‘ಕನ್ನಡ ಶಾಲೆ ಶಿಕ್ಷಕರ ವರ್ಗಾವಣೆ ನಿಲ್ಲಲಿ’ 


Team Udayavani, Nov 2, 2018, 11:06 AM IST

2-november-5.gif

ಬೆಳ್ತಂಗಡಿ : ಪ್ರಸ್ತುತ ರಾಜ್ಯದಲ್ಲಿ ಸರಕಾರಿ ಕನ್ನಡ ಶಾಲೆಗಳ ಶಿಕ್ಷಕರ ವರ್ಗಾವಣೆಯ ದಂಧೆ ನಡೆಯುತ್ತಿದ್ದು, ಇದು ಕನ್ನಡದ ಅಸ್ತಿತ್ವಕ್ಕೆ ಧಕ್ಕೆ ತರುತ್ತಿದೆ. ಹೀಗಾಗಿ ಕನ್ನಡ ಶಾಲೆಗಳ ಉಳಿವಿನ ದೃಷ್ಟಿಯಿಂದ ರಾಜ್ಯದ ಮುಖ್ಯಮಂತ್ರಿಯವರು ವರ್ಗಾವಣೆ ಪ್ರಕ್ರಿಯೆ ನಿಲ್ಲಿಸಿ, ಬಡ ವಿದ್ಯಾರ್ಥಿಗಳು, ಶಿಕ್ಷಕರಿಗೆ ನ್ಯಾಯ ಒದಗಿಸಲಿ ಎಂದು ಶಾಸಕ ಹರೀಶ್‌ ಪೂಂಜ ಆಗ್ರಹಿಸಿದರು.

ಅವರು ಗುರುವಾರ ಇಲ್ಲಿನ ಮಿನಿ ವಿಧಾನಸೌಧದ ಆವರಣದಲ್ಲಿ ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಧಾನಿ ಮೋದಿಯವರು ಕನ್ನಡಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ರೈಲ್ವೇಯಲ್ಲಿ ಮೊದಲ ಬಾರಿಗೆ ಕನ್ನಡದ ಮುದ್ರಣ, ನೋಟಿನಲ್ಲಿ ಹಂಪಿ ಕನ್ನಡದ ರಥದ ಅಚ್ಚು, ವಿಶ್ವ ವಿಖ್ಯಾತ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಪ್ರತಿಮೆಯ ತಳದಲ್ಲಿ ಹಿಂದಿಗಿಂತಲೂ ಮೊದಲ ಸ್ಥಾನದಲ್ಲಿ ಕನ್ನಡವಿದೆ ಎಂದು ಪ್ರಶಂಸಿಸಿದರು.

ತಹಶೀಲ್ದಾರ್‌ ಮದನ್‌ ಮೋಹನ್‌ ಸಿ. ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವದ ದಿನ ಮಾತ್ರ ನಾವು ಕನ್ನಡವನ್ನು ಆರಾಧಿಸುವ ಬದಲು ನಿತ್ಯವೂ ಪ್ರೀತಿಸುವ ಕೆಲಸ ಮಾಡಬೇಕು. ಇಡೀ ರಾಷ್ಟ್ರದಲ್ಲಿಯೇ ಅತಿ ಹೆಚ್ಚು ಅಂದರೆ 8 ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಸಮೃದ್ಧ ಭಾಷೆ ಕನ್ನಡ ಎಂಬ ಹೆಮ್ಮೆ ನಮಗಿರಬೇಕು ಎಂದರು. ಪ್ರಧಾನ ಭಾಷಣ ಮಾಡಿದ ಉಜಿರೆ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ| ಎನ್‌.ಜಿ. ಪಟವರ್ಧನ್‌, ಪಂಚ ದ್ರಾವಿಡ ಭಾಷೆಗಳಲ್ಲಿ ತಮಿಳನ್ನು ಬಿಟ್ಟರೆ ಕನ್ನಡಕ್ಕೆ ಅತ್ಯಂತ ಪುರಾತನ ಭಾಷೆ ಎಂಬ ಹೆಗ್ಗಳಿಕೆ ಇದೆ. ಆದರೆ ಇಂದು ಇಂಗ್ಲಿಷ್‌ ವ್ಯಾಮೋಹದಿಂದ ನಾವು ಕನ್ನಡಕ್ಕೆ ಅನ್ಯಾಯ ಮಾಡುತ್ತಿದ್ದೇವೆ. ಅವುಗಳೆಲ್ಲವನ್ನು ಬಿಟ್ಟು ಕನ್ನಡ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದರು. ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಸ್ಥಾಯೀ ಸಮಿತಿ ಅಧ್ಯಕ್ಷ ವಿ.ಟಿ. ಸೆಬಾಸ್ಟಿನ್‌, ಸದಸ್ಯರಾದ ಕೃಷ್ಣ ಆಚಾರ್ಯ, ಪ್ರವೀಣ್‌, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಭೋಜರಾಜ ಹೆಗ್ಡೆ, ನಿವೃತ್ತ ಸೈನಿಕ ಎಂ.ಆರ್‌. ಜೈನ್‌, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್‌ ಬಿ., ಪೊಲೀಸ್‌ ವೃತ್ತ ನಿರೀಕ್ಷಕ ಸಂದೇಶ್‌ ಪಿ.ಜಿ. ಮೊದಲಾದವರಿದ್ದರು.

ಬಹುಮಾನ ವಿತರಣೆ
ಕಾರ್ಯಕ್ರಮದಲ್ಲಿ ಎಸೆಸೆಲ್ಸಿಯ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಣ ಸಂಯೋಜಕ ಸುಭಾಸ್‌ ಜಾಧವ್‌ ಸ್ವಾಗತಿಸಿ, ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ಲಾೖಲ ವಂದಿಸಿದರು. ವಾಣಿ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾಬಲ ಗೌಡ ನಿರೂಪಿಸಿದರು. ಬಳಿಕ ವಿವಿಧ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.

ಅರ್ಥಪೂರ್ಣ ಆಗಲಿ
ಕನ್ನಡ ಶಾಲೆಗಳೇ ಉಳಿಯದಿದ್ದರೆ ಕರ್ನಾಟಕ ರಾಜ್ಯೋತ್ಸವಕ್ಕೆ ಅರ್ಥವಿಲ್ಲದಂತಾಗುತ್ತದೆ. ಹೀಗಾಗಿ ರಾಜ್ಯ ಸರಕಾರ ಈ ಕುರಿತು ಗಂಭೀರವಾಗಿ ಆಲೋಚಿಸಬೇಕಿದೆ. ಕಾಸರಗೋಡನ್ನು ಕರ್ನಾಟಕಕ್ಕೆ ಸೇರಿಸುವ ಪ್ರಯತ್ನದ ಜತೆಗೆ ಕನ್ನಡಕ್ಕಾಗಿ ಹೋರಾಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವ ಕಾರ್ಯವಾಗಬೇಕು.
– ಹರೀಶ್‌ ಪೂಂಜ
ಶಾಸಕರು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.