ಕೇರಳದಲ್ಲಿ ಸಹಸ್ರಾರು ಅಕ್ರಮ ಬಾಂಗ್ಲಾದೇಶಿ ವಲಸಿಗರು


Team Udayavani, Nov 7, 2018, 9:29 AM IST

11.jpg

ಕಣ್ಣೂರು: ಕೇರಳದಲ್ಲಿ ಸಹಸ್ರಾರು ಬಾಂಗ್ಲಾದೇಶಿ ಅಕ್ರಮ ವಲಸಿಗರು ಠಿಕಾಣಿ ಹೂಡಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿದೆಯಾದರೂ ಅವರನ್ನು ಗುರುತಿಸುವುದು ಪೊಲೀಸರ ಪಾಲಿಗೆ ಕಠಿನ ಸವಾಲಾಗಿ ಪರಿಣಮಿಸಿದೆ.
ಭಾರತಕ್ಕೆ ಅಕ್ರಮವಾಗಿ ನುಸುಳುವ ಬಾಂಗ್ಲಾದೇಶಿಯರು ಬಂಗಾಲದಿಂದ ರಾಜ್ಯಕ್ಕೆ ಆಗಮಿಸುವ ವಲಸಿಗ ಕಾರ್ಮಿಕರೊಂದಿಗೆ ಸೇರಿಕೊಳ್ಳುತ್ತಾರೆ. ರಾಜ್ಯದಲ್ಲಿ ಸಂಭವಿಸಿದ ದರೋಡೆ ಪ್ರಕರಣಗಳ ತನಿಖೆ ವೇಳೆ ಸಹಸ್ರಾರು ಅಕ್ರಮ ಬಾಂಗ್ಲಾ ವಲಸಿಗರು ಇಲ್ಲಿ ವಾಸ್ತವ್ಯ ಹೂಡಿರುವ ವಿಚಾರ ಬೆಳಕಿಗೆ ಬಂದಿದೆ. ಅವರು ಬಾಂಗ್ಲಾದೇಶಕ್ಕೆ ಮಾಡುತ್ತಿರುವ ಫೋನ್‌ ಕರೆಗಳ ವಿವರಗಳನ್ನು ಕೂಡ ಸೈಬರ್‌ ಪೊಲೀಸರು ಕಲೆಹಾಕಿದ್ದಾರೆ.

ಮಲಯಾಳ ದೈನಿಕವೊಂದರ ಸುದ್ದಿ ಸಂಪಾದಕ ವಿನೋದ್‌ ಚಂದ್ರನ್‌ ಮತ್ತು ಅವರ ಪತ್ನಿಯ ಮೇಲೆ ದಾಳಿ ನಡೆಸಿ ದರೋಡೆಗೈಯಲಾದ ಪ್ರಕರಣದ ತನಿಖೆ ವೇಳೆ ಕಣ್ಣೂರು ಒಂದರಲ್ಲೇ ನೂರಾರು ಬಾಂಗ್ಲಾದೇಶಿಯರು ಅಕ್ರಮವಾಗಿ ವಾಸಿಸುತ್ತಿರುವ ವಿಚಾರ ಪೊಲೀಸರ ಗಮನಕ್ಕೆ ಬಂದಿತು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಅಸಂಖ್ಯ ದೂರವಾಣಿ ಕರೆಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬಾಂಗ್ಲಾದೇಶಕ್ಕೆ 1,000ಕ್ಕೂ ಅಧಿಕ ಕರೆಗಳನ್ನು ಮಾಡಲಾಗಿರುವುದು ಬೆಳಕಿಗೆ ಬಂದಿದೆ. ಬಾಂಗ್ಲಾದೇಶಿಯರನ್ನು ಪತ್ತೆ ಮಾಡುವುದಕ್ಕೆ ಗೃಹ ಖಾತೆ ತನ್ನಲ್ಲಿರುವ ವ್ಯವಸ್ಥೆಯನ್ನು ಬಳಸಿಕೊಳ್ಳುತ್ತಿಲ್ಲವೆಂದು ಆಪಾದಿಸಲಾಗಿದೆ. ಬಾಂಗ್ಲಾದೇಶಿಯರು ಜೀವನೋಪಾಯ ಅರಸುತ್ತ ಬಂಗಾಲಿಗಳೊಂದಿಗೆ ರಾಜ್ಯಕ್ಕೆ ಆಗಮಿಸುತ್ತಾರೆ. ಆದರೆ ಅವರು ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದಕ್ಕೆ ಪೊಲೀಸರಿಗೆ ಈತನಕ ಯಾವುದೇ ಪುರಾವೆ ಸಿಕ್ಕಿಲ್ಲ.

