ಏರಿದ ರೂಪಾಯಿ, ಇಳಿದ ತೈಲ ಬೆಲೆ: ಸೆನ್ಸೆಕ್ಸ್ 119 ಅಂಕ ಏರಿಕೆ
Team Udayavani, Nov 15, 2018, 4:15 PM IST
ಮುಂಬಯಿ : ಡಾಲರ್ ಎದುರು ರೂಪಾಯಿ ತೋರಿರುವ ದೃಢತೆ, ಹೆಚ್ಚಿದ ವಿದೇಶಿ ಬಂಡವಾಳದ ಒಳ ಹರಿವು, ಕಚ್ಚಾ ತೈಲ ಬೆಲೆಯಲ್ಲಿನ ಇಳಿಕೆ ಇವೇ ಮೊದಲಾದ ಕಾರಣಗಳಿಗೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 118.55 ಅಂಕಗಳ ಮುನ್ನೆಯೊಂದಿಗೆ 35,145.75 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 40.40 ಅಂಕಗಳ ಮುನ್ನಡೆಯೊಂದಿಗೆ 10,616.70 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.
ಅಕ್ಟೋಬರ್ ಆರಂಭದಲ್ಲಿ ಬ್ಯಾರಲ್ಗೆ 86 ಡಾಲರ್ ಇದ್ದ ಜಾಗತಿಕ ಕಚ್ಚಾ ತೈಲ ಬೆಲೆ ಶೇ.30ರ ಕುಸಿತವನ್ನು ಕಂಡು 65 ಡಾಲರ್ಗೆ ಇಳಿದಿರುವುದು ಭಾರತದ ಆರ್ಥಿಕತೆಗೆ ದೊಡ್ಡ ಉತ್ತೇಜನ ನೀಡಿದೆ.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,734 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,099 ಶೇರುಗಳು ಮುನ್ನಡೆ ಸಾಧಿಸಿದವು; 1,497 ಶೇರುಗಳು ಹಿನ್ನಡೆಗೆ ಗುರಿಯಾದವು; 138 ಶೇರುಗಳು ಯಾವುದೇ ಬದಲಾವಣೆಯನ್ನು ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
US elections ಎಫೆಕ್ಟ್: ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.