊರಡುವಷ್ಟರಲ್ಲಿ ನನ್ನ ಬಹಿರಂಗ ಪತ್ರಕ್ಕೆ ಸಾಧ್ಯವಾದರೆ ಉತ್ತರ ಕೊಟ್ಟರೆ ಸಂತೋಷ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು ಎರಡು ತಿಂಗಳಾಗಿದೆ. ಈವರೆಗೂ ಮೇಯರ್,ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಆಗಿಲ್ಲ. ತಕ್ಷಣ ಚುನಾವಣೆ ನಡೆಸಬೇಕೆಂದು ಒತ್ತಾಯಿಸುತ್ತೇನೆ ಎಂದರು.
ಕಣ್ಣೀರು ಹಾಕೋ ಮುಖ್ಯಮಂತ್ರಿ ಬೇಡ
ಶಿರಾಳಕೊಪ್ಪ: ರಾಜ್ಯಕ್ಕೆ ಬಡವರ ಕಣ್ಣೀರು ಒರೆಸುವ ಮುಖ್ಯಮಂತ್ರಿ ಬೇಕೇ ವಿನಃ ಕಣ್ಣೀರು ಸುರಿಸುವ ಮುಖ್ಯಮಂತ್ರಿ ಬೇಡ ಎಂದು ಮಾಜಿ ಸಚಿವ, ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು. ಪಟ್ಟಣದ ಛತ್ರದಹಳ್ಳಿಯ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ಹೋದ ಕಡೆಯಲ್ಲೆಲ್ಲಾ ಕಣ್ಣೀರು ಹಾಕುತ್ತಾರೆ. ಆದರೆ, ರಾಜ್ಯಕ್ಕೆ ಬಡವರ ಕಣ್ಣೀರು ಒರೆಸುವ ಮುಖ್ಯಮಂತ್ರಿ ಬೇಕೇ ವಿನಃ ಕಣ್ಣೀರು ಸುರಿಸುವ ಮುಖ್ಯಮಂತ್ರಿಯಲ್ಲ ಎಂದರು. ರೈತರ ಸಾಲಮನ್ನಾ ಮಾಡಿದ್ದೇವೆ ಎಂದು ಸರ್ಕಾರ ಸುಳ್ಳು ಪ್ರಚಾರ ಮಾಡುತ್ತಿದೆ. ಇದುವರೆಗೂ ಯಾವುದೇ ಸಾಲಮನ್ನಾ ಆಗಿಲ್ಲ. ರೈತರಿಗೆ ಕುಮಾರಸ್ವಾಮಿ ಸರ್ಕಾರ ಮಕ್ಮಲ್ ಟೋಪಿ ಹಾಕುವ ಕೆಲಸ ಮಾಡುತ್ತಿದೆ. ಲೋಕಸಭೆ ಉಪ ಚುನಾವಣೆ ಮುಗಿದು ಒಂದು ತಿಂಗಳಿನಲ್ಲಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.