ವೈರಿಂಗ್‌ ಮುಗಿದು 8 ತಿಂಗಳು: ವಿದ್ಯುತ್ತಿಲ್ಲದೆ ಕಂಗಾಲು


Team Udayavani, Nov 3, 2018, 10:20 AM IST

3-november-3.gif

ಉಪ್ಪಿನಂಗಡಿ: ಬಡ ವಿಧವೆಯೊಬ್ಬರಿಗೆ ದೀನದಯಾಳ್‌ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯಡಿ ವಿದ್ಯುತ್‌ ಸೌಲಭ್ಯ ಮಂಜೂರಾಗಿದ್ದು, ಕಾಮಗಾರಿ ನಡೆದು ಎಂಟು ತಿಂಗಳಾದರೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಮನೆಗೆ ಇನ್ನೂ ವಿದ್ಯುತ್‌ ಸಂಪರ್ಕ ಕಲ್ಪಿಸಿಲ್ಲ.

ಕರಾಯ ಗ್ರಾಮದ ಪೇರಲ್ಕೆ ನಿವಾಸಿ ಬೇಬಿ ಅವರ ಕುಟುಂಬ ವಿದ್ಯುತ್‌ ಸೌಲಭ್ಯದಿಂದ ವಂಚಿತವಾಗಿದೆ. ಇವರ ಪತಿ ನಿಧನರಾಗಿದ್ದಾರೆ. ಮಕ್ಕಳೂ ಇಲ್ಲ. ಪೇರಲ್ಕೆಯ ಸಣ್ಣ ಮನೆಯಲ್ಲಿ ವಾಸವಿದ್ದಾರೆ. ಅಂತ್ಯೋದಯ ಪಡಿತರ ಚೀಟಿ ಹೊಂದಿದ್ದು, ದೀನ್‌ದಯಾಳ್‌ ಉಪಾಧ್ಯಾಯ ಯೋಜನೆಯಡಿ ಮನೆಗೆ ಉಚಿತ ವಿದ್ಯುತ್‌ ಸೌಲಭ್ಯ ಲಭಿಸಿತ್ತು. ಗುತ್ತಿಗೆದಾರರು ವೈರಿಂಗ್‌ ಕೆಲಸ ನಿರ್ವಹಿಸಿ, ಮೀಟರ್‌ ಅಳವಡಿಸಿದ್ದಾರೆ. ಇದಾಗಿ ಎಂಟು ತಿಂಗಳು ಕಳೆದರೂ ಮನೆಗೆ ವಿದ್ಯುತ್‌ ಸಂಪರ್ಕ ನೀಡಿಲ್ಲ ಎಂದು ಬೇಬಿ ಅವರ ಸಹೋದರ ಸುರೇಶ್‌ ತಿಳಿಸಿದ್ದಾರೆ.

ಗ್ರಾಮಸಭೆಯಲ್ಲಿ ಪ್ರಸ್ತಾವ
ಉಪ್ಪಿನಂಗಡಿ – ಕರಾಯ ಗ್ರಾಮದ ಶಿವಗಿರಿ ಪೇರಲ್ಕೆ ನಿವಾಸಿ ಬೇಬಿ ಅವರು ಚಿಮಿಣಿ ದೀಪದ ಬೆಳಕಿನಲ್ಲೇ ಕಾಲ ಕಳೆಯುವಂತಾಗಿದೆ. ಗುತ್ತಿಗೆದಾರರು ಕೆಲಸ ಮುಗಿಸಿದ್ದರೂ ದಾಖಲೆಗಳನ್ನು ಮೆಸ್ಕಾಂಗೆ ಒದಗಿಸದ ಕಾರಣ ವಿದ್ಯುತ್‌ ಸಂಪರ್ಕ ನೀಡಿಲ್ಲ ಎಂಬುದು ಗೊತ್ತಾಗಿದೆ. ಈ ಕುರಿತು ಗ್ರಾಮಸಭೆಯಲ್ಲಿ ಮೆಸ್ಕಾಂ ಕಿರಿಯ ಎಂಜಿನಿಯರ್‌ ಅವರ ಗಮನಕ್ಕೆ ತರಲಾಗಿತ್ತು. ತತ್‌ಕ್ಷಣ ವ್ಯವಸ್ಥೆ ಮಾಡುವುದಾಗಿ ಹೇಳಿ ಹಲವು ತಿಂಗಳೇ ಕಳೆದಿವೆ. ಈ ವರೆಗೂ ಮಹಿಳೆಯ ಮನೆಗೆ ವಿದ್ಯುತ್‌ ಸಂಪರ್ಕ ಆಗಿಲ್ಲ ಎಂದು ಸ್ಥಳೀಯ ನಿವಾಸಿ ಜಯರಾಮ ಆಚಾರ್ಯ ಆರೋಪಿಸಿದ್ದಾರೆ.

