ಪೋತೀಸ್ನಲ್ಲಿ ಅನ್ನಸಂತರ್ಪಣೆಯ ರಾಜ್ಯೋತ್ಸವ
Team Udayavani, Nov 5, 2018, 12:20 PM IST
ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ಪೋತೀಸ್ ವಸ್ತ್ರಭಂಡಾರದ ಕೆಂಪೇಗೌಡ ರಸ್ತೆಯ ಮಳಿಗೆಯಲ್ಲಿ 1500 ಮಂದಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ವಿಶಿಷ್ಟ ರೀತಿಯಲ್ಲಿ ರಾಜ್ಯೋತ್ಸವ ಆಚರಿಸಲಾಯಿತು.
ನಗರದ ಪೋತೀಸ್ ಮಳಿಗೆಗೆ ಇದು ಪ್ರಥಮ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆಯಾದ್ದರಿಂದ ಇಡೀ ವಸ್ತ್ರಭಂಡಾರವನ್ನು ಹಳದಿ-ಕೆಂಪು ಬಣ್ಣದಿಂದ ಸಿಂಗರಿಸಲಾಗಿತ್ತು. ಅಲ್ಲದೆ, ಕನ್ನಡ ಧ್ವಜಗಳು ರಾರಾಜಿಸುತ್ತಿದ್ದವು. ಸಿಬ್ಬಂದಿ ಶ್ವೇತ ವರ್ಣದ ಉಡುಗೆ ತೊಟ್ಟು ಕನ್ನಡ ಧ್ವಜ ಹಾಗೂ ಬಣ್ಣದ ಶಾಲು ಹಾಕಿಕೊಂಡು ಗ್ರಾಹಕರನ್ನು ಸ್ವಾಗತಿಸುತ್ತಿದ್ದದ್ದು ಕಂಡುಬಂತು. ಮಳಿಗೆಯಲ್ಲಿ ಕನ್ನಡ ಗೀತೆಗಳ ಧ್ವನಿ ಮೊಳಗುತ್ತಿದ್ದದ್ದು ವಿಶೇಷವಾಗಿತ್ತು.
ಕನ್ನಡ ಜನತೆಗೆ ಅನ್ನಸಂತರ್ಪಣೆ ನೀಡುವ ಮೂಲಕ ಮೊದಲ ವರ್ಷದ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿರುವುದು ಸಂತಸತಂದಿದೆ. ಸದ್ಯದಲ್ಲೇ ದೀಪಾವಳಿ ಹಬ್ಬ ಇರುವುದರಿಂದ ವಸ್ತ್ರಗಳ ಮೇಲೆ ರಿಯಾಯಿತಿ ಹಾಗೂ ಪ್ರತಿ ಶಾಪಿಂಗ್ ಮೇಲೆ ಗ್ರಾಹಕರಿಗೆ ಒಂದು ಸೀಟ್ ಬಾಕ್ಸ್ ಅನ್ನು ಉಡುಗೊರೆಯಾಗಿ ನೀಡುತ್ತಿದ್ದೇವೆ ಎಂದು ಪೋತೀಸ್ ಪ್ರಧಾನ ವ್ಯವಸ್ಥಾಪಕ ಕೃಷ್ಣ ಕುಮಾರ್ ವಿವರಿಸಿದ್ದಾರೆ.
ಈ ಸಂದರ್ಭದಲ್ಲಿ ಮೀಡಿಯಾ ಮ್ಯಾನೇಜರ್ ಪಿ.ಜೆ.ವಿಜಯ್, ಮಾನವ ಸಂಪನ್ಮೂಲ ಅಧಿಕಾರಿ ಸರವಣನ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್ಐ ಸಸ್ಪೆಂಡ್
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.