ಸ್ವಾತಂತ್ರ್ಯಾ ಪರಿಕಲ್ಪನೆ ನೀಡಿದ್ದೇ ಟಿಪ್ಪು
Team Udayavani, Nov 11, 2018, 3:39 PM IST
ಲಿಂಗಸುಗೂರು: ದೇಶದಲ್ಲಿ ಬ್ರಿಟಿಷರ ವಿರುದ್ಧ ಹೋರಾಟದ ಕಿಚ್ಚು ಹಚ್ಚಿದ ಟಿಪ್ಪು ಸುಲ್ತಾನ್‌ನಿಂದ ದೇಶದಲ್ಲಿ ಸ್ವಾತಂತ್ರ್ಯಾದ ಪರಿಕಲ್ಪನೆ ಮೂಡಿತು ಎಂದು ಪತ್ರಕರ್ತ ಹಾಗೂ ಸಿಂಧನೂರಿನ ಮನೋಮತ ಬಳಗ ಅಧ್ಯಕ್ಷ ಡಿ.ಎಚ್.ಕಂಬಳಿ ಹೇಳಿದರು.
ತಾಲೂಕು ಆಡಳಿತ ವತಿಯಿಂದ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಶನಿವಾರ ನಡೆದ ಹಜರತ್ ಟಿಪ್ಪು ಸುಲ್ತಾನ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಟಿಪ್ಪು ಸುಲ್ತಾನ್ 9 ವರ್ಷಗಳಲ್ಲಿ 4 ಕದನಗಳನ್ನು ಮಾಡಿದ್ದಾರೆ. ಐದು ಭಾಷೆಗಳಲ್ಲಿ ಪ್ರಾವೀಣ್ಯತೆ ಪಡೆದಿದ್ದ ಟಿಪ್ಪು ಒಬ್ಬ ಸ್ವತಂತ್ರ ಸೇನಾನಿಯಾಗಿದ್ದ. ಸಮಾನತೆ, ಸ್ವಾತಂತ್ರ್ಯಾ ಹಾಗೂ ಭ್ರಾತೃತ್ವ ಕನಸು ಕಂಡಿದ್ದನು. ವೀರನಾಗಿದ್ದ ಟಿಪ್ಪು ಸುಲ್ತಾನ್‌ನನ್ನು ಕಂಡರೆ ಬ್ರಿಟಿಷರಲ್ಲಿ ನಡುಕ ಉಂಟಾಗುತ್ತಿತ್ತು ಎಂದರು.
ಟಿಪ್ಪು ಸುಲ್ತಾನ್ ಉತ್ತಮ ಆಡಳಿತಗಾರನಾಗಿದ್ದ. ರೇಷ್ಮೆ ಕೃಷಿ ಪರಿಚಯಿಸಿದ ಕೀರ್ತಿ ಆತನಿಗೆ ಸಲ್ಲುತ್ತದೆ. ಅನೇಕ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಿದ್ದರು. ತನ್ನ ಆಡಳಿತಾವಧಿಯಲ್ಲಿ ಶೃಂಗೇರಿ ಶಾರದಾಂಬೆ ಮಠ ಸೇರಿ ಅನೇಕ ಹಿಂದೂ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಕೈಗೊಂಡಿದ್ದ. ಉಳುವವನೇ ಭೂ ಒಡೆಯ ಎಂಬ ಪರಿಕಲ್ಪನೆ ಹೊಂದಿದ್ದ ರಾಜನಿದ್ದರೆ ಅದು ಟಿಪ್ಪು ಮಾತ್ರ. 39 ಸಾವಿರ ಕೆರೆಗಳ ನಿರ್ಮಾಣ, ಇನ್ನಿತರ ಒಡ್ಡುಗಳನ್ನು ನಿರ್ಮಿಸಿ ಶೇ.35ರಷ್ಟು ಭೂ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಿದ್ದನು ಎಂದರು.
ಟಿಪ್ಪುವಿನ ಬಗ್ಗೆ ಅನೇಕ ವಾದ-ವಿವಾದಗಳು ನಡೆಯುತ್ತಲೇ ಇವೆ. ಆದರೆ ಟಿಪ್ಪು ಸುಲ್ತಾನ್‌ನನ್ನು ಮಾನವೀಯ ಹಾಗೂ
ಅಭಿವೃದ್ಧಿ ಚಿಂತನೆ ದೃಷ್ಟಿಯಿಂದ ನೋಡಬೇಕು. ಟಿಪ್ಪುವಿನ ಮಾನವೀಯತೆ ಗುಣಗಳನ್ನು ಹಾಗೂ ಉತ್ತಮ ಆಡಳಿತದ
ಆದರ್ಶಗಳನ್ನು ಪಾಲಿಸಬೇಕು ಎಂದರು.
ಸಹಾಯಕ ಆಯುಕ್ತ ಎಂ.ಪಿ.ಮಾರುತಿ, ಎಪಿಎಂಸಿ ಅಧ್ಯಕ್ಷ ಜಂಬನಗೌಡ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ನಾಗನಗೌಡ
ತುರಡಗಿ, ತಂಜಿಮುಲ್ ಮುಸ್ಲಿಂ ಕಮಿಟಿ ಅಧ್ಯಕ್ಷ ಲಾಲ್ ಮಹ್ಮದ್‌ಸಾಬ, ತಹಶೀಲ್ದಾರ್ ಚಾಮರಾಜ ಪಾಟೀಲ, ಸಿಪಿಐ ವಿ.ಎಸ್. ಹಿರೇಮಠ, ಟಿಎಚ್‌ಒ ಡಾ| ರುದ್ರಗೌಡ, ಬಿಇಒ ಚಂದ್ರಶೇಖರ ಭಂಡಾರಿ ಸೇರಿ ಮುಸ್ಲಿಂ ಸಮಾಜದ ಮುಖಂಡರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.