ತುಳು ಸಾಹಿತ್ಯ ಸಮ್ಮೇಳನ: ಅನಾವರಣಗೊಳ್ಳಲಿದೆ ತುಳುನಾಡ ವೈಭವ


Team Udayavani, Nov 1, 2018, 9:55 AM IST

november-1.gif

ನರಿಮೊಗರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತಾಲೂಕು ತುಳು ಸಾಹಿತ್ಯ ಸಮ್ಮೇಳನ ಸಮಿತಿಯ ಆಶ್ರಯದಲ್ಲಿ ನ. 3ರಂದು ಪುತ್ತೂರು ಸುದಾನ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ| ಬಿ.ಎ. ವಿವೇಕ್‌ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಭರದ ಸಿದ್ಧತೆ ನಡೆಯುತ್ತಿದೆ.

ಗ್ರಾಮೀಣ ಪ್ರದೇಶದಲ್ಲಿ ತುಳು ಸಾಹಿತ್ಯ, ಸಂಸ್ಕೃತಿ-ರಂಗಭೂಮಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಸಾಧಕರ ಗುರುತಿ ಸುವಿಕೆ, ತುಳು ಭಾಷೆ ಲಿಖಿತ ಸಾಹಿತ್ಯದ ಜತೆಯಲ್ಲಿ ಮೌಖಿಕ ಸಾಹಿತ್ಯ ಜಾನಪದ ಸಾಹಿತ್ಯದ ನೆಲೆಗಟ್ಟಿನಲ್ಲಿ ಪ್ರಧಾನವಾಗುತ್ತದೆ. ತುಳು ಜನಪದ ಸಾಹಿತ್ಯದಲ್ಲಿ ಪಾಡ್ಡನ-ಪಾರಿ, ಉರಲ್‌, ಬೀರ, ಸಂಧಿ ಮೊದಲಾದವುಗಳನ್ನು ಉಳಿಸಿಕೊಂಡಿರುವುದು ಗ್ರಾಮೀಣ ಭಾಗದ ಜನರು. ತುಳು ಭಾಷೆಯ ಪ್ರಾಚೀನತೆ, ಹಿರಿಮೆ, ಗರಿಮೆಯನ್ನು ತಿಳಿಸುವ ಲಿಖಿತ ಸಾಹಿತ್ಯಕ್ಕೂ ಮೌಖಿಕ ಸಾಹಿತ್ಯವು ಮೂಲ ಆಕರವಾಗಿ ಸಿಗುತ್ತದೆ.

ಆಧುನಿಕ ಕ್ರೀಡೆಗಳ ಭರಾಟೆಯೊಂದಿಗೆ ತುಳುವರ ಕ್ರೀಡೆಗಳು ಮರೆಯಾಗುತ್ತಿವೆ. ತುಳುವರ ಕ್ರೀಡೆಗಳನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಸಮ್ಮೇಳನದಲ್ಲಿ ‘ತುಳುವೆರೆ ಗೊಬ್ಬಲು’ ಎಂಬ ಪರಿಕಲ್ಪನೆಯಲ್ಲಿ ಅಗೋಳಿ ಮಂಞಣ ಗೊಬ್ಬುದ ಕಲ, (ಕ್ರೀಡಾಂಗಣ)ದಲ್ಲಿ ಲಗೋರಿ, ಜುಬಿಲಿ, ಕಣ್ಣಾಮುಚ್ಚಾಲೆ, ಪಾಲೆಡ್‌ ಒಯ್ಪುನೆ, ಟೈರ್‌ ತಿರುಗಿಸುವುದು, ಗೋಲಿ ಆಟ, ಕಲ್ಲಾಟ ಸ್ಪರ್ಧೆಗಳು ನಡೆಯಲಿದೆ.

ತುಳು ಸಮ್ಮೇಳನದ ಅಂಗವಾಗಿ ಕಿರಿಯ ಪ್ರಾಥಮಿಕ ಶಾಲಾ ಹೆಣ್ಣು ಮಕ್ಕಳಿಗೆ ಕಲ್ಲಾಟ, ಕುಪ್ಪಿಗ್‌ ನೀರ್‌ ದಿಂಜಾವುನೆ, ಹುಡುಗರಿಗೆ ಸೈಕಲ್‌ ಚಕ್ರ, ಪಾಲೆಡ್‌ ಒಯ್ಪುನ, ಪ್ರೌಢಶಾಲಾ ವಿಭಾಗದ ಹುಡುಗಿಯರಿಗೆ ಸೂಜಿ ನೂಲು, ಜುಬಿಲಿ, ಗಂಡು ಮಕ್ಕಳಿಗೆ ಗೋಣಿ ಚೀಲ ಓಟ, ನಾಯಿ ಎಲು, ಮಹಿಳೆಯರಿಗೆ ಚೆನ್ನೆಮಣೆ, ಲಗೋರಿ, ಹಗ್ಗಜಗ್ಗಾಟ, ಪುರುಷರಿಗೆ ಲಗೋರಿ, ಕೊತ್ತಲಿಂಗೆ ಕ್ರಿಕೆಟ್‌, ಹಗ್ಗಜಗ್ಗಾಟ, ವೇಗದ ನಡಿಗೆ ಸ್ಪರ್ಧೆಗಳು ನಡೆದಿವೆ. ಉಜಿರೆಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದಲ್ಲಿ ತುಳುನಾಡ ಶೈಲಿಯ ಊಟೋಹಾಚಾರ ಭಾರೀ ಆಕರ್ಷಣೆ ಹಾಗೂ ಜನಮನ್ನಣೆ ಗಳಿಸಿತ್ತು. ಅದನ್ನೇ ಮಾದರಿಯಾಗಿಟ್ಟುಕೊಂಡು ಇಲ್ಲೂ ಮಾಡಲಾಗುತ್ತದೆ.  ಒಟ್ಟಿನಲ್ಲಿ ತುಳುನಾಡಿನ ಜನರೆಲ್ಲರೂ ತುಳು ಸಾಹಿತ್ಯ ಸಮ್ಮೇಳನದ ಅಪೂರ್ವ ಸನ್ನಿವೇಶವನ್ನು ಸಾರ್ವಜನಿಕರು ಎದುರು ನೋಡುತ್ತಿದ್ದಾರೆ.

8ನೇ ಪರಿಚ್ಛೇದ:ಠರಾವು 
ತುಳು ಸಮ್ಮೇಳನ ಎಲ್ಲ ಜಾತಿ, ಧರ್ಮದವರನ್ನು ಸೇರಿಸಿಕೊಂಡು ವೈವಿಧ್ಯಮಯವಾಗಿ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯುವ ಈ ಸಮ್ಮೇಳನದಲ್ಲಿ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವ ಕುರಿತಾಗಿ ಠರಾವು ಅಂಗೀಕರಿಸಿ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗುವುದು. ಸಾಹಿತ್ಯ ಅಕಾಡೆಮಿ ಹಾಗೂ ತುಳುವರ ಪಾಲ್ಗೊಳ್ಳುವಿಕೆಯಿಂದ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಸವಣೂರು ಕೆ.ಸೀತಾರಾಮ ರೈ ತಿಳಿಸಿದ್ದಾರೆ.

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.