ಕರ್ನಾಟಕ ಸರಕಾರ ಗಡಿಭಾಗದ ಕನ್ನಡಿಗರತ್ತ ಒಲವು ಹರಿಸಲಿ

Team Udayavani, Nov 3, 2018, 1:58 PM IST

0211mum14.jpg

ಸೊಲ್ಲಾಪುರ: ಕನ್ನಡ ಭಾಷೆ ಹೃದಯ ಭಾಷೆಯಾಗಿದ್ದು, ಅದು ನಮ್ಮೆಲ್ಲರ ಉಸಿರಾಗಿದೆ. ಭೌತಿಕವಾಗಿ ಸೊಲ್ಲಾಪುರ ಮಹಾರಾಷ್ಟ್ರದ್ದಾಗಿದ್ದರೂ ಭಾವನಾತ್ಮಕವಾಗಿ ಕರ್ನಾಟಕದ್ದಾಗಿದೆ. ಮಹಾರಾಷ್ಟ್ರ ರಾಜ್ಯದ ಪ್ರತಿರೋಧದ ಮಧ್ಯೆಯೂ ಇಲ್ಲಿನ ಕನ್ನಡಿಗರು ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವಲ್ಲಿ ನಿರತರಾಗಿದ್ದಾರೆ. ಆದರೆ ಇದಕ್ಕೆ ಕರ್ನಾಟಕದಿಂದ ಸೂಕ್ತ ಪ್ರತಿಫಲ ಸಿಗುತ್ತಿಲ್ಲವೆಂದು ನರೋಣಾ ಮಠದ ಪೂಜ್ಯ ಶ್ರೀ ಚನ್ನಮಲ್ಲ ಮಹಾಸ್ವಾಮೀಜಿ ಅವರು  ಕಳವಳ ವ್ಯಕ್ತಪಡಿಸಿದರು.

ನ. 1ರಂದು ಅಕ್ಕಲ್‌ಕೋಟದ ವಿರಕ್ತ ಮಠದಲ್ಲಿ ಆದರ್ಶ ಕನ್ನಡ ಬಳಗವು ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭುವನೇಶ್ವರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಅವರು ಮಾತನಾಡಿ, ಮಹಾರಾಷ್ಟ್ರದ ನೆಲದಲ್ಲಿ ಕರ್ನಾಟಕ ಸರಕಾರದ ಕನ್ನಡ ಭವನ ಇದ್ದರೆ ಎಲ್ಲರಿಗೂ ಅನುಕೂಲವಾಗುತ್ತೆ. ಈ ಭಾಗದ ಕನ್ನಡಿಗರು ಕನ್ನಡ ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಲ್ಲಿಯ ಕನ್ನಡಿಗರು ಅನೇಕ ರೀತಿಯ ಸಮಸ್ಯೆಗಳ ಮಧ್ಯೆಯೂ ಕನ್ನಡತನವನ್ನು ಉಳಿಸಿಕೊಂಡು ಬಂದಿದ್ದಾರೆ. ಆದ್ದರಿಂದ ಕರ್ನಾಟಕ ಸರಕಾರ ಗಡಿಭಾಗದ ಕನ್ನಡಿಗರತ್ತ ಒಲವು ಹರಿಸಲಿ ಎಂದು ಹೇಳಿದರು.

ಅಕ್ಕಲ್‌ಕೋಟೆ ವಿರಕ್ತ ಮಠದ ಪೂಜ್ಯ ಬಸವಲಿಂಗ ಮಹಾ ಸ್ವಾಮೀಜಿ ಮಾತನಾಡಿ, ಕನ್ನಡ ಭಾಷಾ ಬಾಂಧವ್ಯ ಬೆಸೆಯುವ ಭಾಷೆಯಾಗಿದ್ದು, ಕನ್ನಡ ನುಡಿ ನಮ್ಮೆಲ್ಲರ ಹೃದಯದ ಭಾಷೆ. ಆದ್ದರಿಂದ ಎಂದಿಗೂ ನಾವು ನಮ್ಮ ಭಾಷೆಯನ್ನು ಮರೆಯಬಾರದು. ಕನ್ನಡ ಭಾಷೆಯ ಉಳಿವಿಗಾಗಿ ನಾವೆಲ್ಲರೂ ಹೋರಾಟ ಮಾಡಬೇಕಿದೆ. ಆದರ್ಶ ಕನ್ನಡ ಬಳಗದ ಕಾರ್ಯ ಗಡಿಭಾಗದಲ್ಲಿ ನಿಜಕ್ಕೂ ಉನ್ನತ ಮಟ್ಟಕ್ಕೆ ಬೆಳೆದಿದ್ದು ಕನ್ನಡ ಪರ ಯಾವುದೇ ಕಾರ್ಯಕ್ರಮಗಳಿಗೆ ತಾವು ಸಹಕರಿಸುವುದಾಗಿ ಹೇಳಿದರು.

