ಜಾನಪದ ಕಲೆ ನಶಿಸದಂತೆ ಎಚ್ಚರವಹಿಸಿ: ಶಿವಕುಮಾರ್
Team Udayavani, Nov 11, 2018, 5:07 PM IST
ಚಿಕ್ಕಮಗಳೂರು: ಅತಿ ವೇಗವಾಗಿ ಬೆಳೆಯುತ್ತಿರುವ ಟಿವಿ ಮತ್ತು ಸಿನೆಮಾ ಮಾಧ್ಯಮದಿಂದ ಜನಪದ ಕಲೆಗಳು ನಶಿಸದಂತೆ ಎಚ್ಚರವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಸಲಹೆ ಮಾಡಿದರು.
ಸಮೀಪದ ಅಂಬಳೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತವಾಗಿ ಆಯೋಜಿಸಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮಕ್ಕೆ ತಮಟೆ ನುಡಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಜನರ ಬಾಯಿಂದ ಬಾಯಿಗೆ ಬೆಳೆದು ಬಂದ ಜೀವಂತ ಕಲೆ ಜನಪದ. ಆಧುನಿಕತೆಯ ಶರವೇಗದಲ್ಲಿ ಮುನ್ನಡೆಯುತ್ತಿರುವ ಟಿವಿ ಮತ್ತು ಸಿನೆಮಾ ಜಗತ್ತಿನೊಂದಿಗೆ ಪೈಪೋಟಿ ನಡೆಸಬೇಕಾಗಿದೆ. ಜನರ ಬದುಕಿನ ಜೀವಂತ ಕಲೆಯಾಗಿರುವ ಜನಪದ ಕಲೆಗೆ ಪ್ರೋತ್ಸಾಹ ನೀಡಬೇಕು ಎಂದರು.
ಅಧ್ಯಕ್ಷತೆ ವಹಿಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕುಂದೂರು ಅಶೋಕ ಮಾತನಾಡಿ, ನೆಲ, ಜಲ ಮತ್ತು ಜನ್ಮಕೊಟ್ಟ ತಾಯಿಋಣವನ್ನು ತೀರಿಸಲು ಈ ನೆಲದ ಜನರು ಕೆಲಸ ಮಾಡಬೇಕು ಎಂದು ಹೇಳಿದರು.
ತಮಟೆ ಕಲಾವಿದ ಎ.ಜೆ.ರಂಗಯ್ಯ ಅವರನ್ನು ಪರಿಚಯಿಸಿ ಮಾತನಾಡಿದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಿರೇಮ ಗಳೂರು ಪುಟ್ಟಸ್ವಾಮಿ,ಸತತ 55 ವರ್ಷಗಳಿಂದ ತಮಟೆ ನುಡಿಸುವ ಮೂಲಕ ಕುಟುಂಬಕ್ಕೆ ಆಸರೆಯಾಗಿಕೊಂಡಿರುವ 65 ವರ್ಷದ ಎ.ಜೆ.ರಂಗಯ್ಯ ಅವರ ಕಲಾ ಸೇವೆ ಅಪರೂಪದ್ದಾಗಿದೆ. ಅವರನ್ನು ಜಿಲ್ಲಾ ಮಟ್ಟದಲ್ಲಿ ಗುರುತಿಸಿ ಗೌರವಿಸುತ್ತಿರುವುದು ಪರಿಷತ್‌ಗೆ ಗೌರವ ಬಂದಿದೆ ಎಂದು ತಿಳಿಸಿದರು.
ಅಶ್ವಿನಿ ದೇವತೆ ಎಂದೇ ಖ್ಯಾತಿ ಪಡೆದಿರುವ ಡಾ|ಎ.ಆರ್. ಕೃಷ್ಣಶಾಸ್ತ್ರಿ ಅವರ ಜನ್ಮಸ್ಥಳ ಅಂಬಳೆಯಲ್ಲಿ ಅವರ ಹೆಸರಿನಲ್ಲಿ ಭವನ ನಿರ್ಮಾಣಕ್ಕೆ ಸರ್ಕಾರ 1.4 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಆದರೆ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಭವನ ನಿರ್ಮಾಣಕಾರ್ಯ ನನೆಗುದಿಗೆ ಬಿದ್ದಿದೆ. ಜಿಲ್ಲಾಡಳಿತ ಗಮನಹಿಸಿ ಜನರ ಬೇಡಿಕೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಎಂ.ಎಸ್.ಚಂದ್ರಪ್ಪ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಎ.ಟಿ.ಉಮೇಶ್, ಪಿಡಿಒ ಶಾಂತಾ ಮಾತನಾಡಿದರು. ಗ್ರಾಪಂ ಸದಸ್ಯ ಹರೀಶ್, ಲಕ್ಷ್ಮಣ ಗೌಡ, ಅಂಬೇಡ್ಕರ್ ಯುವಕ ಸಂಘ ಅಧ್ಯಕ್ಷ ಚಿದಾನಂದ್, ಉಪಾಧ್ಯಕ್ಷ ನವೀನ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.