ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ತುಂಬ ಗುಂಡಿಗಳು!


Team Udayavani, Nov 13, 2018, 2:25 AM IST

honda-12-11.jpg

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮುಂದಿನ ತಿಂಗಳು ಚಂಪಾಷಷ್ಠಿ ನಡೆಯಲಿದೆ. ಕ್ಷೇತ್ರ ಸಂಪರ್ಕಿಸುವ ಕುಮಾರಧಾರಾ-ಮುಖ್ಯ ಪೇಟೆ ನಡುವಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದೇ ವೇಳೆ ಕ್ಷೇತ್ರಕ್ಕೆ ಯಾತ್ರಿಗಳು ಆಗಮಿಸುವ ಗುಂಡ್ಯ-ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿ ಕಡೆಗೂ ಲೋಕೋಪಯೋಗಿ ಇಲಾಖೆ ಗಮನಹರಿಸಬೇಕು ಎನ್ನುವುದು ಸಾರ್ವಜನಿಕ‌ರ ಆಗ್ರಹವಾಗಿದೆ.

ಸುಬ್ರಹ್ಮಣ್ಯ: ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ ಗುಂಡ್ಯ-ಸುಬ್ರಹ್ಮಣ್ಯ ರಸ್ತೆಯ ಮೇಲೆ ಬೃಹತ್‌ ಗಾತ್ರದಲ್ಲಿ ಹೊಂಡಗಳು ನಿರ್ಮಾಣಗೊಂಡಿವೆ. ಮುಂದಿನ ತಿಂಗಳು ಕುಕ್ಕೆಯಲ್ಲಿ ಷಷ್ಠಿ ಉತ್ಸವ ಜರಗಲಿದ್ದು, ಆಗಮಿಸುವ ಭಕ್ತರಿಗೆ ಸಮಸ್ಯೆಯಾಗಲಿದೆ. ರಸ್ತೆಯಲ್ಲಿ ನಿರ್ಮಾಣವಾಗಿರುವ ಹೊಂಡಗಳಿಂದ ವಾಹನ ಅಪಘಾತಗಳು ಹೆಚ್ಚುತ್ತಿದ್ದು, ಪ್ರಾಣ ಹಾನಿಯೂ ಸಂಭವಿಸುತ್ತಿದೆ. ಮಂಗಳೂರು – ಬೆಂಗಳೂರು, ಧರ್ಮಸ್ಥಳ – ಸುಬ್ರಹ್ಮಣ್ಯ ಮಾರ್ಗದ ಮೂಲಕ ರಾಜ್ಯದ ವಿವಿಧೆಡೆಯಿಂದ ಆಗಮಿಸುವ ಯಾತ್ರಿಗಳು, ಭಕ್ತರು ಹಾಗೂ ಸಾರ್ವಜನಿಕರು ಗುಂಡ್ಯ ಮಾರ್ಗವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಯಾಣ ಬೆಳೆಸುತ್ತಾರೆ. ಗುಂಡ್ಯದಿಂದ ಸುಬ್ರಹ್ಮಣ್ಯ ತನಕದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಗುಂಡ್ಯ- ಕುಲ್ಕುಂದ ನಡುವಿನ ರಸ್ತೆ ಪುತ್ತೂರು ಲೋಕೋಪಯೋಗಿ ಇಲಾಖೆಗೆ ಸೇರಿದ್ದು, ಕುಲ್ಕುಂದ-ಕುಮಾರಧಾರಾ ನಡುವಿನ ರಸ್ತೆ ಸುಳ್ಯ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿದೆ. ಎರಡೂ ಇಲಾಖೆಗಳ ವ್ಯಾಪ್ತಿಗೆ ಸೇರಿದ ರಸ್ತೆಗಳು ಸುಗಮ ಸಂಚಾರಕ್ಕೆ ಲಭ್ಯವಾಗುತ್ತಿಲ್ಲ.


