ದಲಿತ ಸಂಘಟನೆ ಹೆಸರಲ್ಲಿ ವಸೂಲಿ

Team Udayavani, Nov 5, 2018, 12:20 PM IST

dalita.jpg

ಬೆಂಗಳೂರು: ದಲಿತ ಸಂರಕ್ಷಕ ಸಮಿತಿ ಸಂಘಟನೆ ಹೆಸರಿನಲ್ಲಿ ಮೀಟರ್‌ ಬಡ್ಡಿಗೆ ಹಣ ನೀಡಿ ಅಮಾಯಕರಿಗೆ ಕಿರುಕುಳ ನೀಡುತ್ತಿದಲ್ಲದೆ, ನಿರ್ಮಾಣ ಹಂತದ ಕಟ್ಟಡದ ಬಿಲ್ಡರ್‌ ಮತ್ತು ಇಂಜಿನಿಯರ್‌ಗಳಿಗೆ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಾಲಕೃಷ್ಣ ಕೆ.ವಿ ಅಲಿಯಾಸ್‌ ಲಯನ್‌ ಬಾಲಕೃಷ್ಣ ಹಾಗೂ ಹುಬ್ಬಳ್ಳಿಯ ದಾದಾಪೀರ್‌ ಹಲಗೇರಿ ಮೊಹಮ್ಮದ್‌ ಇಸಾಕ್‌ ಬಂಧಿತರು. ಆರೋಪಿಗಳ ಪೈಕಿ ಬಾಲಕೃಷ್ಣ  ದಲಿತ ಸಂರಕ್ಷಕ ಸಮಿತಿ ಹೆಸರಿನ ಸಂಘಟನೆ ಸ್ಥಾಪಿಸಿಕೊಂಡಿದ್ದು, ಮನೆಯಲ್ಲೇ ಕಚೇರಿ ಹೊಂದಿದ್ದಾನೆ.

ಈ ಮೂಲಕ ಬಡ್ಡಿ ವ್ಯವಹಾರ ನಡೆಸುತ್ತ, ಸಾರ್ವಜನಿಕರಿಗೆ ಅಧಿಕ ಬಡ್ಡಿಗೆ ಹಣ ಕೊಟ್ಟಿದ್ದ. ಈ ಮಧ್ಯೆ 2014ರಲ್ಲಿ ರಾಜು ಎಂಬುವರಿಗೆ ಬಿಡಿಎ ನಿವೇಶನ ಕೊಡಿಸುವುದಾಗಿ ಹೇಳಿ 5 ಲಕ್ಷ ರೂ. ಪಡೆದು, ನಿವೇಶನ ಕೊಡಿಸದೆ ವಂಚಿಸಿದ್ದ. ಈ ಸಂಬಂಧ ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಗಂಭೀರ ಸ್ವರೂಪವಾದರಿಂದ ಪ್ರಕರಣವನ್ನು ನಗರ ಪೊಲೀಸ್‌ ಆಯುಕ್ತರು ಸಿಸಿಬಿಗೆ ವರ್ಗಾಯಿಸಿದ್ದರು.

ಇದೀಗ ಪ್ರಕರಣದ ತನಿಖೆ ಆರಂಭಿಸಿರುವ ಸಿಸಿಬಿ ಪೊಲೀಸರು, ಅ.23ರಂದು ಇಂದಿರಾನಗರದ ಎ.ನಾರಾಯಣಪುರದಲ್ಲಿರುವ ಬಾಲಕೃಷ್ಣ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಮನೆಯಲ್ಲಿದ್ದ 1.28 ಲಕ್ಷ ರೂ. ನಗದು, ಏರ್‌ಗನ್‌ ಮತ್ತು ಏರ್‌ ಪಿಸ್ತೂಲ್‌, ಹಲವು ಚೆಕ್‌ಗಳು ಹಾಗೂ ಇತರೆ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಈತನ ವಿಚಾರಣೆ ವೇಳೆ ಕೆಲ ಮಹತ್ವದ ವಿಚಾರ ಬೆಳಕಿಗೆ ಬಂದಿದ್ದು, ಹುಬಳ್ಳಿಯ ದಾದಾಪೀರ್‌ ಬಗ್ಗೆ ಹೇಳಿದ್ದ ಎಂದು ಪೊಲೀಸರು ಹೇಳಿದರು.

ಆರ್‌ಟಿಐ ದುರ್ಬಳಕೆ: ಆರೋಪಿ ಬಾಲಕೃಷ್ಣ ತನ್ನ ಸಹಚರನಾದ ಹುಬ್ಬಳ್ಳಿಯ ದಾದಾಪೀರ್‌ ಹಲಗೇರಿ ಜತೆ ಸೇರಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ)ಮೂಲಕ ಮಾಹಿತಿ ಪಡೆಯುತ್ತಿದ್ದರು. ಬಳಿಕ ಕಟ್ಟಡಕ್ಕೆ ಸಂಬಂಧಪಟ್ಟ ಎಂಜಿನಿಯರ್‌ ಮತ್ತು ಮಾಲೀಕರಿಗೆ ಬೆದರಿಸಿ, ಹಣ ಸುಲಿಗೆ ಮಾಡುತ್ತಿದ್ದರು ಎಂದು ತಿಳಿದು ಬಂದಿತ್ತು. ಈ ಹಿನ್ನೆಯಲ್ಲಿ ನ.3ರಂದು ದಾದಾಪೀರ್‌ನನ್ನು ಬಂಧಿಸಲಾಗಿದೆ ಎಂದು ಸಿಸಿಪಿ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.