ಪರೀಕ್ಷಾ ಕೇಂದ್ರ ಬದಲಾಯಿಸಲ್ಲ: ಸ್ಪಷ್ಟನೆ
Team Udayavani, Nov 5, 2018, 6:55 AM IST
ಬೆಂಗಳೂರು: ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಹುದ್ದೆಗೆ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಕೇಂದ್ರ ಬದಲಾವಣೆಯ ಮನವಿ ಸ್ವೀಕರಿಸುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಗೆ ಸೂಚಿಸಿದೆ.
ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿರುವ ಪರೀಕ್ಷಾ ಕೇಂದ್ರಕ್ಕೂ, ಪ್ರಾಧಿಕಾರದಿಂದ ನೀಡಿರುವ ಕೇಂದ್ರಕ್ಕೂ ಸಾಕಷ್ಟು ವ್ಯತ್ಯಾಸ ಇತ್ತು.ಮಂಗಳೂರು, ಬೆಂಗಳೂರು, ಮೈಸೂರು ಸೇರಿ ಆಯಾ ಜಿಲ್ಲೆಯ ಪರೀಕ್ಷಾ ಕೇಂದ್ರ ಆಯ್ಕೆ ಮಾಡಿಕೊಂಡವರಲ್ಲಿ ಕೆಲವರಿಗೆ ಪರೀಕ್ಷಾ ಕೇಂದ್ರವೇ ಬದಲಾಗಿದೆ. ಇದನ್ನು ಸರಿಪಡಿಸುವಂತೆ ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಆದರೆ, ಪ್ರಾಧಿಕಾರದಿಂದ ಪರೀಕ್ಷಾ ಕೇಂದ್ರ ಬದಲಾಯಿಸಲು ಸಾಧ್ಯವಿಲ್ಲ ಎಂದು ಖಡಕ್ ಉತ್ತರ ರವಾನಿಸಲಾಗಿದೆ. ಅಭ್ಯರ್ಥಿಗಳ ಪರೀಕ್ಷಾ ಕೇಂದ್ರ ಬದಲಾವಣೆಗೆ ಸಲ್ಲಿಸುವ ಮನವಿ ಪರಿಗಣಿಸುವುದಿಲ್ಲ.
ಕೇವಲ ವಿಶೇಷ ಸಂದರ್ಭದಲ್ಲಿ ಮಾತ್ರ ವೈದ್ಯಕೀಯ ಕಾರಣಗಳಿಗೆ ಪರೀಕ್ಷಾ ಕೇಂದ್ರ ಬದಲಿಸಬಹುದಾಗಿದೆ. ಅಂತಹ ಅಭ್ಯರ್ಥಿಗಳು ದೃಢೀಕೃತ ವೈದ್ಯಕೀಯ ದಾಖಲೆಗಳೊಂದಿಗೆ ನ.7ರೊಳಗೆ ಖುದ್ದಾಗಿ ಪ್ರಾಧಿಕಾರಕ್ಕೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಉಪನ್ಯಾಸಕರ ನೇಮಕಾತಿ ಸಂಬಂಧ ಅ.26ರಂದು ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿನ ಮಾಹಿತಿಗೆ ಸಲ್ಲಿಕೆಯಾದ
ಆಕ್ಷೇಪಣೆಗಳನ್ನು ಪರಿಗಣಿಸಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿ ದವರ ಪರಿಷ್ಕೃತ ಪಟ್ಟಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಪರಿಷ್ಕೃತ ಪಟ್ಟಿಯಲ್ಲಿ ಅಭ್ಯರ್ಥಿಯು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ್ದರೂ ಹೆಸರು ನಮೂದಿತವಾಗಿಲ್ಲದಿದ್ದರೇ ಅಂತಹ ಅಭ್ಯರ್ಥಿಗಳು ಎಲ್ಲ ದಾಖಲೆಗ ಳೊಂದಿಗೆ ನ.7ರೊಳಗೆ ಪ್ರಾಧಿಕಾರಕ್ಕೆ ಖುದ್ದಾಗಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮಾಹಿತಿಗಾಗಿ ವೆಬ್ ಸೈಟ್ http://kea.kar.nic.in/ ಗೆ ಭೇಟಿ ನೀಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.