ಎರಡು ದರೋಡೆ ಪ್ರಕರಣ
ಬಾಂಗ್ಲಾದೇಶಿಯರು ಪಾಲ್ಗೊಂಡ ಎರಡು ಪ್ರಮುಖ ದರೋಡೆ ಪ್ರಕರಣಗಳು ರಾಜ್ಯದಲ್ಲಿ ಸಂಭವಿಸಿವೆ. ಒಂದು ಘಟನೆ ಎರ್ನಾಕುಳಂನಲ್ಲಿ ಸಂಭವಿಸಿದರೆ ಇನ್ನೊಂದು ಘಟನೆ ಕಣ್ಣೂರಿನಲ್ಲಿ ಸಂಭವಿಸಿತ್ತು. ಎರಡೂ ಪ್ರಕರಣಗಳಲ್ಲಿ ಒಂದೇ ತಂಡ ಭಾಗಿಯಾಗಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ. ಕರ್ನಾಟಕ ಹಾಗೂ ತಮಿಳುನಾಡಿನಿಂದಲೂ ಇದೇ ಬಗೆಯ ದರೋಡೆ ಪ್ರಕರಣಗಳು ವರದಿಯಾಗಿವೆ. ಕಣ್ಣೂರು ಪ್ರಕರಣದ ದುಷ್ಕರ್ಮಿಗಳನ್ನು ಬಹುತೇಕ ಗುರುತಿಸಲಾಗಿದ್ದು ಈಗ ಅವರು ಬಾಂಗ್ಲಾದೇಶದಲ್ಲಿದ್ದಾರೆಂದು ನಂಬಲಾಗಿದೆ. ಆದರೆ ಉಭಯ ರಾಷ್ಟ್ರಗಳ ನಡುವೆ ಗಡೀಪಾರು ಒಪ್ಪಂದ ಇಲ್ಲದಿರುವುದರಿಂದ ಪೊಲೀಸರು ಸಂದಿಗ್ಧಕ್ಕೆ ಸಿಲುಕಿದ್ದಾರೆ.

ದರೋಡೆ ತಂಡಗಳು ರೈಲ್ವೇ ಹಳಿಗಳ ಪಕ್ಕದಲ್ಲಿರುವ ಮನೆಗಳನ್ನು ಗುರಿಯಾಗಿಸುತ್ತಾರೆಂದು ಪೊಲೀಸರು ಕಂಡುಕೊಂಡಿದ್ದಾರೆ. ಮೊದಲು ಮನೆಯನ್ನು ಪತ್ತೆ ಮಾಡುವುದು ಹಾಗೂ ದರೋಡೆ ಎಸಗಿದ ಕೂಡಲೇ ಪ್ರದೇಶದಿಂದ 
ತಪ್ಪಿಸಿಕೊಳ್ಳುವುದು ಅವರ ಕಾರ್ಯಾಚರಣಾ ಶೈಲಿಯಾಗಿದೆ. ಈ ತಂಡವನ್ನು ಸೆರೆಹಿಡಿದಲ್ಲಿ ಅನೇಕ ದರೋಡೆ ಪ್ರಕರಣಗಳ ಕುರಿತು ಸುಳಿವು ಸಿಗಬಹುದೆಂಧು ಪೊಲೀಸರು ಭಾವಿಸಿದ್ದಾರೆ.

ಏಜೆಂಟರ ಮೂಲಕ ಹಣ ರವಾನೆ
ಬಾಂಗ್ಲಾದೇಶಿಯರು ತಮ್ಮ ಊರಿಗೆ ನೇರವಾಗಿ ಹಣ ಕಳುಹಿಸುವುದಿಲ್ಲ. ಈ ರೀತಿ ಮಾಡಿದರೆ ಸಿಕ್ಕಿ ಬೀಳುವ ಅಪಾಯ ಇರುವುದರಿಂದ ಬಂಗಾಲದಲ್ಲಿರುವ ಕೆಲ ಏಜೆಂಟರ ಮೂಲಕ ಅವರು ಹಣವನ್ನು ಕಳುಹಿಸುತ್ತಾರೆ. ಇಲ್ಲಿಂದ ಕದ್ದ ಮೊಬೈಲ್‌ ಫೋನ್‌ಗಳನ್ನು ಕೂಡ ಅವರು ತಮ್ಮ ದೇಶಕ್ಕೆ ತಲಪಿದ ಬಳಿಕವೇ ಬಳಸುತ್ತಾರೆ. ದಿಲ್ಲಿಯ ಸೀಮಾಪುರಿ ಸುತ್ತಮುತ್ತ ಕೇಂದ್ರೀಕೃತಗೊಂಡಿರುವ ಚಿನ್ನವಹಿವಾಟು ವ್ಯವಸ್ಥೆಯನ್ನು ಕೂಡ ಅವರು ಹೊಂದಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Janapada-Academy

Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್‌ ಅಧಿಕಾರಿ ದೂರು

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

1-ttd

Waqf board ರಿಯಲ್‌ ಎಸ್ಟೇಟ್‌ ಸಂಸ್ಥೆ ಇದ್ದಂತೆ: ಒವೈಸಿಗೆ ಟಿಟಿಡಿ ಟಾಂಗ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

DK-Shivakuamar

By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ

Janapada-Academy

Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ

High-Court

Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

current

Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು

mob

WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್‌ ಅಧಿಕಾರಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.