ಕನ್ನಡ ನಾಡು, ನುಡಿ ರಕ್ಷಣೆಗೆ ಸಹಕರಿಸಿ
Team Udayavani, Nov 2, 2018, 12:07 PM IST
ತಿ.ನರಸೀಪುರ: ಕನ್ನಡ ನಾಡು, ನಾಡಿನ ರಕ್ಷಣೆ, ಬೆಳವಣಿಗೆಗೆ ಕನ್ನಡಿಗರೆಲ್ಲರೂ ಶ್ರಮಿಸುವ ಅಗತ್ಯವಿದೆ ಎಂದು ಶಾಸಕ ಡಾ.ಯತೀಂದ್ರ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ಮುಂದೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 63ನೇ ಕನ್ನಡ ರಾಜ್ಯೋತ್ಸವ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಭಾಷಾಭಿಮಾನ ಹಾಗೂ ಒಗ್ಗಟ್ಟಿನ ಕೊರತೆ ಇದೆ. ಭಾಷೆ, ಜಲ ವಿಷಯಗಳಲ್ಲಿ ನಾವೆಲ್ಲರೂ ಒಂದಾಗಿ ದುಡಿದು ರಾಜ್ಯವನ್ನು ಸದೃಢವಾಗಿ ಕಟ್ಟಲು ಸಂಕಲ್ಪ ತೊಡಬೇಕು ಎಂದರು. ಕಸಾಪ ಅಧ್ಯಕ್ಷ ಎಂ.ರಾಜು ಮಾತನಾಡಿ, ಕನ್ನಡ ಭಾಷೆಗೆ 2500 ವರ್ಷಗಳ ಇತಿಹಾಸವಿದ್ದರೂ ಸಿಗಬೇಕಾದ ಮಾನ್ಯತೆ ಸಿಗುತ್ತಿಲ್ಲ. ಶಾಸ್ತ್ರೀಯ ಭಾಷೆ ಎಂದು ಹೇಳಿದ್ದರೂ ಭಾಷೆಯ ಬೆಳವಣಿಗೆಗೆ ಪೂರಕ ಸೌಲಭ್ಯ ಸಿಗುತ್ತಿಲ್ಲ ಎಂದು ವಿಷಾದಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪರಮೇಶ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಶಾಲಾ ಮಕ್ಕಳ ಪ್ರಭಾತ್ ಭೇರಿ ಜರುಗಿತು. ವೇದಿಕೆ ಕಾರ್ಯಕ್ರಮದಲ್ಲಿ ಪಟ್ಟಣದ ಶಾಲಾ ಮಕ್ಕಳು ಕನ್ನಡ ನಾಡು, ನುಡಿ ಕುರಿತ ಗೀತೆಗಳಿಗೆ ಸಾಂಸ್ಕೃತಿಕ ನೃತ್ಯ ಪ್ರದರ್ಶನ ನೀಡಿದರು.
ಜಿಪಂ ಸದಸ್ಯ ಮಂಜುನಾಥ್, ತಾಪಂ ಸಾಯಿ ಸಮಿತಿ ಅಧ್ಯಕ್ಷ ಗಣೇಶ್, ಶಿರೆಸ್ತೇದಾರ್ ಪ್ರಭುರಾಜ್, ಕಸಾಪ ಪದಾಧಿಕಾರಿಗಳಾದ ಷಣ್ಮುಖಸ್ವಾಮಿ, ಸೋಸಲೆ ಮಹದೇವಶೆಟ್ಟಿ, ಸ್ವಾಮಿ, ಪ್ರಭುಸ್ವಾಮಿ, ಪಿಎಸ್ಐ ಅಜರುದ್ದೀನ್, ಬಿಇಒ ಗಂಗಾಧರ್, ಇಒ ಡಾ.ನಂಜೇಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.