ನಟ ದುನಿಯಾ ವಿಜಯ್ ಕುಟುಂಬಕ್ಕೆ ನೋಟಿಸ್
Team Udayavani, Nov 4, 2018, 11:47 AM IST
ಬೆಂಗಳೂರು: ಶಾಂತಿ ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ ಆರೋಪದ ಮೇಲೆ ಸಿಆರ್ಪಿಸಿ 107ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಪೊಲೀಸರು ನಟ ದುನಿಯಾ ವಿಜಯ್ ಸೇರಿ 7 ಮಂದಿ ಕುಟುಂಬ ಸದಸ್ಯರಿಗೆ ದಕ್ಷಿಣ ವಲಯ ಉಪ ಪೊಲೀಸ್ ಆಯುಕ್ತ ಕೆ.ಅಣ್ಣಾಮಲೈ ಎದುರು ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ನಟ ದುನಿಯಾ ವಿಜಯ್, ಅವರ ಮೊದಲ ಪತ್ನಿ ನಾಗರತ್ನ, ಎರಡನೇ ಪತ್ನಿ ಕೀರ್ತಿಗೌಡ, ನಾಗರತ್ನ ಸಹೋದರ, ವಿಜಯ್ ಪೋಷಕರು ಹಾಗೂ ಚಾಲಕ ಸೇರಿ 7 ಮಂದಿಗೂ ನೋಟಿಸ್ ನೀಡಿದ್ದಾರೆ. ಮೊದಲ ಪತ್ನಿ ನಾಗರತ್ನ ಹಾಗೂ ಕೀರ್ತಿಗೌಡ ಪರಸ್ಪರ ಜಗಳ ಮಾಡಿಕೊಂಡು ಗಿರಿನಗರ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಿಸಿದ್ದರು.
ಜತೆಗೆ, ಹೊಸಕೆರೆಹಳ್ಳಿಯ ಮನೆಗೆ ಹೋಗಿದ್ದಾಗ ತಂದೆ ವಿಜಯ್ ತಮ್ಮ ಮೇಲೆ ಹಲ್ಲೆ ನಡೆಸಿದರು ಎಂದು ಆರೋಪಿಸಿ ಪುತ್ರಿ ಮೋನಿಕಾ ಕೂಡ ತಂದೆ ವಿಜಯ್ ವಿರುದ್ಧ ಸೆ.24 ರಂದು ಗಿರಿನಗರ ಠಾಣೆಯಲ್ಲಿ ಮತ್ತೂಂದು ದೂರು ದಾಖಲಿಸಿದ್ದರು. ಅಲ್ಲದೆ, ಈ ಹಿಂದೆ ಬಾಮೈದುನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಸಿ ಇದೇ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪದೇ ಪದೇ ಕೌಟುಂಬಿಕ ಕಲಹದ ಮೂಲಕ ಠಾಣೆ ಮೇಟ್ಟಿಲೇರುತ್ತಿರುವುದು ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು. ಈ ಮೂಲಕ ಸಮಾಜದಲ್ಲಿ ಶಾಂತಿಗೆ ಭಂಗ ತರುತ್ತಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡುವ ಉದ್ದೇಶದಿಂದ ಇಡೀ ಕುಟುಂಬದ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್ವೆಲ್ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.