ಡಿ.10 ರಿಂದ ಬೆಳಗಾವಿ ಅಧಿವೇಶನ
Team Udayavani, Nov 15, 2018, 6:30 AM IST
ಬೆಂಗಳೂರು: ಬೆಳಗಾವಿಯಲ್ಲಿ ರಾಜ್ಯ ವಿಧಾನಮಂಡಲ ಅಧಿವೇಶನ ಡಿಸೆಂಬರ್ 10 ರಿಂದ 21 ರವರೆಗೆ ನಡೆಸುವ ಸಾಧ್ಯತೆಯಿದೆ.
ರಾಜ್ಯ ಸರ್ಕಾರ ಡಿಸೆಂಬರ್ 10 ರಿಂದ ಹತ್ತು ದಿನಗಳ ಕಾಲ ಅಧಿವೇಶನ ನಡೆಸುವ ಸಂಬಂಧ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಿದ್ದು ಒಪ್ಪಿಗೆ ದೊರೆತರೆ ಶುಕ್ರವಾದ ಸಂಪುಟ ಸಭೆಯ ಮುಂದಿಟ್ಟು ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಹೇಳಲಾಗಿದೆ.
ಅಧಿವೇಶನದ ಸಿದ್ಧತೆ ಸಂಬಂಧ ನವೆಂಬರ್ 19 ರಂದು ವಿಧಾನಸಭೆ ಸ್ಪೀಕರ್ ರಮೇಶ್ಕುಮಾರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬೆಳಗಾವಿಯಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.
ಈ ಹಿಂದಿನ ಅಧಿವೇಶನ ಸಂದರ್ಭದಲ್ಲಿ ಊಟ ಮತ್ತು ವಸತಿ ವಿಚಾರವಾಗಿ ಕೆಲವೊಂದು ಸಮಸ್ಯೆಗಳು ಉಂಟಾದ ಕಾರಣ ಊಟ/ವಸತಿ ಬಗ್ಗೆ ಈ ಬಾರಿ ವಿಶೇಷ ಆಸಕ್ತಿ ವಹಿಸಿ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗುವುದು ಎಂದು ಹೇಳಲಾಗಿದೆ.
ಸಂಪುಟ ವಿಸ್ತರಣೆ ಆಗುತ್ತಾ?
ಬೆಳಗಾವಿ ಅಧಿವೇಶನಕ್ಕೆ ಮುನ್ನ ನವೆಂಬರ್ ಅಂತ್ಯದೊಳಗೆ ರಾಜ್ಯ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆಯಾದರೂ ಮತ್ತೂಂದು ಮೂಲಗಳ ಪ್ರಕಾರ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಲೋಕಸಭೆ ಚುನಾವಣೆ ಕಾರ್ಯತಂತ್ರ ಬದಲಾವಣೆಯೊಂದಿಗೆ ಸಂಪುಟ ವಿಸ್ತರಣೆ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ. ಹೀಗಾಗಿ, ಬೆಳಗಾವಿ ವಿಧಾನಮಂಡಲ ಅಧಿವೇಶನ ಮುಗಿದ ಬಳಿಕವೇ ಸಂಪುಟ ವಿಸ್ತರಣೆಯಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ, ಆಕಾಂಕ್ಷಿಗಳಲ್ಲಿ ಮತ್ತೆ ಆತಂಕ ಶುರುವಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.