ಹತ್ತು ದಿನಗಳಲ್ಲಿ ಸಾಲ ಮನ್ನಾ ಮಾಡದಿದ್ರೆ ಸಿಎಂ ಬದಲಿಸುವೆ

Team Udayavani, Oct 30, 2018, 8:53 AM IST

rahul.png

ಉಜ್ಜೆ„ನಿ/ಇಂದೋರ್‌: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಹತ್ತು ದಿನಗಳ ಒಳಗಾಗಿ ರೈತರ ಸಾಲಮನ್ನಾ ಮಾಡುತ್ತೇವೆ. ಇಲ್ಲದೇ ಇದ್ದರೆ ಮುಖ್ಯಮಂತ್ರಿಯನ್ನೇ ಬದಲು ಮಾಡುತ್ತೇವೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಸೋಮವಾರ ಘೋಷಣೆ ಮಾಡಿದ್ದಾರೆ. 2 ದಿನಗಳ ಪ್ರವಾಸಕ್ಕಾಗಿ ಮಧ್ಯ ಪ್ರದೇಶಕ್ಕೆ ಆಗಮಿಸಿರುವ ಅವರು ಉಜ್ಜೆ„ನಿಯ ಮಹಾಕಾಲೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. 

“ಸುಳ್ಳು ಭರವಸೆ ನೀಡಲು ನಾನು ಇಲ್ಲಿಗೆ ಬಂದಿಲ್ಲ. ಕರ್ನಾಟಕ ಮತ್ತು ಪಂಜಾಬ್‌ನಲ್ಲಿ ರೈತರ ಸಾಲಮನ್ನಾ ಮಾಡುವ ವಾಗ್ಧಾನ ಮಾಡಿ, ಅದನ್ನು ಪೂರೈಸಿದ್ದೇವೆ. ಅದೇ ಮಾದರಿಯ ನಿಲುವನ್ನು ಮಧ್ಯಪ್ರದೇಶದಲ್ಲಿಯೂ ಕೈಗೊಳ್ಳಲಿದ್ದೇವೆ’ ಎಂದಿದ್ದಾರೆ. ಕಾಂಗ್ರೆಸ್‌ ನೇತೃತ್ವದ ಸರಕಾರದ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದ ಹತ್ತು ದಿನಗಳಲ್ಲಿ ಸಾಲ ಮನ್ನಾ ಜಾರಿ ಮಾಡದೇ ಇದ್ದರೆ, ಅವರನ್ನೇ ಬದಲು ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. 

ಪ್ರಧಾನಿ ತಪ್ಪು: ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ತಪ್ಪು ನಿರ್ಧಾರಗಳಿಂದ ಜಮ್ಮು ಮತ್ತು ಕಾಶ್ಮೀರ ಹೊತ್ತಿ ಉರಿಯುತ್ತಿದೆ. ಸಮಾನ ಹುದ್ದೆ; ಸಮಾನ ಪಿಂಚಣಿಯನ್ನು ಜಾರಿ ಮಾಡಲಾಗಿಲ್ಲ. ಈ ಬಗ್ಗೆ ಪ್ರಧಾನಿ ಸುಳ್ಳು ಹೇಳು ತ್ತಿದ್ದಾರೆ ಎಂದಿದ್ದಾರೆ. ರಫೇಲ್‌ ಡೀಲ್‌, ಪಿಎನ್‌ಬಿ ಹಗರಣದ ಬಗ್ಗೆಯೂ ರಾಹುಲ್‌ ಟೀಕಿಸಿದ್ದಾರೆ. 

ನಿಮ್ಮ ಗೋತ್ರವೇನು?: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮಹಾಕಾಲೇಶ್ವರ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ ಕ್ರಮನ್ನು ಟೀಕಿಸಿರುವ ಬಿಜೆಪಿ, “ಕಾಂಗ್ರೆಸ್‌ ಅಧ್ಯಕ್ಷರ ಗೋತ್ರವೇನು?’ ಎಂದು ಪ್ರಶ್ನಿಸಿದೆ. “ಜನಿವಾರ ಧರಿಸಿ ರಾಹುಲ್‌ ಗಾಂಧಿ ದೇಗುಲಕ್ಕೆ ಭೇಟಿ ನೀಡುತ್ತಿದ್ದಾರೆ. ಅವರು ಯಾವ ರೀತಿಯ ಜನಿವಾರ ಧಾರಿ? ಅವರ ಗೋತ್ರವೇನು?’ ಎಂದು ಪಕ್ಷದ ವಕ್ತಾರ ಸಂಬಿತ್‌ ಪಾತ್ರಾ ಪ್ರಶ್ನಿಸಿದ್ದಾರೆ. ಇದರ ಜತೆಗೆ ರಾಹುಲ್‌ ಹಿಂದೂ ಧರ್ಮವನ್ನು ತಮಾಷೆಯ ವಸ್ತುವನ್ನಾಗಿ ತಿಳಿದು ಕೊಂಡಿದ್ದಾರೆ. ತಮ್ಮ ವೇಷದ ಮೂಲಕ ಹಿಂದೂಗಳನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದೂ ಪಾತ್ರಾ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕಿ ಮೃತ್ಯು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MH-Govt-Gov

Mahayuti Claim: ಮಹಾರಾಷ್ಟ್ರಕ್ಕಾಗಿ ನಾವು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ: ಫಡ್ನವೀಸ್

8-panaji

Panaji: ಸಂತ ಫ್ರಾನ್ಸಿಸ್ ಜೇವಿಯರ್ ಹಬ್ಬ ಆಚರಣೆ

Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿ ಸೇರಿ ಮೂವರ ಹತ್ಯೆ

Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Kasaragod: ಮೀನು ಹಿಡಿಯುತ್ತಿದ್ದ ಯುವಕ ಸಮುದ್ರ ಪಾಲು

Kasaragod: ಮೀನು ಹಿಡಿಯುತ್ತಿದ್ದ ಯುವಕ ಸಮುದ್ರ ಪಾಲು

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.