ಮಹಾತ್ಮ ಗಾಂಧೀಜಿ ತತ್ವಾದರ್ಶ ಪಾಲಿಸಿ: ರವಿ


Team Udayavani, Nov 10, 2018, 5:17 PM IST

10-november-24.gif

ಹಾನಗಲ್ಲ: ಮಹಾತ್ಮ ಗಾಂಧೀಜಿಯವರನ್ನು ಜಗತ್ತು ಪ್ರೀತಿಸುತ್ತಿದೆ. ಭಾರತೀಯರೂ ಗೌರವಿಸುವ ಮೂಲಕ ಗಾಂಧಿಧೀಜಿಯವರ ಆದರ್ಶಗಳ ಪಾಲನೆಗೆ ಮುಂದಾಗುವ ಅವಶ್ಯಕತೆ ಇದೆ ಎಂದು ಕಲಾವಿದ ರವಿ ಲಕ್ಷ್ಮೇಶ್ವರ ಹೇಳಿದರು.

ಇಲ್ಲಿಯ ಸರಕಾರಿ ಪಪೂ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ರಂಗಾಯನ ಧಾರವಾಡ ಅವರ ಸಹಯೋಗದಲ್ಲಿ ಶೇಷಗಿರಿಯ ಕಲಾತಂಡ ಅಭಿನಯಿಸಿದ ‘ಗಾಂಧಿ -150’ ಒಂದು ರಂಗಪಯಣ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಡೀ ವಿಶ್ವವೇ ಗಾಂಧಿ ಜಯಂತಿಯನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸುತ್ತಿರುವ ಹೊತ್ತಿನಲ್ಲಿ ಅವರ ಮಾನವತಾವಾದವನ್ನು ಅನುಸರಿಸುವ ನಿಟ್ಟಿನಲ್ಲಿ ಮುಂದಾಗಬೇಕಾಗಿದೆ. ಗಾಂಧಿ ಹುಟ್ಟಿ ನೂರೈವತ್ತು ವರ್ಷಗಳು ಸಂದಿವೆ. ಅವರ ಕನಸುಗಳು ನನಸಾಗಲು ಇನ್ನೂ ಹೆಣಗಾಡಬೇಕಾಗಿದೆ. ಸ್ವತಂತ್ರ ಭಾರತದ ಕನಸು ಕಂಡು ನನಸಾಗಿಸಿ ಬದುಕನ್ನು ದುರಂತದ ಮೂಲಕ ಕಳದುಕೊಂಡು ಮಹಾತ್ಮ ಗಾಂಧಿಧೀಜಿಯವರು ನಾಡು ಕಂಡ ಅವಿಸ್ಮರಣೀಯ ಮಹಾತ್ಮ ಎಂದರು.

ಪತ್ರಕರ್ತ ಮಾರುತಿ ಪೇಟಕರ ಮಾತನಾಡಿ, ಶಾಲೆಗಳಲ್ಲಿ ಕೇವಲ ಪಠ್ಯಕ್ಕೆ ಜೋತು ಬೀಳದೆ ಸಾಂಸ್ಕೃತಿಕ ಮನಸ್ಸನ್ನು ಅರಳಿಸಿಕೊಳ್ಳುವ ಕೆಲಸ ಆಗಬೇಕಾಗಿದೆ. ಕಲೆ, ಸಾಹಿತ್ಯ ಸಾಂಸ್ಕೃತಿಕ ಕಾರ್ಯಗಳ ಮೂಲಕ ವಿದ್ಯಾರ್ಥಿಗಳ ಮನಸ್ಸನ್ನು ಅರಳಿಸಿ ಅಧ್ಯಯನಕ್ಕೆ ಸಿದ್ಧಗೊಳಿಸಿದರೆ, ಇನ್ನಷ್ಟು ಉತ್ತಮ ಜ್ಞಾನ ಸಂಪಾದನೆಗೆ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಗೆ ಒತ್ತು ನೀಡಬೇಕು. ನಮ್ಮೊಳಗೆ ಸಾಂಸ್ಕೃತಿಕ ಸಿರಿಯನ್ನು ಹುರುದುಂಬಿಸಿಕೊಳ್ಳಬೇಕು ಎಂದ ಅವರು, ವಿದ್ಯೆ ಕೇವಲ ಪುಸ್ತಕವಲ್ಲ, ಈ ಜಗದಲ್ಲಿ ಕಲಿಕೆಗೆ ಮನಸ್ಸನ್ನು ತೆರೆದುಕೊಳ್ಳುವುದನ್ನು ಕಲಿಸಬೇಕು. ಇಲ್ಲಿ ಎಲ್ಲವೂ ಇದೆ. ಯಾವುದನ್ನು ಸ್ವೀಕರಿಸಬೇಕು ಎಂಬ ವಿವೇಕ ಬೇಕು ಎಂದರು.

ಪತ್ರಕರ್ತ ಮಲ್ಲಿಕಾರ್ಜುನ ಸುಣಗಾರ ಮಾತನಾಡಿ, ನಾಟಕಗಳು ನಮ್ಮ ಮನಸ್ಸಿನ ವಿಕಾರಗಳಿಗೆ ಕತ್ತರಿ ಪ್ರಯೋಗ ಮಾಡಿ ಸಕಾರಾತ್ಮಕ ಚಿಂತನೆಗೆ ದಾರಿ ಮಾಡುತ್ತವೆ. ನಮ್ಮ ಭಾವಲೋಕವನ್ನು ಜಾಗೃತಗೊಳಿಸುವ ನಾಟಕಗಳು ಹೆಚ್ಚು ಹೆಚ್ಚು ಪ್ರದರ್ಶನವಾಗುವಂತಾಗಬೇಕು ಎಂದರು.

ಸಾಹಿತಿ ಪ್ರಾಚಾರ್ಯ ಮಾರುತಿ ಶಿಡ್ಲಾಪೂರ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಎಚ್‌. ಎಸ್‌. ಬಾರ್ಕಿ, ಸಿ.ಎಸ್‌. ಹಾವೇರಿ, ಎಸ್‌.ಎಸ್‌. ನಿಸ್ಸೀಮಗೌಡರ, ಸುಮಂಗಲಾ ನಾಯನೇಗಿಲ, ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕಲಾವಿದ ಪ್ರಭು ಗುರಪ್ಪನವರ, ತಂಡದ ವ್ಯವಸ್ಥಾಪಕರಾದ ರಂಜಿತಾ ಜಾಧವ, ಮಧ್ವರಾಜ್‌ ಮಾತನಾಡಿದರು. ಎಂ.ಮಂಜು, ಸುಭಾಶ, ನಿತೀನ್‌, ಮಂಜು ಕಠಾರಿ, ಸ್ವರೂಪ, ನಾಗರಾಜ ಕಾಸಂಬಿ, ಅಕ್ಷತಾ, ರೂಪಾ, ಮಹಾಂತೇಶ, ಯಲ್ಲಪ್ಪ, ಲಕ್ಷ್ಮಣ, ಸಣ್ಣಪ್ಪ, ಮಂಜುನಾಥ, ರೇಣುಕಾ ಸುಮನ್‌ ವಿವಿಧ ಪಾತ್ರಗಳಲ್ಲಿ ಅಭಿನಯಿಸಿದರು. ಶೋಧನ್‌ ಬಸ್ರೂರು,  ಶಾಂತ ಉದ್ಯಾವರ ಅವರ ಸಹ ನಿರ್ದೇಶನದಲ್ಲಿ ನಾಟಕ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.