ರಾಜ್ಯೊತ್ಸವದಲ್ಲಿ ಮಿಂದ ಕನ್ನಡಿಗರು


Team Udayavani, Nov 2, 2018, 11:26 AM IST

rajyotsava.jpg

ನಾಡ ಹಬ್ಬಕ್ಕಾಗಿಯೇ ಕನ್ನಡ ಸಂಘ, ಸಂಸ್ಥೆಗಳು ವಿಶೇಷವಾಗಿ ಅಲಂಕೃತಗೊಂಡಿದ್ದವು. ಶಾಲಾ- ಕಾಲೇಜುಗಳಲ್ಲಿ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಾಯಿ ಭುವನೇಶ್ವರಿ ವೇಷಧಾರಿಯಾಗಿದ್ದ ವಿದ್ಯಾರ್ಥಿಗಳು ಕನ್ನಡ ಬಾವುಟ ಹಿಡಿದು ಜೈಕಾರ ಕೂಗಿದರು. ಆಟೋ, ಕಾರು, ಟ್ಯಾಕ್ಸಿ ಚಾಲಕರು ಕನ್ನಡ ಬಾವುಟವನ್ನು ವಾಹನಕ್ಕೆ ಕಟ್ಟಿ ಸಂಚರಿಸಿ ಖುಷಿ ಪಟ್ಟರು. ಯುವಕರು ಬೈಕ್‌ಗಳಲ್ಲಿ ಬಾವುಟ ಹಿಡಿದ ಕನ್ನಡಾಂಬೆಗೆ ಜೈಕಾರ ಹಾಕುತ್ತಾ ಸುತ್ತಾಡಿದ್ದು ಕಂಡುಬಂತು. ರಾಜ್ಯೋತ್ಸವ ಸಭೆ- ಸಮಾರಂಭಗಳು, ವಿಚಾರ, ಚರ್ಚಾಗೋಷ್ಠಿಗಳು ಕನ್ನಡದ ಕಂಪನ್ನು ಸೂಸಿದವು.

ಬೆಂಗಳೂರು: ಅರವತ್ಮೂರನೇ ಕರ್ನಾಟಕ ರಾಜ್ಯೋತ್ಸವವನ್ನು ನಗರದೆಲ್ಲೆಡೆ ಗುರುವಾರ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಉದ್ಯಾನ, ಮೈದಾನ, ವೃತ್ತ, ಸಾರ್ವಜನಿಕ ಸ್ಥಳ, ಬಸ್‌ ನಿಲ್ದಾಣ, ಆಟೋನಿಲ್ದಾಣ, ಬಡಾವಣೆಗಳಲ್ಲಿ ಧ್ವಜಾರೋಹಣ ನೇರವೇರಿಸಿದ ಸಾರ್ವಜನಿಕರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು. ಕೆಲವೆಡೆ ಕನ್ನಡ ಸಾಹಿತ್ಯ ಪುಸ್ತಕಗಳನ್ನು ವಿತರಿಸಿ ರಾಜ್ಯೋತ್ಸವದ ಶುಭಾಶಯ ಕೋರಿದ್ದು ಗಮನ ಸೆಳೆಯಿತು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಹಲವು ಬಸ್‌ಗಳು ಸಿಂಗಾರಗೊಂಡು ಪ್ರಯಾಣಿಕರನ್ನು ಆಕರ್ಷಿಸಿದವು. ದಿನವಿಡೀ ನಾಡು- ನುಡಿಯ ಗೀತೆಗಳು ಮೊಳಗಿದವು. ಕನ್ನಡಾಂಬೆ ತಾಯಿಯ ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳ ಮೆರುಗು ಹಬ್ಬದ ಕಳೆ ತಂದಿತ್ತು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷ ಡಾ.ಮನು ಬಳಿಗಾರ್‌ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ನಾಡು, ನುಡಿಯ ವಿಚಾರದಲ್ಲಿ ನಮ್ಮ ಹಿರಿಯ ಕೊಡುಗೆ ಅಪಾರ.ಅವರು ಹಾಕಿಕೊಟ್ಟ ಹಾದಿಯಲ್ಲಿ ಸಾಗಬೇಕು ಎಂದು ಕರೆ ನೀಡಿದರು. ಕಸಾಪದ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ, ರಾಜಶೇಖರ ಹತಗುಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬನ್ನಪ್ಪ ಪಾರ್ಕ್‌ ಆಟದ ಮೈದಾನದಲ್ಲಿ ಅಖೀಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಪರ ಹೋರಾಟಗಾರ ಗುರುದೇವ್‌ ನಾರಾಯಣ್‌ ಕುಮಾರ್‌ ಸೇರಿದಂತೆ ಹಲವ‌ರು ಪಾಲ್ಗೊಂಡಿದ್ದರು. ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಕರ್ನಾಟಕ ರಾಜ್ಯೋತ್ಸವ ಸಮಿತಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ದೇವಿಯ ಮೆರವಣಿಗೆ ನಡೆಯಿತು. ಇದೇ ವೇಳೆ ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ಅವರನ್ನು ಸನ್ಮಾನಿಸಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎಸ್‌.ನಾರಾಯಣಗೌಡ ಬಣದ ಕಾರ್ಯಕರ್ತರು ಗಾಂಧಿನಗರದ ಕೇಂದ್ರ ಕಚೇರಿಯಲ್ಲಿ ಸಡಗರ, ಸಂಭ್ರಮದಿಂದ ರಾಜ್ಯೋತ್ಸವ ಆಚರಿಸಿದರು. ಜಯನಗರದ ಭಾರತ್‌ ವಿದ್ಯಾ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ‌ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಕಟ್ಟುವ ಕಾರ್ಯದ ಬಗ್ಗೆ ಚರ್ಚೆ ನಡೆದವು.