ಕಾಟಾಚಾರಕ್ಕೆ ದುರಸ್ತಿ

ದೊಡ್ಡ ಹೊಂಡಗಳಿರುವಲ್ಲಿ ದುರಸ್ತಿ ಮಾಡಿ, ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲಾಗಿತ್ತು. ಆ ವೇಳೆ ಕೆಲವು ಕಿ.ಮೀ. ತನಕ ಮಾತ್ರ ಹೊಂಡ ಮುಚ್ಚಲಾಗಿದ್ದು, ಉಳಿದ ಕಡೆ ದುರಸ್ತಿಗೊಳಿಸದ ಪರಿಣಾಮ ಹೊಂಡಗಳು ವಿಸ್ತರಿಸಿಕೊಂಡಿವೆ. ಗುಂಡ್ಯ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕಿರಿದಾಗಿದೆ. ರಾಜ್ಯದಲ್ಲಿ ಹಿಂದೊಮ್ಮೆ ಜೆಡಿಎಸ್‌ ಸರಕಾರ ಆಡಳಿತದಲ್ಲಿದ್ದಾಗ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ. ಕುಮಾರಸ್ವಾಮಿ ಈ ರಸ್ತೆಗೆ ಅನುದಾನ ಒದಗಿಸಿದ್ದರು. ಬಳಿಕ ರಸ್ತೆ ವಿಸ್ತರಣೆಗೊಳಿಸಿ ಅಭಿವೃದ್ಧಿಯಾಗಿತ್ತು. ಸಂಚಾರಕ್ಕೆ ಯಾವುದೇ ತೊಂದರೆ ಇರಲಿಲ್ಲ. ಇತ್ತೀಚಿನ ಕೆಲವು ವರ್ಷಗಳಲ್ಲಿ ಈ ರಸ್ತೆ ದುರಸ್ತಿಯಾಗಿಲ್ಲ.

ಪ್ರಮುಖ ರಸ್ತೆ
ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡ್ಯ- ಸುಬ್ರಹ್ಮಣ್ಯ ಮಾರ್ಗದಲ್ಲಿ ನಿತ್ಯ ಸಾವಿರಾರು  ವಾಹನಗಳು ಸಂಚರಿಸುತ್ತಿವೆ. ಗುಂಡ್ಯ ಮೂಲಕ  ಬೆಂಗಳೂರು – ಮಂಗಳೂರು ಕಡೆಯಿಂದ ಸುಬ್ರಹ್ಮಣ್ಯ ತಲುಪುವವರಿಗೆ ಹಾಗೂ ಧರ್ಮಸ್ಥಳಕ್ಕೆ ತೆರಳುವವರಿಗೆ ಈ ರಸ್ತೆ ಬಹಳ ಪ್ರಯೋಜನಕಾರಿಯಾಗಿದೆ. ಕಡಬ ಮೂಲಕ ಸುಬ್ರಹ್ಮಣ್ಯ ತಲುಪುವವರು ಕೈಕಂಬ ಜಂಕ್ಷನ್‌ ಮೂಲಕ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಾರೆ. ಈ ಮಾರ್ಗದಲ್ಲಿ ವಾಹನ ದಟ್ಟಣೆ ಅಧಿಕವಾಗಿ ರಸ್ತೆಗಳು ಕೆಟ್ಟಿವೆ.


ಗಣ್ಯರಿಗೂ ಇದೇ ಮಾರ್ಗ

ರಾಜ್ಯದಲ್ಲಿ ಎಲ್ಲ ರಸ್ತೆಗಳು ಅಭಿವೃದ್ಧಿಯಾಗುತ್ತಿದ್ದರೂ ಎರಡು ಪ್ರಮುಖ ಪುಣ್ಯ ಕ್ಷೇತ್ರಗಳಿಗೆ ಸಂಪರ್ಕಿಸುವ ರಸ್ತೆ ಮಾತ್ರ ಇನ್ನೂ ಅಭಿವೃದ್ಧಿಗೊಂಡಿಲ್ಲ. ಕುಕ್ಕೆ ಕ್ಷೇತ್ರಕ್ಕೆ ಆಗಮಿಸುವ ಗಣ್ಯರೂ ಇದೇ ರಸ್ತೆಯ ಮೂಲಕವೇ ಆಗಮಿಸಬೇಕಾಗಿದೆ. ಆದರೂ ಈ ರಸ್ತೆ ದುರಸ್ತಿಯಾಗದೆ ಉಳಿದಿದೆ.

ವಾರದೊಳಗೆ ದುರಸ್ತಿ
ಇಲಾಖೆಯ ಸಿಬಂದಿ ದೀಪಾವಳಿ ರಜೆ ಹಿನ್ನೆಲೆಯಲ್ಲಿ ಊರಿಗೆ ತೆರಳಿದ್ದಾರೆ. ಅವರು ಬಂದ ಬಳಿಕ ಈ ರಸ್ತೆಗಳ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವ ಕೆಲಸವನ್ನು ಇಲಾಖೆ ಕಡೆಯಿಂದ ಮಾಡಲಾಗುವುದು. ವಾರದೊಳಗೆ ಸಮಸ್ಯೆ ಬಗೆಹರಿಸಿಕೊಡುತ್ತೇವೆ.
– ಸಂದೇಶ್‌, ಲೋಕೋಪಯೋಗಿ ಇಲಾಖೆ ಎಂಜಿನಿಯರ್‌

— ಬಾಲಕೃಷ್ಣ  ಭೀಮಗುಳಿ

ಟಾಪ್ ನ್ಯೂಸ್

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.