ಮೀ ಟೂ ಹೆಣ್ಣಿಗಷ್ಟೆ ಅಲ್ಲ ಗಂಡಿಗೂ ಮುಜುಗರ : ಜಯಮಾಲಾ
Team Udayavani, Nov 5, 2018, 6:20 AM IST
ಹಾಸನ: ಮೀ ಟೂ ಪ್ರಕರಣಗಳು ಮಹಿಳೆಯರಿಗಷ್ಟೇ ಅಲ್ಲ. ಪುರುಷರಿಗೂ ಮುಜುಗರ ತರುತ್ತಿವೆ ಎಂದು ಸಚಿವೆ ಡಾ.ಜಯಮಾಲಾ ತಿಳಿಸಿದರು.
ಹಾಸನಾಂಬೆಯ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಹೆಣ್ಣಿಗೆ ಪದೇ ಪದೆ ಮುಜುಗರಕ್ಕೊಳಪಡಿಸುವ ಪ್ರಕರಣಗಳು ನಡೆಯುತ್ತಲೇ ಬಂದಿವೆ. ನ್ಯಾಯಾಲಯಕ್ಕೆ ಹೋದರೂ ಸಾಕ್ಷಿಗಳನ್ನು ಒದಗಿಸಲಾಗದೆ ಮತ್ತಷ್ಟು ಮುಜುಗರವನ್ನು ಮಹಿಳೆಯರು ಅನುಭವಿಸುವಂತಾಗಿದೆ. ಇದು ಪುರುಷರಿಗೂ ಅನ್ವಯಿಸುತ್ತದೆ. ಹಾಗಾಗಿ ಅವರವರೇ ತೀರ್ಮಾನ ಮಾಡಿಕೊಳ್ಳಬೇಕಾಗುತ್ತದೆ ಎಂದರು.
ಇದಕ್ಕೂ ಮೊದಲು ಅವರು ಹಾಸನಾಂಬೆಯ ದರ್ಶನ ಪಡೆದರು. ಹಾಸನಾಂಬೆಯ ದರ್ಶನ ಪಡೆಯಬೇಕೆಂಬುದು ತನ್ನ ಬಹಳ ವರ್ಷಗಳ ಬಯಕೆಯಾಗಿತ್ತು. ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆಯನ್ನು ಪ್ರಥಮ ಬಾರಿಗೆ ತುಂಬಾ ಹತ್ತಿರದಿಂದ ನೋಡಲು ಅವಕಾಶ ಸಿಕ್ಕಿದ್ದು ತನ್ನ ಪುಣ್ಯ ಎಂದು ಹರ್ಷ ವ್ಯಕ್ತಪಡಿಸಿದರು. ಚಿತ್ರನಟ, ನಿರ್ಮಾಪಕ ರಾಘವೇಂದ್ರ ರಾಜಕುಮಾರ್ ಸಹ ದೇವಾಲಯಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.