“ಕೈ’ಗೆ ಕೋಟೆ ಕಟ್ಟುವ ತವಕ, ರಾಮುಲುಗೆ ಅಸ್ತಿತ್ವದ ಸವಾಲು


Team Udayavani, Nov 1, 2018, 10:15 AM IST

b-50.jpg

ಬಳ್ಳಾರಿ: ಹೈವೋಲ್ಟೆಜ್‌ ಚುನಾವಣೆ ಎಂದೇ ಬಿಂಬಿಸಲಾಗುತ್ತಿರುವ ಬಳ್ಳಾರಿ ಲೋಕಸಭೆ ಉಪಚುನಾವಣೆ ಅಲ್ಪಾವಧಿಗೆ ಆಗಿದ್ದರೂ ಸಾರ್ವತ್ರಿಕ ಚುನಾವಣೆಗಿಂತಲೂ ಹೆಚ್ಚು ರಂಗೇರಿದೆ. ಇದನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಏರ್ಪಟ್ಟಿದ್ದು, ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಜಿದ್ದಾಜಿದ್ದಿನ ಹೋರಾಟದಲ್ಲಿ ತೊಡಗಿವೆ. ರಾಜ್ಯದಲ್ಲಿ ನಡೆಯುತ್ತಿರುವ ಮೂರು ಲೋಕಸಭೆ ಕ್ಷೇತ್ರಗಳ ಉಪಚುನಾವಣೆ ಪೈಕಿ ಎರಡು ಕ್ಷೇತ್ರಗಳನ್ನು ಮಿತ್ರಪಕ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್‌, ಗಣಿನಾಡು ಬಳ್ಳಾರಿಯಲ್ಲಿ ಮಾತ್ರ ತನ್ನ ಅಭ್ಯರ್ಥಿ ವಿ.ಎಸ್‌. ಉಗ್ರಪ್ಪ ಅವರನ್ನು ಕಣಕ್ಕಿಳಿಸಿದೆ. ಹಾಗಾಗಿ, ಮಾಜಿ ಸಿಎಂ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ಈ ಚುನಾವಣೆ ಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಇನ್ನು, ತಮ್ಮ ರಾಜೀನಾಮೆಯಿಂದ ಎದುರಾದ ಚುನಾವಣೆ ಆಗಿದ್ದರಿಂದ ಹಾಗೂ ಸಹೋದರಿ ಜೆ.ಶಾಂತಾ ಅವರೇ ಸ್ಪರ್ಧಿಸಿರುವುದರಿಂದ ಶಾಸಕ ಬಿ.ಶ್ರೀರಾಮುಲು ಅವರೂ ವೈಯಕ್ತಿಕ ವಾಗಿ ಪ್ರತಿಷ್ಠೆಯನ್ನಾಗಿ ಸ್ವೀಕರಿಸಿದ್ದಾರೆ. ಇಲ್ಲಿ ಯಾರೇ ಗೆದ್ದರೂ ಅಂತರ ತೀರ ಕಡಿಮೆ ಯಾಗಿರಲಿದೆ ಎಂಬುದು ಜನಾಭಿಪ್ರಾಯ.

