ದಕ್ಷಿಣಪಿನಾಕಿನಿ ನದಿ ಪುನಃಶ್ಚೇತನಕ್ಕೆ ಸಹಕರಿಸಿ

Team Udayavani, Nov 15, 2018, 2:52 PM IST

kol-2.jpg

ಕೋಲಾರ: ಜಿಲ್ಲೆಯಲ್ಲಿ ಹಾದು ಹೋಗಿರುವ ದಕ್ಷಿಣ ಪಿನಾಕಿನಿ ನದಿ ಪಾತ್ರವನ್ನು ಅಭಿವೃದ್ಧಿಪಡಿಸಲು ನಿವೃತ್ತ ಜಿಲ್ಲಾಧಿಕಾರಿ ವಿಶ್ವನಾಥ್‌ ಮುಂದಾಗಿದ್ದಾರೆ. ಬುಧವಾರ ಈ ಸಂಬಂಧ ಜಿಲ್ಲೆಗೆ ಆಗಮಿಸಿ ಹಾಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸಭೆ ನಡೆಸಿದ ಅವರು, ನದಿ ಅಭಿವೃದ್ಧಿಗಾಗಿ ದಕ್ಷಿಣ ಪಿನಾಕಿನಿ ನದಿ ಪುನಃ ಶ್ಚೇತನ ಟ್ರಸ್ಟ್‌ ಮುಂದಾಗಿದ್ದು, ಇದಕ್ಕೆ ನೆರವು ನೀಡಬೇಕೆಂದು ಮನವಿ ಮಾಡಿಕೊಂಡರು.

ಯೋಜನೆ ಅನುಷ್ಠಾನಕ್ಕೆ ಸಹಕಾರ ನೀಡಿ: ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ 16 ತಾಲೂಕು ವ್ಯಾಪ್ತಿಯನ್ನು ಪಿನಾಕಿನಿ ನದಿ ಪ್ರದೇಶ ಒಳಗೊಂಡಿದೆ. ಕೋಲಾರ ಜಿಲ್ಲೆಯಲ್ಲಿ ಕೋಲಾರ, ಮಾಲೂರು ಮತ್ತು ಬಂಗಾರಪೇಟೆ ತಾಲೂಕುಗಳು ಸೇರುತ್ತವೆ. ಪಿನಾಕಿನಿ ನದಿ ಪುನಃಶ್ಚೇತನದ ಅನಿವಾರ್ಯತೆಯನ್ನು ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟ ಅವರು, ಟ್ರಸ್ಟ್‌ ತನ್ನ ಯೋಜನೆಗಳನ್ನು ಪೂರ್ಣಗೊಳಿಸಲು 3 ವರ್ಷಗಳ ಕಾಲಮಿತಿ ನಿಗದಿ ಮಾಡಲಾಗಿದೆ. ನದಿ ವ್ಯಾಪ್ತಿಯ ತಾಲೂಕುಗಳಲ್ಲಿನ ಕೆರೆಗಳ ಕುರಿತ ಸಮಗ್ರ ಚಿತ್ರಣವನ್ನು ಇಸ್ರೋ ಮೂಲಕ ಪಡೆಯಲಾಗಿದೆ. ಯೋಜನೆಗೆ ಕೋಟ್ಯಂತರ ರೂ. ಅವಶ್ಯಕತೆಯಿದೆ. ಆರ್ಥಿಕ ಸಂಪನ್ಮೂಲವನ್ನು ಟ್ರಸ್ಟ್‌ ಹೊಂದಿಸುತ್ತದೆ. ಯೋಜನೆ ಅನುಷ್ಠಾನಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಬೇಕೆಂದು ಕೋರಿದರು.

5 ಎಕರೆ ಜಮೀನು ಅಗತ್ಯ: ಇದಕ್ಕಾಗಿ ಮಾಲೂರಿನಲ್ಲಿ 5 ಎಕರೆ ಜಮೀನು ಅವಶ್ಯಕತೆಯಿದೆ. ಸರ್ಕಾರಿ ಜಮೀನು ಸಿಕ್ಕರೆ ಒಳ್ಳೆಯದು. ಇಲ್ಲವಾದಲ್ಲಿ ಯೋಗ್ಯ ಬೆಲೆಗೆ ಟ್ರಸ್ಟ್‌ ವತಿಯಿಂದಲೇ ಖರೀದಿಸಲಾಗುವುದು. ಇಲ್ಲಿ ಜಾಗ ಸಿಗದೇ ಹೋದಲ್ಲಿ ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಜಾಗ ಇರುವುದರಿಂದ ಆ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು.

ಜಿಲ್ಲಾಡಳಿತದಿಂದ ಸಹಕಾರ: ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಮಾತನಾಡಿ, ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಸೇರಿದ 1,328 ಹಾಗೂ ಜಿಪಂಗೆ ಸೇರಿದ 138 ಕೆರೆಗಳು ಸೇರಿ ಒಟ್ಟು 2,668 ಕೆರೆಗಳಿವೆ. ಈಗಾಗಲೇ ಕೆ.ಸಿ.ವ್ಯಾಲಿ ಯೋಜನೆಯಡಿ 126 ಕೆರೆಗಳಿಗೆ ನೀರು ಹರಿಸುವ ಸಂಬಂಧ ಕೆರೆಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮಾರ್ಕಂಡೇಯ ಜಲಾಶಯ, ಯರಗೋಳ್‌ ಯೋಜನೆ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಪಡಿಸಲಾಗುತ್ತಿದೆ. ಇಂತಹ ಸಂದರ್ಭ ದಲ್ಲಿ ಟ್ರಸ್ಟ್‌ ಕೆರೆ ಸಂರಕ್ಷಣೆಗೆ ಒತ್ತು ನೀಡುವುದು ಒಳ್ಳೆಯ ಕಾರ್ಯ. ಅವಶ್ಯವಿರುವ ಎಲ್ಲ ಸಹಕಾರವನ್ನು ಜಿಲ್ಲಾಡಳಿತದಿಂದ ಒದಗಿಸ ಲಾಗುವುದು ಎಂದು ಭರವಸೆ ನೀಡಿದರು.

