ದೋಷ ರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಸಹಕರಿಸಿ
Team Udayavani, Nov 1, 2018, 4:12 PM IST
ಬೆಳಗಾವಿ: ಲೋಪದೋಷ ರಹಿತ ಮತದಾರರ ಪಟ್ಟಿ ಸಿದ್ಧಪಡಿಸುವುದು ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿದೆ. ಹೀಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹ ಮತದಾರರ ಸೇರ್ಪಡೆ ಹಾಗೂ ಅನರ್ಹರ ಹೆಸರು ತೆಗೆದು ಹಾಕಲು ಸಹಕರಿಸಬೇಕು ಎಂದು ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣವರ ಮನವಿ ಮಾಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಲೋಪದೋಷ ರಹಿತ ಮತದಾರರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, ಪಟ್ಟಿ ಪರಿಷ್ಕರಣೆಗೆ ಕಾಲಾವಕಾಶ ನಿಗದಿಪಡಿಸಲಾಗಿದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ನಿಗದಿತ ಅವಧಿ ಯಲ್ಲಿ ಸಲಹೆ-ಸೂಚನೆ ನೀಡುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಬೇಕು ಎಂದರು. ಹಕ್ಕು ಆಕ್ಷೇಪಣೆ ಸಲ್ಲಿಕೆಗೆ ನ. 20ರವರೆಗೆ ಕಾಲಾವಕಾಶವಿದ್ದು, ಇದನ್ನು ರಾಜಕೀಯ ಪಕ್ಷಗಳು ಬಳಸಿಕೊಳ್ಳಬೇಕು. ಭಾವಚಿತ್ರ ಹೊಂದಿದ ಮತದಾರರ ಅಂತಿಮ ಪಟ್ಟಿಯನ್ನು ಜನವರಿ 4, 2019ರಂದು ಪ್ರಚುರಪಡಿಸಲಾಗುತ್ತದೆ. ಯಾವುದೇ ಸಮಸ್ಯೆಯಿದ್ದರೆ ನೇರವಾಗಿ ತಮ್ಮ ಗಮನಕ್ಕೆ (ಕಚೇರಿ ದೂ: 0831-2463730) ತರಬೇಕು ಎಂದು ಮೇಘಣ್ಣವರ ತಿಳಿಸಿದರು.
ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಮಾತನಾಡಿ, ಈಗಾಗಲೇ ಪ್ರಚುರಪಡಿಸುವ ಕರಡು ಮತದಾರರ ಪಟ್ಟಿ ಪರಿಶೀಲಿಸಿದಾಗ ಮಹಿಳಾ ಹಾಗೂ ಯುವ ಮತದಾರರ ನೋಂದಣಿ ಪ್ರಮಾಣ ಕಡಿಮೆಯಾಗಿರುವುದು ಕಂಡು ಬಂದಿರುತ್ತದೆ. ಹೀಗಾಗಿ ಒಟ್ಟು ಮತದಾರರ ಪ್ರಮಾಣಕ್ಕೆ ತಕ್ಕಂತೆ ಮಹಿಳಾ ಮತ್ತು ಯುವ ಮತದಾರರ ಸೇರ್ಪಡೆಗೆ ರಾಜಕೀಯ ಪಕ್ಷಗಳೂ ಸಹಕರಿಸಬೇಕು ಎಂದು ಹೇಳಿದರು. ಜಿಪಂ ಸಿಇಒ ರಾಮಚಂದ್ರನ್ ಆರ್., ಪಾಲಿಕೆ ಆಯುಕ್ತ ಶಶಿಧರ ಕುರೇರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.