ವರ್ಗಾವಣೆ ನಿಯಮದಿಂದ ಸಿಸಿಬಿ ಅಧಿಕಾರಿಗಳಿಗೆ ವಿನಾಯಿತಿ
Team Udayavani, Nov 9, 2018, 11:47 AM IST
ಬೆಂಗಳೂರು: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೇಂದ್ರ ಅಪರಾಧ ಘಟಕಗಳಲ್ಲಿ ( ಸಿಸಿಬಿ) ಕಾರ್ಯನಿರ್ವಹಿಸುತ್ತಿರುವ ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್‌ಗಳಿಗೆ ಐದು ವರ್ಷಗಳ ಅವಧಿ ಪೂರೈಸಿದ ಬಳಿಕ ವರ್ಗಾವಣೆ ನಿಯಮದಿಂದ ವಿನಾಯಿತಿ ನೀಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.
ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಸಿಸಿಬಿ ಘಟಕಗಳನ್ನು ಮತ್ತಷ್ಟು ಬಲಗೊಳಿಸುವುದು ಹಾಗೂ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಸಲುವಾಗಿ ಈ ಆದೇಶ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸಿಸಿಬಿಯಲ್ಲಿ ಕಾರ್ಯನಿರ್ವಹಿಸುವ ಡಿವೈಎಸ್‌ಪಿಗಳು ಹಾಗೂ ಇನ್ಸ್‌ಪೆಕ್ಟರ್‌ಗಳಿಗೆ ತಮ್ಮ ವ್ಯಾಪ್ತಿಯಲ್ಲಿನ ಅಪರಾಧಗಳು ಹಾಗೂ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿರುವ ಕುರಿತು ಹೆಚ್ಚು ಅನುಭವ ಹಾಗೂ ಮಾಹಿತಿ ಇರಲಿದೆ.
ಇದರಿಂದ ಅಪರಾಧ ಕೃತ್ಯಗಳನ್ನು ತಡೆಗಟ್ಟಲು, ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಅವರ ಸೇವಾ ಅವಧಿಯನ್ನು ನಿರ್ದಿಷ್ಟ ಕಾಲಾವಧಿಗೆ ಸೀಮಿತಗೊಳಿಸುವುದು ಸರಿಯಲ್ಲ. 5 ವರ್ಷಗಳಿಗಿಂತ ಹೆಚ್ಚು ಅವಧಿ ಪೂರೈಸಿದವರಿಗೆ ಕಮಿಷನರೇಟ್ ವ್ಯಾಪ್ತಿಯಿಂದ ವರ್ಗಾವಣೆ ಮಾಡುವ ನಿಯಮದಿಂದ ವಿನಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಹಿಂದೆ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ, ಕಾನೂನು ಸುವ್ಯವಸ್ಥೆ, ಸಿಸಿಬಿ ಘಟಕಗಳಲ್ಲಿ ಐದುವರ್ಷಕ್ಕಿಂತ ಹೆಚ್ಚಿನ ಅವಧಿ ಕಾರ್ಯನಿರ್ವಹಿಸಿದ್ದ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳನ್ನು ಕಮಿಷನರೇಟ್ ವ್ಯಾಪ್ತಿಯಿಂದ ಹೊರಗಡೆ ವರ್ಗಾವಣೆ ಮಾಡುವ ನಿಯಮ ಜಾರಿಗೊಳಿಸಿ ಜೂ. 25, 2015ರಂದು ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಈ ನಿಯಮದಲ್ಲಿ ಸಿಸಿಬಿ ಅಧಿಕಾರಿಗಳಿಗೆ ಮಾತ್ರವೇ ವಿನಾಯಿತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.