ಟಿಪ್ಪು ಜಯಂತಿ: ಬಿಜೆಪಿಗೆ ಹೋರಾಟ “ಅಸ್ತ್ರ’
Team Udayavani, Nov 5, 2018, 6:00 AM IST
ಬೆಂಗಳೂರು: ವಿರೋಧದ ನಡುವೆಯೇ ರಾಜ್ಯ ಮೈತ್ರಿ ಸರ್ಕಾರವು ಹಿಂದಿನ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವುದನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿಯು ಇದನ್ನು ಸರ್ಕಾರದ ವಿರುದ್ಧದ ಹೋರಾಟದ “ಅಸ್ತ್ರ’ವನ್ನಾಗಿ ಬಳಸಿಕೊಳ್ಳಲು ಸಜ್ಜಾಗಿದೆ.
ರಾಜ್ಯ ಸರ್ಕಾರದ ವತಿಯಿಂದ ನ.10ರಂದು ಟಿಪ್ಪು ಜಯಂತಿ ಆಚರಿಸಿಯೇ ತೀರುವುದಾಗಿ ಕನ್ನಡ ಮತ್ತು ಸಂಸ್ಖƒತಿ ಇಲಾಖೆ ಸಚಿವೆ ಡಾ.ಜಯಮಾಲಾ ಅವರು ಘೋಷಿಸಿರುವ ಬೆನ್ನಲ್ಲೇ ಇದರ ವಿರುದ್ಧ ಹೋರಾಟಕ್ಕೆ ಸಿದ್ಧವಾಗಿರುವ ಬಿಜೆಪಿಯು ಪ್ರತಿರೋಧ ತೋರುವ ಜತೆಗೆ ಜನಾಭಿಪ್ರಾಯ ರೂಪಿಸಲು ಚಿಂತಿಸಿದೆ. ಸಂಘ ಪರಿವಾರವೂ ಯೋಜಿತ ರೀತಿಯಲ್ಲಿ ಪ್ರತಿರೋಧ ಒಡ್ಡಲು ಕಾರ್ಯತಂತ್ರ ರೂಪಿಸುತ್ತಿದೆ.
ಕರ್ನಾಟಕ ರಾಜ್ಯೋತ್ಸವ ಆಚರಣೆ ಸಂಭ್ರಮ ಮುಗಿಯುವ ಮುನ್ನವೇ ಮೈತ್ರಿ ಸರ್ಕಾರ ಟಿಪ್ಪು ಜಯಂತಿ ಆಚರಿಸುವುದಾಗಿ ಘೋಷಿಸಿರುವುದು ಪ್ರತಿಪಕ್ಷ ಬಿಜೆಪಿಯನ್ನು ಕೆರಳಿಸಿದೆ. ಹಿಂದಿನ ಕಾಂಗ್ರೆಸ್ ಸರ್ಕಾರ ಜಯಂತಿ ಆಚರಣೆ ಆರಂಭಿಸಿದಾಗಿನಿಂದಲೂ ಬಿಜೆಪಿ ನಿರಂತರವಾಗಿ ವಿರೋಧ ವ್ಯಕ್ತಪಡಿಸುತ್ತಾ ಬಂದಿದೆ. ವಿರೋಧದ ನಡುವೆ ನಡೆದ ಟಿಪ್ಪು ಜಯಂತಿ ವೇಳೆ ಸಂಘರ್ಷಗಳಾಗಿ ಸಾವು ನೋವು ಸಂಭವಿಸಿರುವುದು ಈಗ ಇತಿಹಾಸ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ರಚನೆಯಾಗಿರುವ ಮೈತ್ರಿ ಸರ್ಕಾರವೂ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವುದರಿಂದ ಪ್ರತಿರೋಧದ ದನಿ ದೊಡ್ಡ ಮಟ್ಟದಲ್ಲಿ ಕೇಳುವ ಲಕ್ಷಣ ಕಾಣುತ್ತಿದೆ.
ಹೋರಾಟಕ್ಕೆ ಹೊಸ “ಅಸ್ತ್ರ’
ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಉಪಚುನಾವಣೆಯಲ್ಲಿ ಮುಳುಗಿದ್ದ ಬಿಜೆಪಿ ನಾಯಕರು ಇದೀಗ ಸರ್ಕಾರದ ವಿರುದ್ಧ ಮತ್ತೂಂದು ಸುತ್ತಿನ ಹೋರಾಟಕ್ಕೆ ಅಣಿಯಾಗುತ್ತಿದ್ದಾರೆ. ಉಪಚುನಾವಣೆ ಪ್ರಚಾರದ ವೇಳೆಯೂ ಮೈತ್ರಿ ಸರ್ಕಾರದ ವೈಫಲ್ಯಗಳ ಬಗ್ಗೆಯೇ ವ್ಯಾಪಕ ಟೀಕೆ ಮಾಡಿದ್ದ ಬಿಜೆಪಿ ಮುಖಂಡರಿಗೆ ಇದೀಗ ಟಿಪ್ಪು ಜಯಂತಿ ಆಚರಣೆ ವಿವಾದ ಹೋರಾಟಕ್ಕೆ ಹೊಸ “ಅಸ್ತ್ರ’ ನೀಡಿದಂತಾಗಿದೆ. ಹಾಗಾಗಿ ಜನಾಭಿಪ್ರಾಯ ರೂಪಿಸುತ್ತಾ ಹೋರಾಟದ ರೂಪುರೇಷೆ ಹೆಣೆಯುತ್ತಿದೆ. ಸದ್ಯದಲ್ಲೇ ಬಿಜೆಪಿ ಮುಖಂಡರು ಸಭೆ ನಡೆಸಿ ಪ್ರತಿರೋಧದ ರೂಪುರೇಷೆಗಳ ಬಗ್ಗೆ ವಿಸ್ತ್ರತ ಚರ್ಚೆ ನಡೆಸಿ ಕಾರ್ಯಪ್ರವೃತ್ತರಾಗಲು ನಿರ್ಧರಿಸಿದ್ದಾರೆ. ಉಪಚುನಾವಣೆಗಳ ಫಲಿತಾಂಶ ಪ್ರಕಟವಾದ ಬಳಿಕ ಹೋರಾಟದ ವಿಧಾನ ಅಂತಿಮಗೊಳಿಸಲಿದ್ದಾರೆ.
ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನ
ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾದಾಗ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು, ಅಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಎಚ್.ಡಿ.ಕುಮಾರಸ್ವಾಮಿಯವರು ಸರ್ಕಾರದಿಂದ ಆಚರಣೆ ಅಗತ್ಯವಿರಲಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರುವಾಗ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಹಾಗಾಗಿ ಜೆಡಿಎಸ್‌ನ ಇಬ್ಬಂದಿತನ ಹಾಗೂ ಕಾಂಗ್ರೆಸ್‌ನ ಮತೀಯ ಓಲೈಕೆ ರಾಜಕಾರಣದ ಬಗ್ಗೆ ಜನರಿಗೆ ತಿಳಿಸುವ ಮೂಲಕ ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದು ಬಿಜೆಪಿಯ ಲೆಕ್ಕಾಚಾರ.
ಟಿಪ್ಪು ಜಯಂತಿ ಆಚರಣೆ ಬಹಿಷ್ಕರಿಸಬೇಕೆ ಅಥವಾ ಅದರ ವಿರುದ್ಧ ಪ್ರಜಾಸತ್ತಾತ್ಮಕವಾಗಿ ಹೋರಾಟ ನಡೆಸಬೇಕೆ ಎಂಬ ಬಗ್ಗೆ ಬಿಜೆಪಿ ವಲಯದಲ್ಲಿ ಚರ್ಚೆ ನಡೆದಿದೆ. ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಬಿಜೆಪಿ ಶಾಸಕರ ಬಲ ಕಡಿಮೆಯಿದ್ದ ಕಾರಣ ವ್ಯಾಪಕ ಪ್ರತಿರೋಧ ತೋರಲು ಸಾಧ್ಯವಾಗಿರಲಿಲ್ಲ. ಆದರೆ ಈಗ 104 ಶಾಸಕ ಬಲವಿರುವುದರಿಂದ 104 ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರತಿರೋಧ ತೋರಿದರೂ ಭಾರಿ ಗದ್ದಲ ಸೃಷ್ಟಿಯಾಗಲಿದೆ. ಹಾಗಾಗಿ ಉಪಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಸಭೆ ನಡೆಸಿ ಪಕ್ಷದ ವತಿಯಿಂದ ಹೋರಾಟ ವಿಧಾನವನ್ನು ಅಂತಿಮಗೊಳಿಸಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಸಂಘ ಪರಿಹಾರದಿಂದ ಹೋರಾಟಕ್ಕೆ ಕರೆ
ಟಿಪ್ಪು ಜಯಂತಿ ಆಚರಣೆ ವಿರುದ್ಧ ನಡೆಸಬೇಕಾದ ಹೋರಾಟ ಕುರಿತಂತೆ ಸಂಘ ಪರಿವಾರವು ಇತ್ತೀಚೆಗೆ ಮಹತ್ವದ ಸಭೆ ನಡೆಸಿ ಚರ್ಚಿಸಿದೆ. ವಿಶ್ವ ಹಿಂದೂ ಪರಿಷತ್ ಸೇರಿದಂತೆ ನಾನಾ ಹಿಂದೂಪರ ಸಂಘಟನೆಗಳು, ಬಿಜೆಪಿಯ ಆಯ್ದ ಮುಖಂಡರೊಂದಿಗೆ “ಕೇಶವಕೃಪಾ’ದಲ್ಲಿ ನಡೆದ ಸಭೆಯಲ್ಲಿ ಟಿಪ್ಪು ಜಯಂತಿಗೆ ಪ್ರತಿರೋಧ ಒಡ್ಡಬೇಕಾದ ವಿಧಾನಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿದೆ.
ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಹೋರಾಟ ನಡೆಸಬೇಕು. ಟಿಪ್ಪು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸುವ ಪ್ರದೇಶಗಳು, ಜಿಲ್ಲೆಯಲ್ಲಿ ತೀವ್ರ ಪ್ರತಿರೋಧ ತೋರಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ. ಮುಖ್ಯವಾಗಿ ಬೆಂಗಳೂರು, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಗ್ರ ಹೋರಾಟ ನಡೆಸುವ ಬಗ್ಗೆಯೂ ಮಾತುಕತೆ ನಡೆದಿದೆ. ಸದ್ಯದಲ್ಲೇ ಮತ್ತೂಂದು ಸುತ್ತಿನ ಸಭೆ ನಡೆಸಿ ಹೋರಾಟದ ರೂಪುರೇಷನೆಗಳನ್ನು ಅಂತಿಮಗೊಳಿಸಲು ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.
ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ. ಈ ಬಗ್ಗೆ ಸದ್ಯದಲ್ಲೇ ನಾಯಕರು ಸಭೆ ನಡೆಸಿ ಆಚರಣೆಯನ್ನು ಯಾವ ರೀತಿಯಲ್ಲಿ ವಿರೋಧಿಸಬೇಕು ಎಂಬ ಬಗ್ಗೆ ಚರ್ಚಿಸಿ ಮುಂದುವರಿಯಲಾಗುವುದು.
– ಎನ್.ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ
– ಎಂ.ಕೀರ್ತಿಪ್ರಸಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.