ಶಿರಾಡಿಯಲ್ಲಿ ಎಲ್ಲಾ ವಾಹನಗಳೂ ಸಂಚಾರ
Team Udayavani, Nov 15, 2018, 1:23 PM IST
ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ವ್ಯಾಪ್ತಿಯ ಶಿರಾಡಿಘಾಟ್ ರಸ್ತೆಯಲ್ಲಿ ಗುರುವಾರದಿಂದಲೇ ಸರಕು ಸಾಗಾಣೆಯ ಭಾರೀ ವಾಹನಗಳ ಸಂಚಾರಕ್ಕೂ ಅನುಮತಿ ನೀಡಲಾಗಿದ್ದು, ಸತತ ಮೂಲಕ ತಿಂಗಳ ಬಳಿಕ ಎಲ್ಲಾ ತರಹದ ವಾಹನಗಳ ಸಂಚಾರಕ್ಕೆ ಶಿರಾಡಿ ತೆರೆದುಕೊಂಡಿದೆ.
ಈ ಹಿಂದೆ ಲಘು ವಾಹನಗಳಾದ ದ್ವಿಚಕ್ರ ವಾಹನಗಳು, ಕಾರು ಜೀಪು, ವ್ಯಾನ್, ಟೆಂಪೋ ಟ್ರಾವೆಲರ್ ಹಾಗೂ ಸಾಮಾನ್ಯ ಬಸ್ಸು, ರಾಜಹಂಸ, ಐರಾವತ, ಖಾಸಗಿ ಲಕ್ಸುರಿ ಬಸ್ಸುಗಳ ಸಂಚಾರಕ್ಕೆ ಶಿರಾಡಿಘಾಟ್ ರಸ್ತೆ ಮುಕ್ತಗೊಳಿಸಲಾಗಿತ್ತು. ನ.15ರ ಬೆಳಗ್ಗೆ 6 ಗಂಟೆಯಿಂದ ಎಲ್ಲಾ ಬಗೆಯ ವಾಹನಗಳ ಸಂಚಾರಕ್ಕೂ ಅಂದರೆ ಭಾರೀ ವಾಹನಗಳಾದ ಎಲ್. ಸಿ., ಬುಲೆಟ್ ಟ್ಯಾಂಕರ್, ಕಾರ್ಗೊ ಕಂಟೈನರ್, ಲಾಂಗ್ ಚಾಸೀಸ್ ವಾಹನಗಳು ಸೇರಿದಂತೆ ಎಲ್ಲಾ ಬಗೆಯ ವಾಹನಗಳ ಸಂಚಾರಕ್ಕೂ ಶಿರಾಡಿಘಾಟ್ ರಸ್ತೆಯನ್ನು ಮುಕ್ತಗೊಳಿಸಿ ಹಾಸನ ಜಿಲ್ಲಾಧಿಕಾರಿ ಯವರು ಅದೇಶ ಹೊರಡಿಸಿದ್ದಾರೆ.
ಈ ಆದೇಶದ ಅನ್ವಯ ರಸ್ತೆಯಲ್ಲಿ ಹಾಗೂ ಏಕಮುಖ ಸಂಚಾರ ಇರುವ ಸ್ಥಳಗಳಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯವರನ್ನು ನೇಮಕ ಗೊಳಿಸಲು ಪೊಲೀಸ್ ಅಧೀಕ್ಷಕರು ನಿರ್ದೇಶನ ನೀಡಿರುವ ಅವರು, ರಾಷ್ಟ್ರೀಯ ಹೆದ್ದಾರಿ ಕಾರ್ಯ ಪಾಲಕ ಎಂಜಿನಿಯರ್ ಅವರು ವಾಹನಗಳ ಸುಗಮ ಸಂಚಾರಕ್ಕಾಗಿ ಅವಶ್ಯವಿರುವ ಸೂಚನಾಫಲಕ ಅಳವಡಿಸಲು ಸೂಚನೆ ನೀಡಿದ್ದಾರೆ.
