ರಾಜಸ್ಥಾನದಲ್ಲಿ BJPಗೆ ಹಿನ್ನಡೆ; ಸಂಸದ ಮೀನಾ ಕಾಂಗ್ರೆಸ್ ಗೆ ಸೇರ್ಪಡೆ
Team Udayavani, Nov 14, 2018, 4:44 PM IST
ಜೈಪುರ್: ಮುಂಬರುವ ರಾಜಸ್ಥಾನ್ ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ದೌಸಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಹರೀಶ್ ಮೀನಾ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಹಿನ್ನಡೆಯಾದಂತಾಗಿದೆ.
ಹರೀಶ್ ಮೀನಾ ಅವರನ್ನು ರಾಜಸ್ಥಾನ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸಚಿನ್ ಪೈಲಟ್ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಪಕ್ಷಕ್ಕೆ ಬರಮಾಡಿಕೊಂಡರು.
2014ರಲ್ಲಿ ಹರೀಶ್ ಮೀನಾ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. 2009ರಿಂದ 2013ರ ಡಿಸೆಂಬರ್ ವರೆಗೆ ಮೀನಾ ರಾಜಸ್ಥಾನದ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದರು. ಇವರ ಕಾರ್ಯದಕ್ಷತೆಗೆ ಇಂಡಿಯನ್ ಪೊಲೀಸ್ ಹಾಗೂ ರಾಷ್ಟ್ರಪತಿ ಪದಕವನ್ನು ಕೂಡಾ ಪಡೆದಿದ್ದರು.
ಕಳೆದ ತಿಂಗಳು ಬಿಜೆಪಿ ಹಿರಿಯ ಮುಖಂಡ ಜಸ್ವಂತ್ ಸಿಂಗ್ ಪುತ್ರ, ಮಾಜಿ ಶಾಸಕ ಮಾನವೇಂದ್ರ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.