ಸಂಭ್ರಮದ 63ನೇ ರಾಜ್ಯೋತ್ಸವ;ರಾಷ್ಟ್ರಪತಿ,ಪ್ರಧಾನಿಯಿಂದ ಕನ್ನಡ ಶುಭಾಶಯ
Team Udayavani, Nov 1, 2018, 9:59 AM IST
ಬೆಂಗಳೂರು: 63 ನೇ ಕರ್ನಾಟಕದ ರಾಜ್ಯೋತ್ಸವವನ್ನು ಗುರುವಾರ ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕನ್ನಡ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಆರೋಗ್ಯ ತಪಾಸಣಾ ಶಿಬಿರವನ್ನೂ ಉದ್ಘಾಟಿಸಿದರು.
ಸಾವಿರಾರು ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನವನ್ನು ನಡೆಸಲಾಯಿತು.ಕನ್ನಡದ ಸಂಸ್ಕೃತಿ ಬಿಂಬಿಸುವ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.
ಗಡಿನಾಡು ಬೆಳಗಾವಿ ಸೇರಿದಂತೆ ವಿವಿಧೆಡೆ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.
#HappyKarnatakaRajyotsava#Rajyotsava #KarnatakaRajyotsava pic.twitter.com/LIBGvpUJXK
— CM of Karnataka (@CMofKarnataka) November 1, 2018
ರಾಷ್ಟ್ರಪತಿ, ಪ್ರಧಾನಿ ಕನ್ನಡದಲ್ಲೇ ಶುಭಾಶಯ
ಪ್ರದಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರು ಟ್ವೀಟ್ ಮಾಡಿದ್ದು, ರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ ಎಂದು ಶುಭ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.