ಚಟುವಟಿಕೆಯ ನೆಲೆಯಲ್ಲೂ ಅಂತಿಮ ನಮನ


Team Udayavani, Nov 14, 2018, 11:52 AM IST

chatuvatikle.jpg

ಬೆಂಗಳೂರು: ಅವಕಾಶ, ಸಂದರ್ಭ ಸಿಕ್ಕಾಗಲೆಲ್ಲಾ, ಪ್ರಧಾನಿ ಆದಿಯಾಗಿ ರಾಷ್ಟ್ರೀಯ ನಾಯಕರನ್ನು ಬಸವನಗುಡಿಯ ನ್ಯಾಷನಲ್‌ ಹೈಸ್ಕೂಲ್‌ ಮೈದಾನಕ್ಕೆ ಕರೆಸಿ ಸಾರ್ವಜನಿಕ ಸಭೆ ಆಯೋಜಿಸಿ ಕ್ರಿಯಾಶೀಲವಾಗಿ ಓಡಾಡುತ್ತಿದ್ದ ಬಿಜೆಪಿ ಹಿರಿಯ ನಾಯಕ ಎಚ್‌.ಎನ್‌.ಅನಂತಕುಮಾರ್‌ ಮಂಗಳವಾರ ಅದೇ ಮೈದಾನದಲ್ಲಿ ಚಿರನಿದ್ರೆಗೆ ಜಾರಿದ ದೃಶ್ಯ ಮನಕಲಕುವಂತಿತ್ತು.

ಸೋಮವಾರ ವಿಧಿವಶರಾದ ಅನಂತ ಕುಮಾರ್‌ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಬೆಳಗ್ಗೆ 10.50ರ ಹೊತ್ತಿಗೆ ನ್ಯಾಷನಲ್‌ ಹೈಸ್ಕೂಲ್‌ ಮೈದಾನಕ್ಕೆ ಸೇನಾ ವಾಹನದಲ್ಲಿ ಮೆರವಣಿಗೆಯಲ್ಲಿ ತಂದು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಸರತಿ ಸಾಲಿನಲ್ಲಿ ಕಾದಿದ್ದ ಸಾರ್ವಜನಿಕರು ಅಗಲಿದ ನಾಯಕನ ಅಂತಿಮ ದರ್ಶನ ಪಡೆದರು. ನೂರಾರು ಶಾಲಾ ಮಕ್ಕಳು ವಿದ್ಯಾರ್ಥಿಗಳು ತಂಡೋಪತಂಡವಾಗಿ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ಸಚಿವರಾದ ಜಿ.ಟಿ.ದೇವೇಗೌಡ, ಸಿ.ಎಸ್‌.ಪುಟ್ಟರಾಜು, ಸಂಸದರಾದ ಎಂ.ವೀರಪ್ಪ ಮೊಯಿಲಿ, ಬಿ.ವೈ.ರಾಘವೇಂದ್ರ ಇತರರು ಅಂತಿಮ ದರ್ಶನ ಪಡೆದರು. ಮಧ್ಯಾಹ್ನ 12.05ರ ಹೊತ್ತಿಗೆ ಸಾಮೂಹಿಕವಾಗಿ ವಂದೇ ಮಾತರಂ ಗೀತೆ ಹಾಡಲಾಯಿತು.  ನಂತರ ವಿಶೇಷವಾಗಿ ಹೂವಿನಿಂದ ಅಲಂಕೃತವಾಗಿದ್ದ ಸೇನಾ ಟ್ರಕ್‌ನಲ್ಲಿ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಯಿತು.

