ರಾಜಕೀಯ ಗುರು, ಶಿಷ್ಯರ ಜಂಟಿ ಪ್ರಚಾರ
Team Udayavani, Oct 30, 2018, 6:00 AM IST
ಕೂಡ್ಲಿಗಿ: ಉಪಚುನಾವಣೆ ಘೋಷಣೆಯಾದ ನಂತರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಒಗ್ಗಟ್ಟು ಪ್ರದರ್ಶಿಸಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸೋಮವಾರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಮೈತ್ರಿ ಪಕ್ಷಗಳ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಪರ ಪ್ರಚಾರ ಮಾಡಿದ್ದಾರೆ. ಬಳ್ಳಾರಿ ಜಿಲ್ಲೆ ಕೂಡ್ಲಿಗಿಯಲ್ಲಿ ಸೋಮವಾರ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಬಹಿರಂಗ ಸಭೆ ಆಯೋಜಿಸ ಲಾಗಿತ್ತು. ಬಹಳ ವರ್ಷಗಳ ನಂತರ ರಾಜಕೀಯದ ಗುರು- ಶಿಷ್ಯರು ಇಂತಹ ಬಹಿರಂಗ ಸಭೆ
ಯಲ್ಲಿ ಒಟ್ಟೊಟ್ಟಿಗೆ ಪಾಲ್ಗೊಂಡು ಜನರ ಅಚ್ಚರಿಗೆ ಕಾರಣರಾದರು.
ಇಬ್ಬರೂ ಸೇರಿ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿದರು. ಅಲ್ಲದೆ ಉತ್ತಮ ಆಡಳಿತಕ್ಕೆ ಮೈತ್ರಿ ಪಕ್ಷಗಳ ಅಭ್ಯರ್ಥಿಯನ್ನು ಬೆಂಬಲಿಸಿ ಎಂದರು. ಸಭೆಯಲ್ಲಿ ಮಾತನಾಡಿದ ದೇವೇಗೌಡ “ರಾಜಕೀಯವಾಗಿ ಸಿದ್ದರಾಮಯ್ಯ ಹಾಗೂ ದೇವೇಗೌಡರು ಮೊದಲು ಹೊಡೆದಾಡಿದ್ದರೂ ಈಗೇನು ಒಂದೇ ವೇದಿಕೆಯಲ್ಲಿ ಸೇರಿಕೊಂಡಿದ್ದಾರೆ ಎಂದು ತಪ್ಪು ಭಾವಿಸಬೇಡಿ. ನನಗೆ ಪ್ರತಿಷ್ಠೆ ಇಲ್ಲ, ಈ ದೇಶದ ಭವಿಷ್ಯದ ದೃಷ್ಟಿಯಿಂದ ಜೊತೆಯಾಗಿದ್ದೇವೆ’ ಎಂದರು. ಈ ಉಪ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆದ್ದರೆ ಹಿಂದೂಸ್ತಾನದ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ. ಈ ಚುನಾವಣೆ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು, ಕೇಂದ್ರದಲ್ಲಿಯೂ ಮುಂದೆ ಮೈತ್ರಿ ಸರ್ಕಾರವೇ ಆಡಳಿತ ನಡೆಸೋದು ಶತಸಿದಟಛಿ ಎಂದರು. ಸಿದ್ದರಾಮಯ್ಯ ಸರ್ಕಾರ 5 ವರ್ಷ ಜನಪರ ಕಾರ್ಯಕ್ರಮ ನೀಡಿದೆ. ಇದನ್ನು ಜನತೆ ಮರೆತಿಲ್ಲ. ಹೀಗಾಗಿ ಈ ಉಪಚುನಾವಣೆಗಳಲ್ಲಿ ಸಿದ್ದರಾಮಯ್ಯ ಸರ್ಕಾರದ ಯೋಜನೆ ಹಾಗೂ ಸಾಧನೆಗಳನ್ನೇ ಮುಂದಿಟ್ಟು ಪ್ರಚಾರ ನಡೆಸಲಾಗುತ್ತಿದೆ. ನಾವು ಗೆಲ್ಲುತ್ತೇವೆಂಬ ವಿಶ್ವಾಸವಿದೆ ಎಂದರು. ವಿಧಾನಸಭೆ ಮುಂಭಾಗದಲ್ಲಿ ವಾಲ್ಮೀಕಿ ಪುತ್ಥಳಿ ನಿರ್ಮಿಸಲು ಸಿದ್ದರಾಮಯ್ಯ ಸರ್ಕಾರದಲ್ಲಿ ಉಗ್ರಪ್ಪ ಮಹತ್ವದ ಪಾತ್ರ ವಹಿಸಿದ್ದಾರೆ. ಉಗ್ರಪ್ಪ ಉತ್ತಮ ರಾಟಗಾರರಾಗಿದ್ದು, ಇಂತಹವರನ್ನು ಗೆಲ್ಲಿ ಸುವ ಮೂಲಕ ಮೈತ್ರಿ ಸರ್ಕಾರಕ್ಕೆ ಮತ್ತಷ್ಟು ಬಲ ತುಂಬಬೇಕು ಎಂದು ಕರೆ ನೀಡಿದರು.
ಗೌರವ ಕೊಡುವುದು ನನ್ನ ಧರ್ಮ ದೇವೇಗೌಡರು ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ “ಅಜಾನ್’ ಕೂಗಿದಾಗ ದೇವೇಗೌಡರು ಭಾಷಣ ನಿಲ್ಲಿಸಿ 3 ನಿಮಿಷ ಮೌನಕ್ಕೆ ಶರಣಾದರು. ನಂತರ ಮಾತು ಪ್ರಾರಂಭಿಸಿ ಯಾವುದೇ ಧರ್ಮದ ಪ್ರಾರ್ಥನೆ ನಡೆದರೂ ಅದಕ್ಕೆ ಗೌರವ ಕೊಡುವುದು ನನ್ನ ಧರ್ಮ ಎಂದು ತಮ್ಮ ಜಾತ್ಯತೀತ ನಿಲುವು ಪ್ರದರ್ಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.