ಮುಂಗಾರು ಮಳೆಯ ಸಂದರ್ಭದಲ್ಲಿ ಭೂ ಕುಸಿತವುಂಟಾಗಿದ್ದರಿಂದ ಒಂದು ತಿಂಗಳಿಗೂ ಹೆಚ್ಚು ಕಾಲ ಶಿರಾಡಿಘಾಟ್‌ನಲ್ಲಿ ವಾಹಸನ ಸಂಚಾರ ಸ್ಥಗಿತೊಳಿಸಲಾಗಿತ್ತು. ರಸ್ತೆಯ ಮೇಲಿನ ಮಣ್ಣು ತೆರವುಗೊಳಿಸಿದ ನಂತರ ಲಘು ವಾಹಗಳು ಹಾಗೂ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಈಗ ಸರಕು ಸಾಗಾಣೆಯ ವಾಹನಗಳ ಸಂಚಾರಕ್ಕೂ ಅನುಮತಿ ನೀಡಲಾಗಿದೆ.
ವಾರದ ಹಿಂದೆಯೇ ಅನುಮತಿ: ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್‌ನಲ್ಲಿ ಭೂಕುಸಿತ ಉಂಟಾಗಿತ್ತು. ಹೀಗಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಆಗಸ್ಟ್‌ನಲ್ಲಿ ರದ್ದು ಗೊಳಿಸಲಾಗಿತ್ತು. ರಸ್ತೆ ತಾತ್ಕಾಲಿಕ ದುರಸ್ತಿ ಮಾಡಿದ ನಂತರ ಸೆಪ್ಟೆಂಬರ್‌ನಲ್ಲಿ ಮೊದಲಿಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ನಂತರ ಸಾರ್ವಜನಿಕ ಬಸ್‌ಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು.
ಆದರೆ, ನಾಲ್ಕು ಕಡೆ ಏಕಮುಖ ಸಂಚಾರ ವಿದ್ದರಿಂದ ಘನವಾಹನಗಳ ವಾಹನಕ್ಕೆ ಅನುಮತಿ ನೀಡಿರಲಿಲ್ಲ. ಆದರೆ, ಸಾರ್ವಜನಿಕ ವಲಯ ದಿಂದ ಘನವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ವ್ಯಾಪಕ ಒತ್ತಡಗಳು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ 12ರಿಂದ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಿದ್ದರು.
ಆದರೆ, ಹಾಸನಾಂಬ ಉತ್ಸವ ಇದ್ದ ಕಾರಣ ಇಲ್ಲಿನ ಜಿಲ್ಲಾಡಳಿತ ಭಾರೀ ವಾಹನಗಳ ಸಂಚಾರಕ್ಕೆ ಅಂದು ಅವಕಾಶ ನೀಡಿರಲಿಲ್ಲ. ಹಾಸನಾಂಬ ಉತ್ಸದ ಮುಗಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚೆ ನಡೆಸಿದ ಬಳಿಕ ನ.14ರಿಂದ ಘನ ವಾಹನಗಳ ಸಂಚಾರಕ್ಕೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅನುಮತಿ ನೀಡಿದ್ದಾರೆ.
ಶಿರಾಡಿ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡದ ಕಾರಣ ಸುತ್ತಿ ಬಳಸಿ ಕರಾವಳಿ ಜಿಲ್ಲೆಗೆ ಹೋಗ
ಬೇಕಿತ್ತು. ಇದರಿಂದ ಸಾವಿರಾರು ರೂ. ಇಂಧನ ವಿನಾಕಾರಣ ಪೋಲಾಗುತ್ತಿತ್ತು. ಇದೀಗ ಶಿರಾಡಿ ಘಾಟಿ ರಸ್ತೆ ಘನ ವಾಹನಗಳ
ಸಂಚಾರಕ್ಕೂ ಮುಕ್ತಗೊಳಿಸಿರುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ.
ಸಂಜೀತ್‌ಶೆಟ್ಟಿ, ಶಿರಾಡಿ ರಸ್ತೆ ಉಳಿಸಿ ಹೋರಾಟ ಸಮಿತಿ ಅಧ್ಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.