ಎಂ.ಪಿ.ಪ್ರಕಾಶ್ ಪುತ್ರ, ಮಾಜಿ ಶಾಸಕ ಎಂ.ಪಿ.ರವೀಂದ್ರ ಇನ್ನಿಲ್ಲ
Team Udayavani, Nov 3, 2018, 12:14 PM IST
ಬೆಂಗಳೂರು: ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹರಪ್ಪನಹಳ್ಳಿ ಯ ಮಾಜಿ ಕಾಂಗ್ರೆಸ್ ಶಾಸಕ ಎಂ.ಪಿ.ರವೀಂದ್ರ ಅವರು ಶನಿವಾರ ನಸುಕಿನ 3.30 ರ ವೇಳೆಗೆ ಬಹು ಅಂಗಾಂಗ ವೈಫಲ್ಯದಿಂದ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಪುತ್ರರಾಗಿದ್ದ ರವೀಂದ್ರ ಅವರು 2013 ರಲ್ಲಿ ಹರಪ್ಪನ ಹಳ್ಳಿ ಕ್ಷೇತ್ರದಿಂದ ಜಯಗಳಿಸಿದ್ದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಗಣ್ಯರು ರವೀಂದ್ರ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಭಾನುವಾರ ಮಧ್ಯಾಹ್ನ ಹೂವಿನ ಹಡಗಲಿಯಲ್ಲಿ ರವೀಂದ್ರ ಅವರ ಅಂತ್ಯಕ್ರಿಯೆ ನಡೆಯಲಿದೆ.
ಸಹಕಾರಿ ರಂಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರವೀಂದ್ರ ತಮ್ಮ ತಂದೆ ಎಂ.ಪಿ. ಪ್ರಕಾಶ್ ನಿಧನದ ಬಳಿಕ ಚುನಾವಣಾ ರಾಜಕೀಯಕ್ಕೆ ಕಾಲಿಟ್ಟರು. 2013ರ ಚುನಾವಣೆಯಲ್ಲಿ ಹರಪನಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿದ ರವೀಂದ್ರ 56,954 ಮತಗಳನ್ನು ಪಡೆದು ಬಿಜೆಪಿಯ ಗಣಿಧಣಿ ಜಿ.ಕರುಣಾಕರರೆಡ್ಡಿ ಅವರನ್ನು ಸೋಲಿಸುವ ಮೂಲಕ ಪ್ರಥಮ ಬಾರಿಗೆ ವಿಧಾನಸೌಧ ಪ್ರವೇಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.