ನರೇಗಾ ಯೋಜನೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನು ಕೆರೆಗಳನ್ನು ಅಭಿವೃದ್ಧಿಪಡಿಸಲು ಅವಕಾಶವಿರುವ ಬಗ್ಗೆ ಮನವರಿಕೆ ಮಾಡಿಕೊಟ್ಟ ಅವರು, ನೀಲಗಿರಿ ನಿರ್ಮೂಲನೆ ಸಂಬಂಧ ಸರ್ಕಾರ ದಿಂದ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದರು. ಮಾಲೂರು ತಾಲೂಕಿನಲ್ಲಿ 5 ಎಕರೆ ಸರ್ಕಾರಿ ಜಮೀನು ಲಭ್ಯತೆ ಬಗ್ಗೆ ಪರಿಶೀಲನೆ ನಡೆ ಸುವಂತೆ ತೋಟಗಾರಿಕೆ ಅಧಿಕಾರಿಗೆ ಸೂಚಿಸಿದರು. ಪ್ರಗತಿಪರ ರೈತರಾದ ಅಶೋಕ್‌ ರಾಂಪುರ, ನೆನ ಮನಹಳ್ಳಿ ಚಂದ್ರಶೇಖರ್‌, ಸಂಪತ್‌ ಕುಮಾರ್‌, ಕಡಿಮೆ ನೀರಿನಲ್ಲಿ ಕೃಷಿ ಕ್ಷೇತ್ರದಲಾಗಿರುವ ಸಾಧನೆ ವಿವರಿಸಿದರು. ಜಿಪಂ ಯೋಜನಾ ನಿರ್ದೇಶಕ ರವಿಚಂದ್ರನ್‌, ಕೃಷಿ ಅಧಿ ಕಾರಿ ನಯೀಮ್‌ ಪಾಷ ಇತರರು ಹಾಜರಿದ್ದರು.

ಜಿಲ್ಲೆಯ ಕೆರೆ, ರಾಜಕಾಲುವೆಗಳ ಅಭಿವೃದ್ಧಿ ಸೇರಿದಂತೆ ಜಲಾನಯನ ಪ್ರದೇಶಗಳ ಅಭಿವೃದ್ಧಿ, ಮಳೆ ನೀರು ಸಂರಕ್ಷಣೆ,
ಸಾವಯವ ಕೃಷಿಗೆ ಒತ್ತು ನೀಡುವುದು, ನೀಲಗಿರಿ ನಿರ್ಮೂಲನೆ ಕೂಡ ದಕ್ಷಿಣ ಪಿನಾಕಿನಿ ನದಿ ಪುನಃಶ್ಚೇತನ ಟ್ರಸ್ಟ್‌ ಕಾರ್ಯಕ್ರಮಗಳಲ್ಲಿ ಒಳಪಟ್ಟಿವೆ. ರೈತ ಉತ್ಪಾದಕ ಸಂಸ್ಥೆಗಳನ್ನು ಆರಂಭಿಸುವ ಮೂಲಕ ರೈತರು ಬೆಳೆದ ಉತ್ಪನ್ನಗಳಿಗೆ ಯೋಗ್ಯ ಬೆಲೆ ಮತ್ತು ಮಾರುಕಟ್ಟೆಯನ್ನೂ ಟ್ರಸ್ಟ್‌ ಕಲ್ಪಿಸುತ್ತದೆ.
ವಿಶ್ವನಾಥ್‌, ನಿವೃತ್ತ ಐಎಎಸ್‌ ಅಧಿಕಾರಿ

ದಕ್ಷಿಣ ಪಿನಾಕಿನಿ ನದಿ ಪುನಃಶ್ಚೇತನ ಟ್ರಸ್ಟ್‌ ಯೋಜನೆ ಮೂರು ವರ್ಷಗಳ ಅವಧಿಯದ್ದು. ಆದರೆ, ಜಿಲ್ಲೆಯ ಜನರಿಗೆ
ಅನುಕೂಲದ ಬಗ್ಗೆ ಮನವರಿಕೆ ಮಾಡಿಕೊಟ್ಟ ನಂತರವಷ್ಟೇ ಯೋಜನೆಯ ಬಗ್ಗೆ ನಂಬಿಕೆ ಮೂಡಲು ಸಾಧ್ಯ. ಹೀಗಾಗಿ, ಆರಂಭದಲ್ಲಿ ಯಾವುದಾದರೂ ಒಂದು ಭಾಗದಲ್ಲಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಪ್ರಾತ್ಯಕ್ಷಿಕೆ ತೋರಿಸೋಣ.
ಜೆ.ಮಂಜುನಾಥ್‌,  ಜಿಲ್ಲಾಧಿಕಾರಿ 

ಟಾಪ್ ನ್ಯೂಸ್

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.