ರಾಮಚಂದ್ರಾಪುರ ಮಠಕ್ಕೆ ಗೋಕರ್ಣ ಮಹಾಬಲೇಶ್ವರ ದೇಗುಲ ಹಸ್ತಾಂತರ
Team Udayavani, Nov 4, 2018, 6:25 AM IST
ಗೋಕರ್ಣ: ಇಲ್ಲಿನ ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ಸುಪ್ರೀಂಕೋರ್ಟ್ ಆದೇಶದಂತೆ ಸರ್ಕಾರದ ಪ್ರಭಾರ ಆಡಳಿತಾಧಿಕಾರಿ ಹಾಲಪ್ಪ ಅವರು ರಾಮಚಂದ್ರಾಪುರ ಮಠದ ಆಡಳಿತಾಧಿಕಾರಿ ಜಿ.ಕೆ. ಹೆಗಡೆ ಅವರಿಗೆ ಹಸ್ತಾಂತರಿಸಿದರು.
ಸೋಮವಾರದೊಳಗಾಗಿ ಮಠಕ್ಕೆ ಆಡಳಿತ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿತ್ತು. 45 ದಿನಗಳವರೆಗೆ ದೇವಾಲಯದ ಆಡಳಿತವನ್ನು ಸರ್ಕಾರದ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಈಗ ಹಸ್ತಾಂತರಿಸುವ ಮೂಲಕ ಈ ಹಿಂದೆ ದೇವಾಲಯದಿಂದ ವಹಿಸಿಕೊಂಡ ಚಿನ್ನಾಭರಣ, ಬೆಳ್ಳಿ ಸೇರಿ ಸಮಸ್ತ ಚರ-ಸ್ಥಿರ ಆಸ್ತಿ, ಬ್ಯಾಂಕ್ ಠೇವಣಿ, ವ್ಯವಹಾರ ನಡೆಸುವ ಚೆಕ್ ಪುಸ್ತಕಗಳು ಸೇರಿ ಎಲ್ಲವನ್ನೂ ಹಸ್ತಾಂತರಿಸಿದ್ದೇನೆಂದು ಹೇಳಿದರು.
ರಾಮಚಂದ್ರಾಪುರ ಮಠದ ದೇವಾಲಯದ ಆಡಳಿತಾಧಿಕಾರಿ ಜಿ.ಕೆ. ಹೆಗಡೆ ಮಾತನಾಡಿ, 45 ದಿನಗಳ ಹಿಂದೆ ದೇವಾಲಯದ ಆಡಳಿತವನ್ನು ಸರ್ಕಾರ ವಹಿಸಿಕೊಂಡಿತ್ತು. ಇದೀಗ ಸುಪ್ರೀಂ ಆದೇಶದಂತೆ ಸರ್ಕಾರದ ಪ್ರತಿನಿಧಿ ಆಡಳಿತಾಧಿಕಾರಿ ಹಾಲಪ್ಪ ಅವರು ಹಸ್ತಾಂತರಿಸಿದ್ದಾರೆ. ಮುಂದಿನ ದಿನಗಳಲ್ಲಿ ಭಕ್ತರ ಅನುಕೂಲ, ಅವಶ್ಯಕತೆ ಅರಿತು ಸ್ಪಂದಿಸಲಾಗುವುದು. ಈ ಹಿಂದಿನಂತೆ ಮಹಾಬಲೇಶ್ವರನ ಸೇವೆ ಮುಂದುವರಿಯುವುದು. ಉಪಾಧಿವಂತ ಮಂಡಳದ ಸಹಕಾರಗಳೊಂದಿಗೆ ಉತ್ತಮ ಆಡಳಿತ ನೀಡಲಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.