ವೆಂಕೋಬಿ ಸಂಗನಕಲ್ಲು 

6 ಕಾಂಗ್ರೆಸ್‌ ಶಾಸಕರ ಬಲ: ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಈ ಪೈಕಿ ಆರರಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಹೀಗಾಗಿ, ಕಾಂಗ್ರೆಸ್‌ ಮುಖಂಡರು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಬಳ್ಳಾರಿಯನ್ನು ಮತ್ತೆ ಪಕ್ಷದ ಭದ್ರಕೋಟೆಯಾಗಿಸಲು ಶತಾಯ ಗತಾಯ ಯತ್ನಿಸುತ್ತಿದ್ದಾರೆ. ಇನ್ನು, ಕಳೆದ ಮೂರು ಅವಧಿಗೆ ಲೋಕಸಭೆ ಚುನಾವಣೆಯಲ್ಲಿ ಜಯ ಗಳಿಸಿದ್ದ ಬಿಜೆಪಿ, 2008ರ ವಿಧಾನಸಭೆ ಚುನಾವಣೆಯಲ್ಲಿ ಎಂಟು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಳ್ಳಾರಿಯನ್ನು ಪಕ್ಷದ ಭದ್ರಕೋಟೆಯನ್ನಾಗಿಸಿತ್ತು. ಆದರೆ, 2013ರ ಚುನಾವಣೆಯಲ್ಲಿ ಶ್ರೀರಾಮುಲು ಅವರದ್ದೇ ಆದ ಬಿಎಸ್ಸಾರ್‌ ಪಕ್ಷದ ಸವಾಲಿನಿಂದಾಗಿ ಕೇವಲ ಒಂದು ಕ್ಷೇತ್ರದಲ್ಲಿ ಗೆದ್ದಿದ್ದ ಬಿಜೆಪಿ, 2018ರ ಚುನಾವಣೆಯಲ್ಲಿ ಮೂರರಲ್ಲಿ ಜಯ ಗಳಿಸಿತ್ತು. ಪ್ರತಿ ಚುನಾವಣೆಯಲ್ಲೂ “ಶಕ್ತಿ’
ಕಳೆದುಕೊಳ್ಳುತ್ತಿರುವ ಬಿಜೆಪಿಗೆ ಈ ಲೋಕಸಭೆ ಕ್ಷೇತ್ರವೂ ಕೈ ತಪ್ಪಿದರೆ ಶ್ರೀರಾಮುಲು ಅವರಿಗೆ ಅಸ್ತಿತ್ವದ ಪ್ರಶ್ನೆ ಎದುರಾಗುವ ಸಾಧ್ಯತೆಯಿದೆ. ಹೀಗಾಗಿ, ಸಹೋದರಿ ಜೆ.ಶಾಂತಾ ಅವರನ್ನು ಗೆಲ್ಲಿಸಿಕೊಳ್ಳಬೇಕಾದ ಅನಿವಾರ್ಯತೆ ಅವರಿಗೆ ಎದುರಾಗಿದೆ.

ವೈಯಕ್ತಿಕ ವಿಚಾರಗಳೇ ಅಸ್ತ್ರ: ಉಪಚುನಾವಣೆಯಲ್ಲಿ ಜಿಲ್ಲೆಯ ಅಭಿವೃದ್ಧಿಗಿಂತ ವೈಯಕ್ತಿಕ ವಿಚಾರಗಳೇ ಪ್ರಚಾರದ ಪ್ರಮುಖ ಅಸ್ತ್ರಗಳಾಗಿವೆ. ಶ್ರೀರಾಮುಲು ರಾಜೀನಾಮೆಯಿಂದ ಎದುರಾದ ಮೂರು ಉಪಚುನಾವಣೆ, ಸಹೋದರಿಯನ್ನೇ ಕಣಕ್ಕಿಳಿಸಿದ್ದು, 10 ವರ್ಷ ಸಂಸದರಾಗಿದ್ದ ಸಹೋದರ-ಸಹೋದರಿಯರು ಸಂಸತ್‌ನಲ್ಲಿ ಜಿಲ್ಲೆಯ ಬಗ್ಗೆ ಒಮ್ಮೆಯೂ ಧ್ವನಿಯೆತ್ತಿಲ್ಲ ಎಂಬುದು ಕಾಂಗ್ರೆಸ್‌ನ ಪ್ರಚಾರದ ಪ್ರಮುಖ ಅಸ್ತ್ರಗಳು. ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌. ಉಗ್ರಪ್ಪ ಸ್ಥಳೀಯರಲ್ಲ. 1980ರ ದಶಕದಲ್ಲಿ ಎಲ್‌.ಜಿ.ಹಾವನೂರು ಅವರನ್ನು ಸೋಲಿಸಿದ್ದ ಉಗ್ರಪ್ಪ ಇದೀಗ ಶಾಂತಾ ಅವರನ್ನು ಸೋಲಿಸಲು ಬಳ್ಳಾರಿಗೆ ಬಂದಿದ್ದಾರೆ ಎಂಬುದು ಸೇರಿ ಕಾಂಗ್ರೆಸ್‌ನವರ ಪ್ರತಿಯೊಂದು ಆರೋಪಗಳನ್ನು ಜಾತಿ ಮತ್ತು ಸಮುದಾಯಕ್ಕೆ  ಬಿಂಬಿಸಿಕೊಳ್ಳುತ್ತಿರುವುದು ಬಿಜೆಪಿಯ ಪ್ರಚಾರದ ಪ್ರಮುಖ ವಿಷಯ.

