ಶಿವಮೊಗ್ಗ ಲೋಕಸಭಾ ಉಪ ಚುನಾವಣೆ: ಪ್ರತಿಷ್ಠೆಯ ಕಣ


Team Udayavani, Oct 31, 2018, 3:46 PM IST

31-october-15.gif

ಕುಂದಾಪುರ: ಶಿವಮೊಗ್ಗ ಲೋಕಸಭಾ ಉಪಚುನಾವಣೆಗೆ ಅಖಾಡ ಸಿದ್ಧಗೊಂಡಿದೆ. ಕೇವಲ 4-5 ತಿಂಗಳ ಅಧಿಕಾರವಧಿ ಮಾತ್ರವಿದ್ದರೂ, ಪ್ರತಿಷ್ಠೆಯ ಕದನವಾಗಿ ಮಾರ್ಪಟ್ಟ ಈ ಚುನಾವಣೆಯಲ್ಲಿ ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿ ಸರಕಾರ ಹಾಗೂ ವಿಪಕ್ಷ ಬಿಜೆಪಿಯು ತಮ್ಮ – ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲೇ ಬೇಕು ಎನ್ನುವ ಪಣ ತೊಟ್ಟಿದೆ.

ಕಳೆದ 4 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ಬಿ.ಎಸ್‌. ಯಡಿಯೂರಪ್ಪ ಅವರು 2018 ರ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣಕ್ಕೆ ಖಾಲಿಯಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. 2019 ರಲ್ಲಿ ಮತ್ತೆ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಅದಕ್ಕೂ ಮುಂಚಿತವಾಗಿ ನಡೆಯುತ್ತಿರುವ ಸೆಮಿಫೈನಲ್‌ ಹಣಾಹಣಿ ಇದಾಗಿದೆ.

ಮಾಜಿ ಸಿಎಂ ಪುತ್ರರ ಪೈಪೋಟಿ
ಒಂದೆಡೆ ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ, ಮತ್ತೂಂದೆಡೆ ಮತ್ತೋರ್ವ ಮಾಜಿ ಮುಖ್ಯಮಂತ್ರಿ ದಿ| ಎಸ್‌. ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಇನ್ನೊಂದೆಡೆ ರಾಜ್ಯದ ಮತ್ತೂಬ್ಬ ಮಾಜಿ ಸಿಎಂ ಜೆ.ಎಚ್‌. ಪಟೇಲ್‌ ಪುತ್ರ ಮಹೀಮಾ ಪಟೇಲ್‌ ಅವರು ಜೆಡಿಯು ಅಭ್ಯರ್ಥಿಯಾಗಿದ್ದಾರೆ.

ಬಂಗಾರಪ್ಪ – ಯಡಿಯೂರಪ್ಪ ಅವರ ಕುಟುಂಬಗಳ ಕದನ ಕಣವಾಗಿರುವ ಈ ಚುನಾವಣೆಯಲ್ಲಿ ಜಾತಿ ಲೆಕ್ಕಾಚಾರ ಶುರುವಾಗಿದ್ದು, ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿಯು ಈಡಿಗ, ಕುರುಬ, ಒಕ್ಕಲಿಗ, ಮುಸ್ಲಿಂ ಸಹಿತ ಜಾತ್ಯತೀತ ಮತಗಳನ್ನು ನೆಚ್ಚಿಕೊಂಡಿದ್ದರೆ, ಬಿಜೆಪಿ ಬಹುಸಂಖ್ಯಾತ ಲಿಂಗಾಯತ, ಬ್ರಾಹ್ಮಣ, ಜತೆಗೆ ತನ್ನ ಸಾಂಪ್ರದಾಯಿಕ ಮತಗಳನ್ನು ನಂಬಿಕೊಂಡಿದೆ.

ಪ್ರಭಾವಿಗಳಿಂದ ಪ್ರಚಾರ 
ಶಿವಮೊಗ್ಗ ಲೋಕಸಭೆ ವ್ಯಾಪ್ತಿಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರವು ಸೇರಿಕೊಂಡಿದ್ದು, ಈ ಭಾಗದಲ್ಲಿ ಜೆಡಿಎಸ್‌ ಅಷ್ಟೇನೂ ಪ್ರಭಾವವಿಲ್ಲದೆ ಇರುವುದರಿಂದ ಬೈಂದೂರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇಲ್ಲದಿದ್ದರೂ, ಇಲ್ಲಿ ಕಾಂಗ್ರೆಸ್‌ – ಬಿಜೆಪಿ ನಡುವಿನ ಕದನವಾಗಿ ಕೌತುಕವನ್ನು ಹೆಚ್ಚಿಸಿದೆ. ಇದಿಷ್ಟೇ ಅಲ್ಲದೇ ಬಿಜೆಪಿ ಪರ ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸಹಿತ ಅನೇಕ ಘಟಾನುಘಟಿಗಳು ಪ್ರಚಾರಕ್ಕಿಳಿದರೆ, ಮಧು ಬಂಗಾರಪ್ಪ ಪರ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ವೀರಪ್ಪ ಮೊಯಿಲಿ, ಸಹಿತ ಅನೇಕ ಪ್ರಭಾವಿ ಸಚಿವರು ಮತಯಾಚನೆಗೆ ಬಂದಿದ್ದರು. 