ಆದರ್ಶ ಕನ್ನಡ ಬಳಗದ ಅಧ್ಯಕ್ಷ ಮಲಿಕಜಾನ್‌ ಶೇಖ್‌ ಮಾತನಾಡಿ, ಎಲ್ಲರೂ ನಮ್ಮವರೆ ಎಂಬ ಭಾಷಾ ಸಾಮರಸ್ಯವನ್ನು ಮಹಾರಾಷ್ಟ್ರದ ಕನ್ನಡಿಗರಿಂದ ಕಲಿಯಬೇಕು. ಕನ್ನಡಮ್ಮನ ಮಡಿಲಿನಿಂದ ದೂರವಿದ್ದರೂ ಸದಾ ಕನ್ನಡಮ್ಮನನ್ನು ಆರಾಧಿಸುತ್ತಾ ಬಂದವರು. ಇಲ್ಲಿನ ಕನ್ನಡಿಗರು ಎಂದಿಗೂ ಮರಾಠಿ ಭಾಷೆಯನ್ನು ಹಿಯಾಳಿಸುವುದಿಲ್ಲ. ಹೊರನಾಡಿನಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲು ಕರ್ನಾಟಕ ಸರ್ಕಾರ ಪ್ರತಿವರ್ಷ ಅನುದಾನ ನೀಡಬೇಕು. ಇಲ್ಲಿಯ ಕನ್ನಡಿಗರನ್ನು ಒಳನಾಡಿನ ಕನ್ನಡಿಗರಂತೆ ಪರಿಗಣಿಸಬೇಕು. ಅಲ್ಲದೆ ಕಲೆ, ಸಾಹಿತ್ಯ ಪ್ರೋತ್ಸಾಹದ ಜೊತೆಗೆ ಉದ್ಯೋಗ ಭದ್ರತೆ ನೀಡಬೇಕು ಎಂದು ಆಗ್ರಹಿಸಿ ಶುಭಹಾರೈಸಿದರು.

ಹಿರಿಯ ಸಾಹಿತಿ ಅ. ಬಾ. ಚಿಕ್ಕಮಣೂರ ಅಧ್ಯಕ್ಷತೆ ವಹಿಸಿದ್ದರು. ಪೂಜ್ಯ ಬಸವಲಿಂಗ ಮಹಾಸ್ವಾಮೀಜಿ, ಉದಗಿರದ ಪೂಜ್ಯರಾದ ಶಂಭಲಿಂಗ ಶಿವಾಚಾರ್ಯ ಹಾಗೂ ನರೋಣಾ ಮಠದ ಶ್ರೀಗಳು ಭುವನೇಶ್ವರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮ ಯಶಸ್ವಿಗಾಗಿ ಮಲಿಕಜಾನ್‌ ಶೇಖ್‌, ಬಸವರಾಜ ಧನಶೆಟ್ಟಿ, ವಿದ್ಯಾಧರ ಗುರವ, ಗಿರೀಶ ಜಕಾಪುರೆ, ಸೋಮಶೇಖರ ಜಮಶೆಟ್ಟಿ, ಶರಣಪ್ಪ ಫುಲಾರಿ, ಸಂತೋಷ ಪರೀಟ, ಕಾಸು ಮಣೂರೆ, ಶಿವಾನಂದ ಮಾಳಿ, ಶರಣಯ್ನಾ ಕುಕನೂರ, ವಿರೇಶ ಕೊಳ್ಳೆ ಸೇರಿದಂತೆ ಕನ್ನಡಾಭಿಮಾನಿಗಳು ಶ್ರಮಿಸಿದರು.

ಆದರ್ಶ ಅನುವಾದ ಸಂಸ್ಥೆಯಿಂದ ಕನ್ನಡ ಮತ್ತು ಮರಾಠಿ ಭಾಷೆಯ ಹಲವಾರು ಕಥೆಗಳನ್ನು ಅನುವಾದಿಸುವ ಮೂಲಕ ಈ ಭಾಗದ ಕನ್ನಡಿಗರು ಭಾಷಾ ಬಾಂಧವ್ಯ ಮೆರೆದಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಸಂಸ್ಥೆಯಿಂದ ಅನುವಾದ ಕಮ್ಮಟ ಆಯೋಜಿಸಿ ಕನ್ನಡ ಸಾಹಿತ್ಯ ಮರಾಠಿಗೆ ಮತ್ತು ಮರಾಠಿಯಿಂದ ಕನ್ನಡಕ್ಕೆ ತರುವ ಪ್ರಯತ್ನ ಮಾಡಲಿದೆ ಎಂದು ಸಾಹಿತಿ ಗಿರೀಶ ಜಕಾಪುರೆ ಹೇಳಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.