ನಿರ್ಣಾಯಕ ಅಂಶ
ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 17,08,266 ಮತದಾರರಿದ್ದಾರೆ. ಇದರಲ್ಲಿ ಬಹುಸಂಖ್ಯಾತ ಹಾಗೂ ಪ್ರಬಲವಾದ ಪರಿಶಿಷ್ಟ ಸಮುದಾಯ, ವೀರಶೈವ ಲಿಂಗಾಯತ ಮತಗಳು ನಿರ್ಣಾಯಕ ಪಾತ್ರ ವಹಿಸಲಿವೆ. ಈ ಕ್ಷೇತ್ರ ಪರಿಶಿಷ್ಟ ಪಂಗಡಕ್ಕೆ  ಮೀಸಲಾಗಿದ್ದರಿಂದ ಆ ಸಮುದಾಯದ ಮತಗಳು ಹಂಚಿ ಹೋಗುವ ಸಾಧ್ಯತೆಯಿದೆ. ಕಾಂಗ್ರೆಸ್‌ನ ಸಾಂಪ್ರದಾಯಿಕ ಎನ್ನಲಾಗುವ ಮುಸ್ಲಿಂ, ಪರಿಶಿಷ್ಟ ಜಾತಿ, ಕುರುಬ ಮತಗಳು ಕಳೆದ ವಿಧಾನಸಭೆ ಚುನಾವಣೆಯಂತೆ ಈ ಬಾರಿಯೂ ಆ ಪಕ್ಷದತ್ತ ವಾಲುವ ಸಾಧ್ಯತೆಯಿದೆ. ವೀರಶೈವ ಲಿಂಗಾಯತರು ಬಿಜೆಪಿಯತ್ತ ಒಲವು ತೋರಬಹುದೆಂದು ಅಂದಾಜಿಸಲಾಗಿದೆ. ಇನ್ನುಳಿದ ಎಲ್ಲ ಸಮುದಾಯಗಳ ಮತಗಳ ಮೇಲೆ ಎರಡೂ ಪಕ್ಷಗಳೂ ಕಣ್ಣಿಟ್ಟಿವೆ.

ಅಭ್ಯರ್ಥಿಗಳು 
ಬಿಜೆಪಿ: ಜೆ.ಶಾಂತಾ
ಕಾಂಗ್ರೆಸ್‌: ವಿ.ಎಸ್‌.ಉಗ್ರಪ್ಪ 
ಪಕ್ಷೇತರ: ಡಾ| ಟಿ.ಆರ್‌.ಶ್ರೀನಿವಾಸ್‌, ಪಂಪಾಪತಿ 

ಪ್ರತಿ ಹಳ್ಳಿಗೂ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದೇನೆ. ಚುನಾವಣೆ ಯಲ್ಲಿ ಜಿಲ್ಲೆಯ ಮಗಳು ನಿಂತಿದ್ದಾರೆ ಎಂಬುದನ್ನು 
ಅರಿತು ನನ್ನ ಪರ ಮತದಾನ ಮಾಡಿ, ಆಶೀರ್ವಾದ ಮಾಡಲಿದ್ದಾರೆ. 
 
● ಜೆ.ಶಾಂತಾ, ಬಿಜೆಪಿ ಅಭ್ಯರ್ಥಿ.

ಬಳ್ಳಾರಿ ಲೋಕಸಭಾ ಕ್ಷೇತ್ರಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಎಲ್ಲೆಡೆ ಉತ್ತಮ ಸ್ಪಂದನೆ ದೊರೆತಿದೆ. ಜನರು ಆಶೀರ್ವಾದ ಮಾಡಲಿದ್ದು, ಗೆಲ್ಲುವುದು ಖಚಿತ.
● ಉಗ್ರಪ್ಪ, ಕಾಂಗ್ರೆಸ್‌ ಅಭ್ಯರ್ಥಿ

ಟಾಪ್ ನ್ಯೂಸ್

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.