ಕೊಲೆ ಬೆದರಿಕೆ: ಆರೋಪಿ ಬಂಧನ

Team Udayavani, Nov 15, 2018, 1:16 PM IST

blore-6.jpg

ಚಿಕ್ಕಬಳ್ಳಾಪುರ/ಶಿಡ್ಲಘಟ್ಟ: ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರದ ಮಾಜಿ ಶಾಸಕ ಎಂ. ರಾಜಣ್ಣಗೆ ಕೆಲವು ದಿನಗಳ ಹಿಂದೆಯಷ್ಟೇ
ಮೊಬೈಲ್‌ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಜಾಡು ಹಿಡಿಯುವಲ್ಲಿ ಕೊನೆಗೂ ಪೊಲೀಸರು ಯಶಸ್ವಿ ಯಾಗಿದ್ದು, ಪೊಲೀಸರ ಬಲೆಗೆ ಬಿದ್ದ ಅಸಾಮಿಯನ್ನು ಶಿಡ್ಲಘಟ್ಟದ ಮೇಲೂರಿನ ಜೆಡಿಎಸ್‌ ಮುಖಂಡ ರವಿಕುಮಾರ್‌ ಸಹೋದರ ಸಚಿನ್‌ ಎಂದು ಗುರುತಿಸಲಾಗಿದೆ.

ಮಾಜಿ ಶಾಸಕ ಎಂ.ರಾಜಣ್ಣ ಅವರಿಗೆ ಮೊಬೈಲ್‌ ಕರೆ ಮಾಡಿ ರಾಜಣ್ಣ ಅವರನ್ನು ಹಾಗೂ ಅವರ ಕುಟುಂಬಸ್ಥರನ್ನು ಸಚಿನ್‌ ಕೆಲ ದಿನಗಳ ಹಿಂದೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಪೊಲೀಸರಿಗೆ ದೂರು ನೀಡಿದರೆ ಹಾಡು ಹಗಲೆ ಮನೆಗೆ ಬಂದು ತಲೆ ಕಡಿಯುವುದಾಗಿ ಕೊಲೆ ಬೆದರಿಕೆ ಹಾಕಿದ್ದ. ಅನಾಮಧೇಯ ವ್ಯಕ್ತಿಯೊಬ್ಬ ಮೊಬೈಲ್‌ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣ ಸಾರ್ವಜನಿಕ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿತ್ತು. ಹತ್ತು ಹಲವು ಅನುಮಾನಗಳಿಗೂ ಎಡೆ ಮಾಡಿ ಕೊಟ್ಟಿತ್ತು. ಅಲ್ಲದೇ ಈ ಬಗ್ಗೆ ಖುದ್ದು ಮಾಜಿ ಶಾಸಕ ಎಂ.ರಾಜಣ್ಣ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ಸಹ ನೀಡಿದ್ದರು.

ಜಾಮೀನು ನೀಡಿ ಬಿಡುಗಡೆ: ಪ್ರಕರಣ ದಾಖಲಿಸಿಕೊಂಡಿದ್ದ ಶಿಡ್ಲಘಟ್ಟ ಗ್ರಾಮಾಂ ತರ ಪೊಲೀಸರು ತನಿಖೆ ನಡೆಸಿ ರಾಜಣ್ಣಗೆ ಬಂದಿದ್ದ ಮೊಬೈಲ್‌ ಕರೆಗಳ ಜಾಡು ಹಿಡಿದು ಮೇಲೂರಿನ ಜೆಡಿಎಸ್‌ ಮುಖಂಡರಾಗಿರುವ ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜಣ್ಣಗೆ ಜೆಡಿಎಸ್‌ ಬಿ.ಫಾರಂ ತಪ್ಪಿಸಿ ಜೆಡಿಎಸ್‌ ಪಕ್ಷದಿಂದ ಅಧಿಕೃತ ಅಭ್ಯರ್ಥಿ ಯಾಗಿ ಚುನಾವಣೆಗೆ ನಿಂತು ಪರಾಜಿತ ಗೊಂಡಿದ್ದ ವಿಕುಮಾರ್‌ ಅವರ ತಮ್ಮ ಬಿ.ಎನ್‌.ಸಚಿನ್‌ ಅವರನ್ನು ಮಂಗಳ ವಾರ ರಾತ್ರಿ ಬಂಧಿಸಿ ಠಾಣೆಯಲ್ಲಿಯೇ ಜಾಮೀನು ನೀಡಿ ಬಿಡುಗಡೆ ಮಾಡಿದ್ದಾರೆ. ಜಿಲ್ಲೆಯ ಮಾಜಿ ಶಾಸಕರೊಬ್ಬರಿಗೆ ಅನಾಮಧೇಯ ವ್ಯಕ್ತಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣ ರಾಜಕೀಯವಾಗಿ ಮಾತ್ರವಲ್ಲದೇ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಕೊಲೆ ಬೆದರಿಕೆ ಹಾಕಲು ಬಳಸಲಾಗಿತ್ತು ಎನ್ನಲಾದ ಮೊಬೈಲನ್ನು ಸಚಿನ್‌ ಅವರಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ, ಮುಂದಿನ ತನಿಖೆಗೆ ಸಹಕರಿಸುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮುನ್ನ ಕೊಲೆ ಬೆದರಿಕೆ ಕರೆ ಬಂದಿದ್ದ ನಂಬರ್‌ನ ಸಿಮ್‌ನ ಮಾಲೀಕ ಶಿಡ್ಲಘಟ್ಟ ತಾಲೂಕಿನ ಪಕೀರನ ಹೊಸಹಳ್ಳಿಯ ಅಂಬರೀಷ್‌ಗೌಡ ಎಂಬಾತ ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಪೊಲೀಸರ ಮುಂದೆ ನನ್ನ ಮೊಬೈಲ್‌ ಒಂದು ತಿಂಗಳ ಹಿಂದೆ ಕಳೆದು ಹೋಗಿತ್ತು ಎಂದು ಅಂಬರೀಷ್‌ ಹೇಳಿಕೆ ನೀಡಿದ್ದು ಅದನ್ನು ಪೊಲೀಸರು ದಾಖಲಿಸಿ ಆತನನ್ನು ಬಿಟ್ಟಿದ್ದಾರೆ.  

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.