ಬಾಕಿ ಬಿಲ್‌ಗೆ ಆಗ್ರಹಿಸಿ ರೈತರ ಪ್ರತಿಭಟನೆ
Team Udayavani, Nov 1, 2018, 3:59 PM IST
ಮುಧೋಳ: ಕಬ್ಬಿನ ಬಾಕಿ ಬಿಲ್ಲ ಹಾಗೂ ಪ್ರಸಕ್ತ ಸಾಲಿನ ದರ ಘೋಷಣೆಗೆ ಆಗ್ರಹಿಸಿ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ರೈತ ಪ್ರಮುಖರಾದ ಕೆ.ಟಿ. ಪಾಟೀಲ ಮಾತನಾಡಿ, ಕಬ್ಬು ಪೂರೈಸಿ 14 ದಿನದೊಳಗಾಗಿ ಹಣ ನೀಡಬೇಕೆಂದು ನಿಯಮವಿದ್ದರೂ ಕಾರ್ಖಾನೆಯವರು ಇದನ್ನು ಪಾಲಿಸುತ್ತಿಲ್ಲ. ಇದು ರೈತರ ಮೇಲೆ ನಡೆಯುತ್ತಿರುವ ಶೋಷಣೆಯಾಗಿದೆ ಎಂದು ಅವರು ಆರೋಪಿಸಿದರು.
2018-19ನೇ ಸಾಲಿಗೆ ಕಬ್ಬು ಪೂರೈಸುವ ರೈತರಿಗೆ ಮೊದಲ ಕಂತಾಗಿ 2500 ರೂ. ಬೆಲೆ ಘೋಷಣೆ ಮಾಡಿ ಕಾರ್ಖಾನೆ ಆರಂಭಿಸಬೇಕು. ಬೆಳಗಾವಿ ಜಿಲ್ಲೆಯ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿರುವ ಕಾರ್ಖಾನೆಗಳು ನೀಡುವ ಬೆಲೆಯನ್ನು ಬಾಗಲಕೋಟೆ-ವಿಜಯಪುರ ಜಿಲ್ಲೆಯ ರೈತರಿಗೂ ನೀಡಬೇಕು. ಎಫ್‌ಆರ್‌ಪಿ ಅಂದರೆ ಸರ್ಕಾರ ನಿಗದಿಪಡಿಸಿದ ಕನಿಷ್ಠ ಬೆಂಬಲ ಬೆಲೆಯಾಗಿದ್ದು, ಇದೆ ಅಂತಿಮವಲ್ಲ. ಆದರೆ ಕಾರ್ಖಾನೆಯವರು ಎಫ್‌ಆರ್‌ಪಿ ಬೆಲೆಯೇ ಅಂತಿಮ ಎಂದು ತಿಳಿದು ಅಷ್ಟೇ ಹಣ ನೀಡುತ್ತಿದ್ದಾರೆ. ಇದರಿಂದ ರೈತರಿಗೆ ತೀವ್ರ ಅನ್ಯಾಯವಾಗುತ್ತಿದೆ ಎಂದರು.
ಗುರುವಾರ ಸಂಜೆ ಒಳಗೆ ಸಮಸ್ಯೆ ಬಗೆಹರಿಸುವ ಭರವಸೆಯನ್ನು ಜಿಲ್ಲಾಧಿಕಾರಿಗಳು ನೀಡಿದ್ದಾರೆ. ಜಿಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ರೈತ ಸಂಘದ ಜಿಲ್ಲಾಧ್ಯಕ್ಷ ಹಣಮಂತ ಕಾಂಬಳೆ, ಸುಭಾಸ ಶಿರಬೂರ, ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಾಮನಗೌಡ ಪಾಟೀಲ, ಉದಯ ಸಾರವಾಡ, ವಿಶ್ವನಾಥ ಉದಗಟ್ಟಿ ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.