ಬೈಂದೂರಲ್ಲಿಯೇ ಅಧಿಕ ಮುನ್ನಡೆ
2014 ರ ಲೋಕಸಭಾ ಚುನಾವಣೆಯಲ್ಲಿ ಬಿಎಸ್‌ವೈ 6,06,216 ಮತ ಪಡೆದು, ಕಾಂಗ್ರೆಸ್‌ನ ಮಂಜುನಾಥ್‌ ಭಂಡಾರಿಯವರನ್ನು 3,63,305 ಮತಗಳ ಅಂತರದಿಂದ ಸೋಲಿಸಿದ್ದರು. ಜೆಡಿಎಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ 2,40,636 ಮತ ಪಡೆದಿದ್ದರು. ಮತಗಳಿಕೆಯಲ್ಲಿ ಬೈಂದೂರಲ್ಲಿ ಬಿಜೆಪಿ 91,163 ಮತ ಪಡೆದು ಕಾಂಗ್ರೆಸ್‌ಗಿಂತ (44,428 ಪಡೆದ ಮತ), 46,735 ಮತಗಳ ಮುನ್ನಡೆ ಸಾಧಿಸಿತ್ತು. ಇದು ಬಿಜೆಪಿಯು ಇತರೆ 7 ವಿಧಾನಸಭಾ ಕ್ಷೇತ್ರಗಳಿಗಿಂತ ಹೆಚ್ಚಿನ ಅಂತರ ಹಾಗೂ ಮತಗಳನ್ನು ಪಡೆದಂತಾಗಿತ್ತು. 2018 ರ ವಿಧಾನಸಭೆಯಲ್ಲಿ ಬಿಜೆಪಿಯ ಸುಕುಮಾರ್‌ ಶೆಟ್ಟಿ 96,029 ಮತ, ಕಾಂಗ್ರೆಸ್‌ನ ಗೋಪಾಲ ಪೂಜಾರಿ 71,636 ಮತ ಹಾಗೂ ಜೆಡಿಎಸ್‌ನ ರವಿ ಶೆಟ್ಟಿ 1,911 ಮತ ಪಡೆದಿದ್ದರು. ಕಾಂಗ್ರೆಸ್‌ಗಿಂತ ಬಿಜೆಪಿಗೆ 24,393 ಮತಗಳ ಮುನ್ನಡೆ ಸಿಕ್ಕಿತ್ತು.

ಬೈಂದೂರಲ್ಲಿ 50 ಸಾವಿರ ಮುನ್ನಡೆ
ರಾಜ್ಯದಲ್ಲಿ ಅಧಿಕಾರದಲ್ಲಿರುವ ಮೈತ್ರಿ ಸರಕಾರವು ಕರಾವಳಿಯನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಶಾಸಕರಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಮರಳು ಸಮಸ್ಯೆಗೆ ಉತ್ತರ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಪರ ಬೈಂದೂರು ಜನರ ಒಲವು ಹೆಚ್ಚಿದ್ದು, ಬಿ.ವೈ. ರಾಘವೇಂದ್ರ ಅವರಿಗೆ ಬೈಂದೂರು ಕ್ಷೇತ್ರವೊಂದರಲ್ಲಿಯೇ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಮುನ್ನಡೆ ಸಿಗುತ್ತದೆ ಎನ್ನುವ ವಿಶ್ವಾಸವಿದೆ.
ಬಿ.ಎಂ. ಸುಕುಮಾರ್‌ ಶೆಟ್ಟಿ,
ಬೈಂದೂರು ಶಾಸಕರು

15ರಿಂದ 20 ಸಾವಿರ ಮುನ್ನಡೆ
ಹಿಂದೆ ಶಾಸಕನಾಗಿದ್ದಾಗ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದೇನೆ. ಈಗಿನ ಶಾಸಕರ ಆಡಳಿತ ಬಗ್ಗೆ ಇಲ್ಲಿನ ಜನ ಭ್ರಮನಿರಸನಗೊಂಡಿದ್ದಾರೆ. ರಾಜ್ಯ ಸರಕಾರ ಉತ್ತಮ ಕಾರ್ಯ ಮಾಡುತ್ತಿದ್ದು, ರೈತರ ಸಾಲಮನ್ನಾ ಮಾಡಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರು ಮೈತ್ರಿ ಸರಕಾರದ ಒಮ್ಮತದ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಬೆಂಬಲಿಸಲಿದ್ದು, ಬೈಂದೂರಲ್ಲಿ ಕನಿಷ್ಠ 15 ರಿಂದ 20 ಸಾವಿರ ಮುನ್ನಡೆ ಸಿಗಲಿದೆ. 
– ಕೆ. ಗೋಪಾಲ ಪೂಜಾರಿ,
ಬೈಂದೂರಿನ ಮಾಜಿ ಶಾಸಕರು

 ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.