26 ಕ್ಷೇತ್ರಗಳ ಕರಡು ಮತದಾರ ಪಟ್ಟಿ ಪ್ರಕಟ
Team Udayavani, Nov 11, 2018, 6:40 AM IST
ಬೆಂಗಳೂರು: ಇತ್ತೀಚೆಗೆ 3 ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆದ ಜಿಲ್ಲೆಗಳ ವ್ಯಾಪ್ತಿಯ 26 ವಿಧಾನಸಭಾ ಕ್ಷೇತ್ರಗಳ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆದಿದ್ದು, ಚುನಾವಣಾ ಆಯೋಗ ನ.10ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿದೆ.
ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ 2019ನೇ ಸಾಲಿನ ವಾರ್ಷಿಕ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಚುನಾವಣಾ ಆಯೋಗ ಜುಲೈ ತಿಂಗಳಿಂದಲೇ ಆರಂಭಿಸಿದೆ. ಅ.10ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಆಗ ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಉಪ ಚುನಾವಣೆ ಘೋಷಣೆಯಾಗಿದ್ದ ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾ ಕ್ಷೇತ್ರಗಳು ಹಾಗೂ ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳು ಸೇರಿ ಉಪ ಚುನಾವಣೆ ನಡೆದ ಆರು ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳನ್ನು ಬಿಟ್ಟು, ಉಳಿದ 198 ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಈಗ 26 ಕ್ಷೇತ್ರಗಳ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ.
ಈ 26 ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಆಯಾ ಜಿಲ್ಲಾಧಿಕಾರಿ ಕಚೇರಿ, ಮತದಾರರ
ನೋಂದಣಾಧಿಕಾರಿ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ ಹಾಗೂ ಆ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳಲ್ಲಿ ಸಾರ್ವಜನಿಕ ತಿಳಿವಳಿಕೆಗಾಗಿ ಪ್ರಕಟಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಅದರಂತೆ, ನ.10ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದು ಹಾಕಲು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ನ.10ರಿಂದ ಡಿ.20ರವರೆಗೆ ಕಾಲಾವಕಾಶವಿದೆ. ಅದೇ ರೀತಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ತೆಗೆದುಹಾಕುವ ಸಂಬಂಧ ಸಲ್ಲಿಕೆಯಾದ ಅರ್ಜಿಗಳನ್ನು ಇತ್ಯರ್ಥಪಡಿಸಲು ಡಿ.31 ಕೊನೆ ದಿನವಾಗಿದೆ. 2019ರ ಜ.14ರೊಳಗೆ ಮತದಾರರ ಪಟ್ಟಿ ಮುದ್ರಣ ಕಾರ್ಯ ಮುಗಿಯಲಿದೆ.ಜ.15ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಆಯೋಗದ ಪ್ರಕಟಣೆ ತಿಳಿಸಿದೆ.
26 ಕ್ಷೇತ್ರಗಳು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ, ಸಾಗರ, ಬೈಂದೂರು. ಬಳ್ಳಾರಿ ಲೋಕಸಭಾ ಕ್ಷೇತ್ರದ ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ,ವಿಜಯನಗರ, ಹಡಗಲಿ, ಹಗರಿಬೊಮ್ಮನ ಹಳ್ಳಿ, ಕಂಪ್ಲಿ, ಸಂಡೂರು, ಕೂಡ್ಲಗಿ. ಮಂಡ್ಯ ಲೋಕಸಭಾ ಕ್ಷೇತ್ರದ ಮಂಡ್ಯ, ಮದ್ದೂರು, ಮಳವಳ್ಳಿ, ಮೇಲುಕೋಟೆ,ಶ್ರೀರಂಗಪಟ್ಟಣ, ನಾಗಮಂಗಲ, ಕೆ.ಆರ್. ಪೇಟೆ,ಕೃಷ್ಣರಾಜನಗರ. ಅದೇ ರೀತಿ ರಾಮನಗರ, ಜಮಖಂಡಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.