ಅಕ್ರಮ ಗಣಿಗಾರಿಕೆ ತಡೆಗೆ ಆಗ್ರಹಿಸಿ ಪಾದಯಾತ್ರೆ
Team Udayavani, Nov 10, 2018, 12:19 PM IST
ಮೈಸೂರು: ನಾಡಿನ ಪ್ರಮುಖ ಜಲಾಶಯ ಕೆಆರ್‌ಎಸ್‌ಗೆ ಗಂಡಾಂತರ ತರುತ್ತಿರುವ ಅಕ್ರಮ ಗಣಿಗಾರಿಕೆಯನ್ನು ತಡೆಯುವಂತೆ ಒತ್ತಾಯಿಸಿ ಗಣಿಗಾರಿಕೆ ತೊಲಗಿಸಿ-ಕೆಆರ್‌ಎಸ್ ಉಳಿಸಿ ಘೋಷಣೆಯೊಂದಿಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶಗೌಡ ನೇತೃತ್ವದಲ್ಲಿ ವೇದಿಕೆ ಪದಾಧಿಕಾರಿಗಳು ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡರು.
ನಗರದ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಿಂದ ತಲೆಯ ಕಲ್ಲುಗಳನ್ನು ಹೊತ್ತು, ಘೋಷಣೆ ಕೂಗುತ್ತಾ ವಿನೂತನ ಪಾದಯಾತ್ರೆ ಕೈಗೊಂಡರು. ಈ ವೇಳೆ ಮಾತನಾಡಿದ ವೇದಿಕೆ ರಾಜ್ಯಾಧ್ಯಕ್ಷ ರಮೇಶಗೌಡ, ಕೆಆರ್‌ಎಸ್ ಜಲಾಶಯ ಉಳಿವಿಗಾಗಿ ಕೈಗೊಂಡಿರುವ ಈ ಬೃಹತ್ ಜನಾಂದೋಲನ ಪಾದಯಾತ್ರೆ ನ.15ರಂದು ಬೆಂಗಳೂರು ತಲುಪಲಿದ್ದು, ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಿ, ಅಕ್ರಮ ಗಣಿಗಾರಿಕೆ ತಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಗಣಿಗಾರಿಕೆಯಿಂದ ಕೆಆರ್‌ಎಸ್ ಜಲಾಶಯ ಮಾತ್ರವಲ್ಲದೆ, ಮಂಚನಬೆಲೆ, ತಿಪ್ಪಗೊಂಡನಹಳ್ಳಿ ಜಲಾಶಯ, ಇಸ್ರೋ, ಮುಂಬೈ ನಿಂದ ಬಿಡದಿಗೆ ಹಾದು ಬಂದಿರುವ ಗ್ಯಾಸ್ ಪೈಪ್‌ಲೇನ್‌ಗೆ ಹಾನಿಯಾಗಿ ನೂರಾರು ಹಳ್ಳಿಗಳಿಗೆ ಹಾನಿಯಾಗಲಿದ್ದು, ಅಪಾರ ನಷ್ಟ ಸಂಭವಿಸಲಿದೆ.
ಇದರ ಜೊತೆಗೆ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿ, ಸೂಲಿವಾರ, ಮಾದಾಪಟ್ಟಣ, ಹುಳಿವೇನಹಳ್ಳಿ, ಉಣಿಗೆರೆ, ದೊಡ್ಡೇರಿ, ಉದ್ದಂಡನಹಳ್ಳಿ, ಚಿಕ್ಕನಹಳ್ಳಿಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು. ವೇದಿಕೆಯ ಮೈಸೂರು ಜಿಲ್ಲಾಧ್ಯಕ್ಷ ಗಿರೀಶ್‌ಕುಮಾರ್ ಸೇರಿದಂತೆ ಹಲವರು ಪಾದಯಾತ್ರೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.