ಮುಸ್ಲಿಂ ಸಮಾಜ ಶೈಕ್ಷಣಿಕ ಪ್ರಗತಿ ಸಾಧಿಸಲಿ: ರಾಜಾ ವೆಂಕಟಪ್ಪ
Team Udayavani, Nov 11, 2018, 3:32 PM IST
ಮಾನ್ವಿ: ಮುಸ್ಲಿಂ ಸಮಾಜ ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಶೈಕ್ಷಣಿಕ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕಿದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಪಟ್ಟಣದ ಎಪಿಎಂಸಿ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಡಿದ್ದ ಹಜರತ್ ಟಿಪ್ಪು ಸುಲ್ತಾನ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟಿಪ್ಪು ಮಹಾನ್ ಸೈನಿಕನಾಗಿದ್ದನು. ಮೈಸೂರು ಸಾಮ್ರಾಜ್ಯದ ಉಳಿವಿಗಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟು ಬ್ರಿಟಿಷರ ವಿರುದ್ಧ ವೀರಾವೇಶದಿಂದ ಹೋರಾಡಿದ. ಇವರ ಆದರ್ಶಗಳ ಪಾಲನೆಯಾಗಬೇಕು ಎಂದರು.
ಮಾನ್ವಿ ತಾಲೂಕು ಸೌಹಾರ್ದತೆಗೆ ಹೆಸರಾಗಿದೆ. ಅನೇಕ ವರ್ಷಗಳಿಂದ ಇಲ್ಲಿ ವಿವಿಧ ಧರ್ಮ, ಜಾತಿಯ ಜನರು ತುಂಬಾ
ಅನ್ಯೋನ್ಯವಾಗಿ ವಾಸಿಸುತ್ತಿದ್ದೇವೆ. ಇದು ಹೀಗೇ ಮುಂದುವರಿಯಬೇಕು. ಹಣ ಮತ್ತು ಅಧಿಕಾರ ಶಾಶ್ವತವಲ್ಲ. ಮಾನವೀಯತೆ ತಳಹದಿಯ ಮೇಲೆ ನಾವೆಲ್ಲ ಒಂದಾಗಿ ಬದುಕೋಣ ಎಂದ ಅವರು, ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಹೇಳಿದರು.
ಮುಸ್ಲಿಂ ಸಮುದಾಯದ ಅಭಿವೃದ್ಧಿಯಾಗಬೇಕಾದರೆ ಯುವಕರು, ಮಕ್ಕಳು ಸರಕಾರದ ಯೋಜನೆಗಳನ್ನು
ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಅಲ್ಪಸಂಖ್ಯಾತರ ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಸೈಯ್ಯದ್ ಹುಸೇನ್ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಅಧಿಕ ಅಂಕ ಗಳಿಸಿದ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಿಂದ ತಹಶೀಲ್ದಾರ್ ಕಚೇರಿ ಮಾರ್ಗವಾಗಿ ಎಪಿಎಂಸಿ ಕಲ್ಯಾಣ ಮಂಟಪದವರೆಗೆ ಮೆರವಣಿಗೆ ಮಾಡಲಾಯಿತು.
ಜಿಪಂ ಸದಸ್ಯ ಗಂಗಣ್ಣ ನಾಯಕ, ತಹಶೀಲ್ದಾರ್ ಅಮರೇಶ ಬಿರಾದಾರ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಅಬೀಬ್ ಖಾದ್ರಿ,
ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮೀ, ಸಿಪಿಐ ಚಂದ್ರಶೇಖರ, ಪಿಎಸ್‌ಐ ರಂಗಪ್ಪ ದೊಡ್ಮನಿ, ಎಪಿಎಂಸಿ ಅಧ್ಯಕ್ಷ ಅಯ್ಯಣ್ಣ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಿಹಾಳ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.