ಬಾಣಂತಿ ಸಾವು: ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ಪ್ರತಿಭಟನೆ

Team Udayavani, Nov 2, 2018, 11:53 AM IST

2-november-8.gif

ಪುತ್ತೂರು : ಹೆರಿಗೆಗೆ ದಾಖಲಾಗಿದ್ದ ಮಹಿಳೆ ಯೊಬ್ಬರು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಮತ್ತು ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ, ಪಿಎಫ್‌ಐ ಕಾರ್ಯಕರ್ತರು ನಗರದ ಖಾಸಗಿ ಆಸ್ಪತ್ರೆಯೊಂದರ ಎದುರು ಗುರುವಾರ ಹಠಾತ್‌ ಪ್ರತಿಭಟನೆ ನಡೆಸಿದರು.  ಅಳಕೆ ಮಜಲು ನಿವಾಸಿ, ವಿದೇಶದಲ್ಲಿ ಉದ್ಯೋಗದಲ್ಲಿರುವ ಸಿದ್ದೀಕ್‌ ಅವರ ಪತ್ನಿ ಬನ್ನೂರಿನ ಹಕೀಮ (28) ಎರಡನೇ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ರಕ್ತಸ್ರಾವಕ್ಕೊಳಗಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದ್ದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಮೃತಟ್ಟಿದ್ದರು. 

ಹಕೀಮಾ ಅವರ ಸಾವಿಗೆ ಪುತ್ತೂರು ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಎಸ್‌ ಡಿಪಿಐ ಹಾಗೂ ಪಿಎಫ್‌ಐ ನೂರಾರು ಕಾರ್ಯಕರ್ತರು ಪ್ರತಿಭಟನೆಗಿಳಿದರು. ಈ ಆಸ್ಪತ್ರೆಯಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದು, 15 ದಿನಗಳ ಹಿಂದೆಯಷ್ಟೇ ಕೆದಂಬಾಡಿ ಗ್ರಾಮದ ಮಹಿಳೆಯ ಸಾವು ಸಂಭವಿಸಿದೆ. ಇದೀಗ ಹಕೀಮಾ ಅವರು ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾರೆ ಎಂದರು. ಪ್ರತಿಭಟನಕಾರರು ಆಸ್ಪತ್ರೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವೈದ್ಯರನ್ನು ವಜಾಗೊಳಿಸಿ
ಪ್ರತಿಭಟನೆಯನ್ನುದ್ದೇಶಿಸಿ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್‌ ಬೆಳ್ಳಾರೆ ಮಾತನಾಡಿ, ಮಹಿಳೆಯ ಸಾವು ವೈದ್ಯರ ನಿರ್ಲಕ್ಷ್ಯದಿಂದಾಗಿ ಸಂಭವಿಸಿದೆ. ಇದರ ಹಿಂದೆ ಷಡ್ಯಂತ್ರವಿದೆ ಎಂದು ಆರೋಪಿಸಿದರು. ಮಹಿಳೆಯ ಸಾವಿಗೆ ಕಾರಣವಾದ ವೈದ್ಯ ರನ್ನು ವಜಾಗೊಳಿಸಬೇಕು ಮತ್ತು ವೈದ್ಯ ಪದವಿಯನ್ನು ಹಿಂಪಡೆಯಬೇಕು. ಯಾವುದೇ ಜಾತಿ, ಧರ್ಮ, ಪಂಗಡದವರಿಗೆ ಇಂತಹ ಅನ್ಯಾಯ ಆಗಬಾರದು. ಈ ವಿಚಾರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮಧ್ಯೆ ಪ್ರವೇಶಿಸಬೇಕು ಎಂದು ಆಗ್ರಹಿಸಿದರು.

ಪೊಲೀಸರಿಂದ ತಡೆ
ಆಸ್ಪತ್ರೆ ಆವರಣಕ್ಕೆ ನುಗ್ಗಲು ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ತಡೆದರು. ಪುತ್ತೂರು ನಗರ ಠಾಣೆ ಪಿಎಸ್‌ಐ ಅಜೇಯ್‌ ಕುಮಾರ್‌ ಪ್ರತಿಭಟನಕಾರರನ್ನು ಸಮಾಧಾನಪಡಿಸಿ, ಆಸ್ಪತ್ರೆಯ ಆಡಳಿತ ನಿರ್ದೇಶಕರು ಸ್ಪಷ್ಟನೆ ನೀಡುತ್ತಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದಾದರೆ ಕ್ರಮ ಕೈಗೊಳ್ಳುತ್ತೇವೆ ಎಂದರು.