ಕತ್ರಿಗುಪ್ಪೆಯ ಕನ್ನಡ ಗೆಳೆಯರ ಬಳಗ, ಹೊಂಬೇಗೌಡ ನಗರದ ಕನ್ನಡ ಯುವಜನ ಸಂಘ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೌಕರರ ಕನ್ನಡ ಸಂಘ, ಕೆ.ಜಿ.ನಗರದ ಕೆಂಪೇಗೌಡನಗರ ನಾಗರಿಕ ವೇದಿಕೆ ಮತ್ತು ವಿಜಯನಗರದ ಅಖೀಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 63ನೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ನೆಲ, ಜಲ ಕುರಿತು ಚಿಂತನಾ ಗೋಷ್ಠಿ ನಡೆದವು.

ಚಾಮರಾಜಪೇಟೆಯ ನಾಡಹಬ್ಬ ಕನ್ನಡ ರಾಜ್ಯೋತ್ಸವ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ  ರಾಜ್ಯೋತ್ಸವದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಆಕರ್ಷಿಸಿದವು. ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾತ್ರಿ ನಡೆದ ಸಂಗೀತ ಕಾರ್ಯಕ್ರಮಗಳು ಸಂಗೀತ ರಸಿಕರ ಮನ ತಣಿಸಿದವು.

ಸಾಹಿತ್ಯ ಶ್ರೀಪ್ರಶಸ್ತಿ ಪ್ರದಾನ: ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಡಿಎಸ್‌ ಮ್ಯಾಕ್ಸ್‌ ಸಂಸ್ಥೆ ನಗರದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಅನುಪಮ ಸೇವೆ ನೀಡಿದ ಸಾಹಿತಿ ಡಾ.ವೀರಣ್ಣ ರಾಜೂರ, ಡಾ.ಡಿ.ಎಸ್‌.ಅಕ್ಕಿ, ಡಾ.ಜಗನ್ನಾಥ್‌ ಹೆಬ್ಟಾಳೆ, ಎಂ.ಜಿ.ನಾಗರಾಜ್‌, ಪ್ರೇಮಾ ಭಟ್‌ ಅವರಿಗೆ ಡಿ.ಎಸ್‌.ಮ್ಯಾಕ್ಸ್‌ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಾಹಿತಿ ಮಲ್ಲೇಪುರಂ ಜಿ.ವೆಂಕಟೇಶ್‌, ಮುಂದಿನ ಪೀಳಿಗೆಗೆ ಕನ್ನಡ ಪುಸ್ತಕಗಳನ್ನು ಪರಿಚಯಿಸುವ ದೃಷ್ಟಿಯಿಂದ ಪ್ರತಿಯೊಂದು ಮನೆಯಲ್ಲೂ ಗ್ರಂಥಾಲಯ ಭಂಡಾರ ನಿರ್ಮಿಸಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.