ಮಕ್ಕಳ ದಿನಾಚರಣೆಗೆ ಜೀರ್‌ಜಿಂಬೆ

Team Udayavani, Nov 5, 2018, 11:09 AM IST

jeerjimbe.jpg

“ಜೀರ್‌ಜಿಂಬೆ’ ಎಂಬ ಚಿತ್ರವೊಂದು ಪ್ರಶಸ್ತಿಗಳನ್ನು ಪಡೆದಿರುವ, ಆ ಮೂಲಕ ಸುದ್ದಿಯಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಆ ನಂತರ ಆ ಚಿತ್ರ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿರಲಿಲ್ಲ. ಈಗ ಈ ಚಿತ್ರ ಸುದ್ದಿಯಲ್ಲಿದೆ. ಅದಕ್ಕೆ ಕಾರಣ ಮಕ್ಕಳ ದಿನಾಚರಣೆ. ಹೌದು, ನವೆಂಬರ್‌ 14 ಮಕ್ಕಳ ದಿನಾಚರಣೆ. ಹೀಗಾಗಿ, “ಜೀರ್‌ಜಿಂಬೆ’ ಚಿತ್ರ ಕೂಡಾ ಸೌಂಡ್‌ ಮಾಡುತ್ತಿದೆ. ಮಕ್ಕಳ ದಿನಾಚರಣೆಗೂ “ಜೀರ್‌ಜಿಂಬೆ’ಗೂ ಏನು ಸಂಬಂಧ ಎಂದು ನೀವು ಕೇಳಬಹುದು.

“ಜೀರ್‌ಜಿಂಬೆ’ ಮಕ್ಕಳ ಸಿನಿಮಾ. ಈಗ ಆ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ನವೆಂಬರ್‌ 15 ರಂದು ತೆರೆಕಾಣುತ್ತಿದೆ. ಈ ಮೂಲಕ ಮಕ್ಕಳಿಗೆ ಸಿನಿಮಾವನ್ನು ಕೊಡುಗೆಯಾಗಿ ನೀಡಲು ಚಿತ್ರತಂಡ ಮುಂದಾಗಿದೆ. ನಾಲ್ಕು ರಾಜ್ಯಪ್ರಶಸ್ತಿ ವಿಜೇತ ಹಾಗು ಹಲವಾರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಎಲ್ಲರಿಂದಲೂ ಮೆಚ್ಚುಗೆಗೆ ಪಾತ್ರವಾಗಿರುವ ಈ ಚಿತ್ರವನ್ನು ಕಾರ್ತಿಕ್‌ ಸರಗೂರು ನಿರ್ದೇಶಿಸಿದ್ದಾರೆ. 

ಎಲ್ಲಾ ಓಕೆ, “ಜೀರ್‌ಜಿಂಬೆ’ ಟೈಟಲ್‌ಗ‌ೂ ಕಥೆಗೂ ಹೇಗೆ ಹೊಂದಿಕೆಯಾಗುತ್ತದೆ ಎಂದು ನೀವು ಕೇಳಬಹುದು. ನಿರ್ದೇಶಕರು ಅದಕ್ಕೂ ಉತ್ತರಿಸುತ್ತಾರೆ. “ಇಡೀ ಸಿನಿಮಾ ಹೆಣ್ಣು ಮಗುವಿನ ಸುತ್ತ ಸಾಗಲಿದ್ದು, ಹೆಣ್ಣುಮಗುವಿನ ಜೀವನದ ಹಂತಗಳನ್ನು ಜೀರ್‌ಜಿಂಬೆಯ ಜೀವನದ ಹಂತದಂತೆ ಹೇಳಲು ಪ್ರಯತ್ನಿಸಿದ್ದೇನೆ. ಇಲ್ಲಿ ಸರ್ಕಾರಿ ಶಾಲೆಗಳಲ್ಲಿ ನೀಡುವ ಸೈಕಲ್‌ ಮತ್ತು ಅದರೊಂದಿಗೆ ಹೆಣ್ಣು ಮಗುವಿನ ಸಂಬಂಧವನ್ನು ಹೇಳಿದ್ದೇನೆ.

ಜೀವನದ ಪ್ರತಿ ಹಂತಗಳಲ್ಲಿ ಎದುರಾಗುವ ಸವಾಲುಗಳನ್ನು  ಹೇಗೆ ಎದುರಿಸಿ ಮುನ್ನಡೆಯುತ್ತಾಳೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ’ ಎನ್ನುವುದು ನಿರ್ದೇಶಕ ಕಾರ್ತಿಕ್‌ ಸರಗೂರು ಮಾತು. ಅಂದಹಾಗೆ, ಇದು ಕ್ರೌಡ್‌ ಫ‌ಂಡಿಂಗ್‌ ಮೂಲಕ ನಿರ್ಮಾಣವಾದ ಚಿತ್ರ. ಸುಮಾರು 36 ಜನ ಈ ಸಿನಿಮಾದ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಚಿತ್ರವನ್ನು ಮೆಚ್ಚಿಕೊಂಡಿರುವ ಪುಷ್ಕರ್‌ ಫಿಲಂಸ್‌ನ ಪುಷ್ಕರ್‌ ಕೂಡಾ ಸಿನಿಮಾದ ನಿರ್ಮಾಣ ಹಾಗೂ ಬಿಡುಗಡೆಯಲ್ಲಿ ಕೈ ಜೋಡಿಸಿದ್ದಾರೆ.

ಮಕ್ಕಳು ನೋಡುವಂತಹ ಒಳ್ಳೆಯ ಅಂಶಗಳಿರುವ ಸಿನಿಮಾ ಇದಾಗಿದ್ದರಿಂದ ತಾವು ನಿರ್ಮಾಣದಲ್ಲಿ ಪಾಲ್ಗೊಂಡಿದ್ದಾಗಿ ಹೇಳುತ್ತಾರೆ. ಈ ಚಿತ್ರವನ್ನು ಪೋಷಕರು ಹಾಗೂ ಮಕ್ಕಳು ನೋಡಿ ಆನಂದಿಸಬಹುದು ಎನ್ನಲು ಅವರು ಮರೆಯುವುದಿಲ್ಲ. ಚಿತ್ರದಲ್ಲಿ “ಬೆಳದಿಂಗಳ ಬಾಲೆ’ ಖ್ಯಾತಿಯ ಸುಮನ್‌ ನಗರ್‌ಕರ್‌ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಜೊತೆಗೆ ರಂಗಭೂಮಿ ಕಲಾವಿದರು ಕಾಣಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.