ಸುಪ್ರೀಂ ಪಟಾಕಿ ಆದೇಶ: ತಮಿಳುನಾಡಿಗೆ ರಿಲ್ಯಾಕ್ಸ್
Team Udayavani, Oct 31, 2018, 9:30 AM IST
ಹೊಸದಿಲ್ಲಿ: ದೀಪಾವಳಿ ಮತ್ತು ಇತರೆ ಹಬ್ಬಗಳಲ್ಲಿ ಪಟಾಕಿಗಳನ್ನು ಸಿಡಿಸಲು ರಾತ್ರಿ 8ರಿಂದ 10ರವರೆಗೆ ಸಮಯ ನಿಗದಿಪಡಿಸಿದ್ದ ಸುಪ್ರೀಂ ಕೋರ್ಟ್ ಮಂಗಳವಾರ ತನ್ನ ಆದೇಶದಲ್ಲಿ ಸ್ವಲ್ಪಮಟ್ಟಿಗೆ ಬದಲಾವಣೆ ತಂದಿದೆ. ಪಟಾಕಿ ಸಿಡಿಸುವ ಸಮಯವನ್ನು ಬದಲಿಸಲು ಆಯಾ ರಾಜ್ಯಗಳಿಗೆ ಅವಕಾಶವಿರುತ್ತದೆ. ಆದರೆ, 2 ಗಂಟೆಯ ಕಾಲಮಿತಿ ಮಾತ್ರ ಎಲ್ಲರಿಗೂ ಅನ್ವಯ ಎಂದು ಕೋರ್ಟ್ ಹೇಳಿದೆ.
ದೀಪಾವಳಿಯಂದು ಬೆಳಗ್ಗೆಯೇ ಸುಡುಮದ್ದು ಸುಡುವುದು ದಕ್ಷಿಣದ ರಾಜ್ಯಗಳ ಜನರ ಸಂಪ್ರದಾಯವಾಗಿರುವ ಕಾರಣ, ಆದೇಶವನ್ನು ಸಡಿಲಿಸಬೇಕು ಎಂದು ಕೋರಿ ತಮಿಳುನಾಡು ಸರಕಾರ ಸೋಮವಾರ ಅರ್ಜಿ ಸಲ್ಲಿಸಿತ್ತು. ಅದರ ವಿಚಾರಣೆ ನಡೆಸಿದ ನ್ಯಾಯಪೀಠ, ತಮಿಳುನಾಡು, ಪುದುಚೇರಿ ಸೇರಿದಂತೆ ರಾಜ್ಯಗಳಲ್ಲಿ ತಮಗಿಷ್ಟ ಬಂದ ಅವಧಿಯಲ್ಲಿ ಪಟಾಕಿ ಸಿಡಿಸಲು ಅವಕಾಶ ನೀಡುತ್ತಿದ್ದೇವೆ. ಆದರೆ, 2 ಗಂಟೆಯ ಮಿತಿ ಮಾತ್ರ ಮೀರುವಂತಿಲ್ಲ ಎಂದಿತು. ಅಲ್ಲದೆ, ಹಸಿರು ಪಟಾಕಿಗಳನ್ನು ಮಾತ್ರವೇ ಮಾರಾಟ ಮಾಡಬೇಕು ಎಂಬ ಆದೇಶವು ಕೇವಲ ದಿಲ್ಲಿ-ಎನ್‌ಸಿಆರ್ ಪ್ರದೇಶಗಳಿಗೆ ಸೀಮಿತವಾಗಿದ್ದು, ಇತರೆ ರಾಜ್ಯಗಳಿಗೆ ಅದು ಅನ್ವಯಿಸುವುದಿಲ್ಲ ಎಂದೂ ಸ್ಪಷ್ಟಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್
ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
MUST WATCH
ಹೊಸ ಸೇರ್ಪಡೆ
BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.