ಅಗತ್ಯ ದಾಖಲೆಗಳನ್ನು ಒದಗಿಸಿಲ್ಲ 
ಕಾಮಗಾರಿ ಪೂರ್ತಿಗೊಳಿಸಿದ ದಾಖಲೆ ಪತ್ರಗಳನ್ನು ಗುತ್ತಿಗೆದಾರರು ಮೆಸ್ಕಾಂಗೆ ನೀಡದಿರುವುದೇ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ. ಗ್ರಾಮಜ್ಯೋತಿ ಯೋಜನೆಯಡಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಪಂಚಾಯತ್‌ ನೀಡಿರುವ ಫ‌ಲಾನುಭವಿಗಳ ಪಟ್ಟಿಯಲ್ಲಿರುವ ಕುಟುಂಬಗಳಿಂದ ದಾಖಲಾತಿಗಳನ್ನು ಪಡೆದುಕೊಂಡು ಗುತ್ತಿಗೆದಾರರು ಕಾಮಗಾರಿ ನಿರ್ವಹಿಸಬೇಕು. ದ.ಕ. ಜಿಲ್ಲೆಯಲ್ಲಿ ಮಂಗಳೂರಿನ ಜ್ಯೋತಿ ಎಲೆಕ್ಟ್ರಿಕಲ್ಸ್‌ ಸಂಸ್ಥೆ ಗುತ್ತಿಗೆ ವಹಿಸಿಕೊಂಡಿದೆ. ಕಾಮಗಾರಿಯನ್ನೂ ನಿರ್ವಹಿಸಿದೆ. ಆದರೆ, ಮೆಸ್ಕಾಂಗೆ ದಾಖಲಾತಿ ನೀಡಿದ ಬಳಿಕ ಅಧಿಕಾರಿಗಳು ಪರಿಶೀಲಿಸಿ, ಮನೆಗೆ ಯುಡಿಆರ್‌ ನಂಬರ್‌ ನೀಡಿ, ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತದೆ. ವೈರಿಂಗ್‌ ಮುಗಿದಿದ್ದರೂ ಅಗತ್ಯ ದಾಖಲೆಗಳನ್ನು ಮೆಸ್ಕಾಂಗೆ ನೀಡದ ಕಾರಣ ವಿದ್ಯುತ್‌ ಸಂಪರ್ಕ ಕಲ್ಪಿಸಲು ಸಾಧ್ಯವಾಗಿಲ್ಲ ಎಂದು ಮೆಸ್ಕಾಂನ ಕಲ್ಲೇರಿ ವಿಭಾಗದ ಜೆ.ಇ. ಪ್ರಸನ್ನ ತಿಳಿಸಿದ್ದಾರೆ.

 ಎಂ. ಎಸ್‌. ಭಟ್‌ ಉಪ್ಪಿನಂಗಡಿ

ಟಾಪ್ ನ್ಯೂಸ್

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.