ಮಹಿಳಾ ಬಾಸ್ಕೆಟ್‌ಬಾಲ್‌: ಫೈನಲ್‌ನಲ್ಲಿ ಭಾರತಕ್ಕೆ ಕಜಕಿಸ್ತಾನ ಎದುರಾಳಿ

Team Udayavani, Nov 3, 2018, 6:00 AM IST

v-21.jpg

ಬೆಂಗಳೂರು: ಫಿಬಾ ಏಷ್ಯನ್‌ ಮಹಿಳಾ ಬಾಸ್ಕೆಟ್‌ಬಾಲ್‌ ಕೂಟದ “ಬಿ’ ಡಿವಿಷನ್‌ 2ನೇ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ 83-38 ಅಂತರದಿಂದ ಹಾಂಕಾಂಗ್‌ ತಂಡವನ್ನು ಸೋಲಿಸಿ ಫೈನಲ್‌ ಪ್ರವೇಶಿಸಿದೆ. ಶುಕ್ರವಾರ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತೀಯರು ಶಿಸ್ತುಬದ್ಧ ಆಟ ಪ್ರದರ್ಶಿಸಿ ಗೆಲುವನ್ನು ಸಾರಿದರು. 

ಪಾರಮ್ಯ ಮೆರೆದ ಭಾರತ: ಭಾರತೀಯ ಆಟಗಾರ್ತಿಯರು ಆರಂಭದಿಂದಲೂ ಉತ್ತಮ ಆಟ ಪ್ರದರ್ಶಿಸಿದರು. ಮೊದಲ ಕ್ವಾರ್ಟರ್‌ನಲ್ಲಿ 23-8 ಅಂಕಗಳ ಅಂತರದಿಂದ ಮುನ್ನಡೆ ಪಡೆದರು. 2ನೇ ಕ್ವಾರ್ಟರ್‌ನಲ್ಲೂ ಹಾಂಕಾಂಗ್‌ ಚೇತರಿಸಿಕೊಳ್ಳಲಿಲ್ಲ. ಭಾರತೀಯರು ಅಷ್ಟರ ಮಟ್ಟಿಗೆ ಮುಗಿಬಿದ್ದು ಪ್ರದರ್ಶನ ನೀಡಿದರು. ಹೀಗಾಗಿ ಹಾಂಕಾಂಗ್‌ 51-21 ಅಂಕಗಳ ಅಂತರದಿಂದ ಹಿನ್ನಡೆಯಲ್ಲಿತ್ತು. ಮೂರನೇ ಕ್ವಾರ್ಟರ್‌ನಲ್ಲಿ ಭಾರತದ ದೈತ್ಯ ಆಟ ಮುಂದುವರಿಸಿ 68-23 ಅಂತರದಿಂದ ಮುನ್ನಡೆ ಪಡೆಯಿತು. ಅಂತಿಮ ಕ್ವಾರ್ಟರ್‌ನಲ್ಲಿ 83-38 ಅಂತರದಿಂದ ಗೆಲ್ಲುವ ಮೂಲಕ ಭಾರತೀಯರು ಫೈನಲ್‌ನತ್ತ ಹೆಜ್ಜೆ ಇರಿಸಿದರು.  

ಕಜಕಿಸ್ತಾನ ಭರ್ಜರಿ ಆಟ: ಇದಕ್ಕೂ ಮೊದಲು “ಬಿ’ ಡಿವಿಷನ್‌ ಮೊದಲ ಸೆಮಿಫೈನಲ್‌ನಲ್ಲಿ ಕಜಕಿಸ್ತಾನ 76-56 ಅಂಕಗಳ ಅಂತರದಿಂದ ಸಿರಿಯಾ ತಂಡವನ್ನು ಸೋಲಿಸಿ ಫೈನಲ್‌ ಪ್ರವೇಶಿಸಿತ್ತು. ಸಿರಿಯಾ ಪರ ನೌರ ಬಶಾರ 23 ಅಂಕಗಳಿಸಿದರೆ ಕಜಕಿಸ್ತಾನ ಪರ ಇನ್ನಾ ಕುಲಿಕೊವಾ 19 ಅಂಕಗಳಿಸಿದರು.

“ಎ’ ಡಿವಿಷನ್‌ ಫೈನಲ್‌ನಲ್ಲಿ ಚೀನಾ v/s ಜಪಾನ್‌
ಹಾಲಿ ಚಾಂಪಿಯನ್‌ ಚೀನಾ ಹಾಗೂ ಕಳೆದ ಬಾರಿಯ ರನ್ನರ್‌ಅಪ್‌ ಜಪಾನ್‌ ತಂಡಗಳು ಅಂಡರ್‌-18 ಏಷ್ಯನ್‌ ಚಾಂಪಿಯನ್‌ಶಿಪ್‌ ಬಾಸ್ಕೆಟ್‌ಬಾಲ್‌ “ಎ’ ಡಿವಿಷನ್‌ ಕಪ್‌ಗಾಗಿ ಫೈನಲ್‌ನಲ್ಲಿ ಸೆಣಸಾಟ ನಡೆಸಲಿವೆ. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮೊದಲ ಸೆಮಿಫೈನಲ್‌ನಲ್ಲಿ ಜಪಾನ್‌ 90-77 ಅಂಕಗಳ ಅಂತರದಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿತು. ಎರಡನೇ ಸೆಮಿಫೈನಲ್‌ನಲ್ಲಿ ಚೀನಾ 69-51 ಅಂಕಗಳ ಅಂತರದಿಂದ ಕೊರಿಯಾ ರಿಪಬ್ಲಿಕ್‌ ತಂಡವನ್ನು ಮಣಿಸಿತು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.