ಪಿಎಫ್‌ಐ ರಾಜ್ಯ ಸಮಿತಿಯ ಸದಸ್ಯ ಶಾಫಿ ಬೆಳ್ಳಾರೆ ಮಾತನಾಡಿ, ಇಂತಹ ಅನ್ಯಾಯ ಮುಂದೆ ಯಾರಿಗೂ ಆಗಬಾರದು. ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ತಿಳಿಸಿ, ಸಾಂಕೇತಿಕ ಪ್ರತಿಭಟನೆಯನ್ನು ಮುಕ್ತಾಯಗೊಳಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದರು.

ಜಿಲ್ಲಾ ಸರ್ವ ಕಾಲೇಜು ಒಕ್ಕೂಟದ ಕಾರ್ಯದರ್ಶಿ ಮಜೀದ್‌ ಕೊಡಿಪ್ಪಾಡಿ, ಪಿಎಫ್‌ಐ ಜಿಲ್ಲಾಧ್ಯಕ್ಷ ಅಬೂಬಕ್ಕರ್‌ ರಿಜ್ವಾನ್, ಎಸ್‌ಡಿಪಿಐ ಜಿಲ್ಲಾ ಸಮಿತಿಯ ಸದಸ್ಯ ಜಾಬೀರ್‌ ಅರಿಯಡ್ಕ, ಸುಳ್ಯ ಕ್ಷೇತ್ರ ಸಮಿತಿಯ ಅಧ್ಯಕ್ಷ ರಫೀಕ್‌ ಎಂ.ಎ., ಪ್ರಮುಖರಾದ ಹಮೀದ್‌, ಅಶ್ರಫ್‌ ಬಾವಾ, ಬಶೀರ್‌ ಕೂರ್ನಡ್ಕ ಇದ್ದರು.

ವೈದ್ಯರ ಸ್ಪಷ್ಟನೆ 
ಬನ್ನೂರಿನ ಮಹಿಳೆ ಎರಡನೇ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಪ್ರಸೂತಿ ತಜ್ಞ ಡಾ| ಅನಿಲ್‌ ಅವರು ಸಾಮಾನ್ಯ ಹೆರಿಗೆ ಆಗುತ್ತದೆ ಎಂದು ತಿಳಿಸಿದ್ದರು. ಆದರೆ ಹೆರಿಗೆ ತಡವಾಗಿತ್ತು. ಹಸುಳೆ 4 ಕೆ.ಜಿ.ಗಿಂತ ಜಾಸ್ತಿ ತೂಕ ಹೊಂದಿದ್ದು, ಗಾತ್ರವೂ ಹೆಚ್ಚಿತ್ತು. ಹೆರಿಗೆಯ ಬಳಿಕ ರಕ್ತಸ್ರಾವ ನಿಲ್ಲದ ಹಾಗೂ ಗರ್ಭಕೋಶ ತಾನಾಗಿ ಸಣ್ಣದಾಗದ ಕಾರಣ, ರಕ್ತ ನೀಡಿ ರಕ್ತಸ್ರಾವ ತಡೆಯುವ ಪ್ರಯತ್ನವನ್ನು ಮಾಡಲಾಗಿತ್ತು. ಅದು ಫ‌ಲಿಸದ ಕಾರಣ ಅನಸ್ತೇಶಿಯಾ ನೀಡಿ ಗರ್ಭಕೋಶ ತೆರವುಗೊಳಿಸಿ ರಕ್ತಸ್ರಾವ ತಡೆಯಲಾಗಿತ್ತು. ರಾತ್ರಿ ವೇಳೆ ಉಸಿರಾಟದ ತೊಂದರೆ ಉಂಟಾದ ಕಾರಣ ಡಾ| ನಝೀರ್‌ ಅಹ್ಮದ್‌ ಅವರ ಸಲಹೆ ಪಡೆದು ಚಿಕಿತ್ಸೆ ಮುಂದುವರಿಸಿದರೂ ರಕ್ತದೊತ್ತಡ ಯಥಾಸ್ಥಿತಿಗೆ ಬಾರದ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವ ಸಲಹೆ ಕೊಟ್ಟಿದ್ದೇವೆ. ಅಪಾಯವಿದೆ ಎಂದು ಎಚ್ಚರಿಸಿದ್ದೇವೆ. ತಾವೂ ಸಹಿತ ಮೂವರು ವೈದ್ಯರೂ ಹೋಗಿದ್ದೇವೆ. ಚಿಕಿತ್ಸೆ ವಿಚಾರದಲ್ಲಿ ವೈದ್ಯರ ನಿರ್ಲಕ್ಷ್ಯ ಆಗಿಲ್ಲ ಎಂದು ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಭಾಸ್ಕರ್‌ ಸ್ಪಷ್ಟನೆ ನೀಡಿದರು.

ಟಾಪ್ ನ್ಯೂಸ್

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

5-renukaswamy

Renukaswamy Case: ಶೆಡ್‌ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

6-bng

Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.