ಮಾತೃಭಾಷೆ ಉಳಿವಿಗೆ ಅಭಿಮಾನ ಅಗತ್ಯ


Team Udayavani, Nov 12, 2018, 11:55 AM IST

mathrubhashe.jpg

ಬೆಂಗಳೂರು: ಮಾತೃ ಭಾಷೆಯ ಅಭಿಮಾನ ಮೈಗೂಡಿಸಿಕೊಂಡರೆ ಕನ್ನಡ ರಕ್ಷಣೆಗೆ ಕಾವಲುಗಾರರ ಅಗತ್ಯ ಇಲ್ಲ ಎಂದು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯ ಮಹಾಸಂಸ್ಥೆ (ಎಫ್ಕೆಸಿಸಿಐ) ಅಧ್ಯಕ್ಷ ಡಾ.ಸುಧಾಕರ್‌ ಎಸ್‌. ಶೆಟ್ಟಿ  ಹೇಳಿದರು.

ತುಳುವೆರೆಂಕುಲು ಬೆಂಗಳೂರು ಸಂಘಟನೆ ಭಾನುವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಬಲಿಯೇಂದ್ರ ಪರ್ಬ ಹಾಗೂ ಬಲಿಯೇಂದ್ರ ಪುರಸ್ಕಾರ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡಿಗರಿಗೆ ಮಾತೃಭಾಷೆಯ ಮೇಲೆ ಅಭಿಮಾನವಿದ್ದರೆ ಕನ್ನಡ ರಕ್ಷಣೆಗೆ ಬೇರೆ ಕಾವಲಗಾರರ ಅಗತ್ಯ ಇಲ್ಲ. ಅಭಿಮಾನವಿಲ್ಲದಿದ್ದರೆ ಭಾಷೆಗೂ ಉಳಿಗಾಲವಿಲ್ಲ. ತುಳುವರು ಸ್ವತ್ಛ ಕನ್ನಡದ ಮೂಲಕ ಕನ್ನಡ ಭಾಷೆಗೆ ಹೆಚ್ಚಿನ ಗೌರವ ನೀಡುತ್ತಾರೆ ಎಂದು ಹೇಳಿದರು.

ತುಳು ಭವನ ನಿಮಾರ್ಣಕ್ಕೆ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ  ಸ್ಥಳಾವಕಾಶ ನೀಡಬೇಕು. ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಭವನ ನಿರ್ಮಿಸುತ್ತೇವೆ. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಅಬ್ಬಕ್ಕ ಅವರ ಹೆಸರನ್ನು ಮರು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು. ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ.ಮೋಹನ್‌ ಆಳ್ವ ಮಾತನಾಡಿ, ತುಳು ಭಾಷಿಕರು ಸ್ವಾಭಿಮಾನದ ಜೀವನಕ್ಕೆ ಮಾದರಿ. ತುಳುಭಾಷೆಯನ್ನು ದೇಶದ ಉದ್ದಗಲಕ್ಕೂ ವಿಸ್ತರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಂಠೀರವ ಸ್ಟುಡಿಯೋ ನಿರ್ದೇಶಕ ಕೆ.ಮೋಹನದೇವ ಆಳ್ವ, ತುಳು ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ, ನಟ ವಿನೋದ್‌ ರಾಜ್‌, ತುಳುವೆರೆಂಕುಲು ಬೆಂಗಳೂರು ಅಧ್ಯಕ್ಷ ವಿಜಯಕುಮಾರ್‌ ಕುಲಶೇಖರ್‌, ಪ್ರಧಾನ ಕಾರ್ಯದರ್ಶಿ ಪಳ್ಳಿ ವಿಶ್ವನಾಥ ಶೆಟ್ಟಿ ಇತರರು ಹಾಜರಿದ್ದರು. ಹಿರಿಯ ನಟಿ ಲೀಲಾವತಿ, ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಾ.ಮೋಹನ್‌ ಆಳ್ವ, ಬಿಬಿಎಂಪಿ ಸದಸ್ಯ ಕೆ.ವಿ.ರಾಜೇಂದ್ರ ಕುಮಾರ್‌ ಅವರಿಗೆ ಬಲಿಯೇಂದ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಹಿರಿಯ ನಟಿ ಸಂತಸ: ಹಿರಿಯ ನಟಿ ಲೀಲಾವತಿ 60ವರ್ಷಗಳ ಬಳಿಕ ತುಳುವಿನಲ್ಲಿ ಭಾಷಣ ಮಾಡಿ ಭಾವುಕರಾದರು. ನಂತರ ಪುತ್ರ ವಿನೋದ್‌ ಜತೆ ತುಳು ಗೀತೆ ಹಾಡಿ ಸಭಿಕರನ್ನು ರಂಜಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಆರವತ್ತು ವರ್ಷಗಳ ಬಳಿಕ ತುಳು ಭಾಷೆಯಲ್ಲಿ ಮಾತನಾಡುವ ಅವಕಾಶ ಸಿಕಿದ್ದೆ. ಇದೇ ವೇದಿಕೆಯಲ್ಲಿ ಬಲಿಯೇಂದ್ರ ಪ್ರಶಸ್ತಿ ಸಿಕ್ಕಿರುವುದು ನನ್ನ ಪಾಲಿಗೆ ಬಂದ ಭಾಗ್ಯ  ಎಂದು ಸಂತಸ ಹಂಚಿಕೊಂಡರು.

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.