ಅನಂತ ಕುಮಾರ್‌ ಅವರಿಗೆ ನ್ಯಾಷನಲ್‌ ಹೈಸ್ಕೂಲ್‌ ಮೈದಾನದ ಬಗ್ಗೆ ವಿಶೇಷ ಪ್ರೀತಿ. ಬೆಂಗಳೂರಿನಲ್ಲಿ ಹಾಗೂ ನಗರದ ದಕ್ಷಿಣ ಭಾಗದಲ್ಲಿ ಪಕ್ಷದಿಂದ ಯಾವುದೇ ಸಾರ್ವಜನಿಕ ಸಭೆ ಆಯೋಜಿಸಲು ನ್ಯಾಷನಲ್‌ ಹೈಸ್ಕೂಲ್‌ ಮೈದಾನವನ್ನೇ ಆಯ್ಕೆ ಮಾಡುತ್ತಿದ್ದರು. ಹಾಗಾಗಿ ಸಾಕಷ್ಟು ಕಾರ್ಯಕ್ರಮಗಳಿಗೆ ಈ ಮೈದಾನ ಸಾಕ್ಷಿಯಾಗಿದೆ. ಪ್ರಧಾನಿ ಆದಿಯಾಗಿ ಗಣ್ಯಾತಿಗಣ್ಯರು ಭಾಷಣ ಮಾಡಿ ಮೈದಾನಕ್ಕೆ ವಿಶೇಷ ಮಹತ್ವ ತಂದುಕೊಡುವಲ್ಲಿ ಅವರ ಪಾತ್ರ ದೊಡ್ಡದಿತ್ತು ಎನ್ನುತ್ತಾರೆ ಬಿಜೆಪಿ ನಗರ ಘಟಕದ ಅಧ್ಯಕ್ಷ ಪಿ.ಎನ್‌.ಸದಾಶಿವ.

ಬೆಂಗಳೂರಿನಲ್ಲಿ ಎರಡು ಬಾರಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ನಡೆದಾಗಲೂ ಎರಡೂ ಬಾರಿ ಇದೇ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆದಿತ್ತು. ಒಮ್ಮೆ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ, ಇನ್ನೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಮಾಜಿ ಉಪಪ್ರಧಾನಿ ಎಲ್‌.ಕೆ.ಅಡ್ವಾಣಿಯವರು ರಥಯಾತ್ರೆಯೊಂದಿಗೆ ಬೆಂಗಳೂರಿಗೆ ಆಗಮಿಸಿದಾಗಲೂ ಇದೇ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಿದ್ದರು.

ಈ ಭಾಗದಲ್ಲಿ ಬಿಜೆಪಿ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿರುವುದು, ಕುಟುಂಬ ಸಮೇತರಾಗಿ ಸಾರ್ವಜನಿಕರು ಪಾಲ್ಗೊಳ್ಳುವ ವಾತಾವರಣವಿದ್ದ ಕಾರಣ ಇದೇ ಮೈದಾನವನ್ನು ಅನಂತ ಕುಮಾರ್‌ ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದರು. ಅವರು ಕಡೆಯ ಬಾರಿ ಇದೇ ಮೈದಾನದಲ್ಲಿ ಕೇರಳ ಹಾಗೂ ಕೊಡಗಿಗೆ ಉಚಿತವಾಗಿ ಎರಡು ಕೋಟಿ ರೂ. ಮೌಲ್ಯದ ಔಷಧಿ ಹೊತ್ತ ವಾಹನಗಳಿಗೆ ಚಾಲನೆ ನೀಡಿದ್ದರು ಎಂದು ಸ್ಮರಿಸಿದರು.

12 ವರ್ಷಗಳಿಂದ ಅದಮ್ಯ ಚೇತನ ವಾರ್ಷಿಕ ಉತ್ಸವ ಕೂಡ ನ್ಯಾಷನಲ್‌ ಹೈಸ್ಕೂಲ್‌ ಮೈದಾನದಲ್ಲೇ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿ ಸಾಮೂಹಿಕವಾಗಿ ವಂದೇ ಮಾತರಂ ಹೇಳುತ್ತಿದ್ದ ಪದ್ಧತಿ ಇದೆ. ಆದರೆ ಸಾಮೂಹಿಕವಾಗಿ ವಂದೇ ಮಾತರಂ ಹಾಡುವ ಮೂಲಕವೇ ಅನಂತ ಕುಮಾರ್‌ ಅವರಿಗೆ ವಿದಾಯ ಹೇಳಿದ್ದು, ನೋವಿನ ಸಂಗತಿ ಎಂದು ಹೇಳಿದರು.

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

14-uv-fusion

Bamboo: ಬಿದಿರು ಎಂದು ಮೂಗು ಮುರಿಯದಿರಿ

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

4

Belthangady: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.