ಹೃದಯಾಘಾತ: ಸುದ್ದಿವಾಹಿನಿ ಸಿಬ್ಬಂದಿ ನಿಧನ
Team Udayavani, Nov 15, 2018, 11:10 AM IST
ಬೆಂಗಳೂರು: ನಗರದ ಸುದ್ದಿ ವಾಹಿನಿಯೊಂದರಲ್ಲಿ ವಿಡಿಯೋ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಎಂ.ಮಹೇಶ್ (36) ಬುಧವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾದರು. ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಬಳಿಯ ಮದನೆ ಗ್ರಾಮದ ಮಹೇಶ್, ನಗರದ ಬಾಗಲಗುಂಟೆಯಲ್ಲಿ ವಾಸವಿದ್ದರು. ವಾರದ ಹಿಂದೆ ಲಘು ಎದೆ ನೋವು ಕಾಣಿಸಿಕೊಂಡಿದ್ದು, ವೈದ್ಯರಿಂದ ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಎಂದಿನಂತೆ ಕಾರ್ಯ ನಿರ್ವಹಿಸಿ ರಾತ್ರಿ ಮನೆಗೆ ಬಂದು ಮಲಗಿದ್ದ ಮಹೇಶ್, ಬೆಳಗ್ಗೆ ಎದ್ದಾಗ ಮತ್ತೆ ಎದೆ
ನೋವು ಕಾಣಿಕೊಂಡಿದೆ. ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ರಾಜ್ ನ್ಯೂಸ್ನಲ್ಲಿ ವಿಡಿಯೋ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಹೇಶ್ಗೆ ಒಬ್ಬ ಪುತ್ರಿ, ಪತ್ನಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.