ಸೂರು ಫಲಾನುಭವಿಗಳ ಆರ್ಥಿಕ ಮಿತಿ ಹೆಚ್ಚಳಕ್ಕೆ ಪ್ರಯತ್ನ: ಖಾದರ್
Team Udayavani, Nov 16, 2018, 6:50 AM IST
ಬೆಂಗಳೂರು: 2018-19 ನೇ ಸಾಲಿನ ಗ್ರಾಮೀಣ ವಸತಿ ಯೋಜನೆ ಅಡಿಯಲ್ಲಿ ಆಶ್ರಯ ಮನೆಗಳನ್ನು ನೀಡಲು ಫಲಾನುಭವಿಗಳ ಆದಾಯ ಮಿತಿಯನ್ನು 32 ಸಾವಿರದಿಂದ ಬಿಪಿಎಲ್ ಕಾರ್ಡ್‌ಗೆ ನಿಗದಿ ಪಡಿಸಿರುವ 1.20 ಲಕ್ಷ ರೂ. ಹೆಚ್ಚಳ ಮಾಡುವಂತೆ ಹಣಕಾಸು ಇಲಾಖೆಗೆ ಪತ್ರ ಬರೆಯಲಾಗಿದೆ. ಒಪ್ಪಿಗೆ ದೊರೆತ ತಕ್ಷಣ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ಮನೆಗಳನ್ನು ಮಂಜೂರು ಮಾಡಲಾಗುವುದು ವಸತಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಆಶ್ರಯ ಮನೆಗಳನ್ನು ನೀಡುವುದು ವಿಳಂಬವಾಗಿದೆ. ಕೆಲವು ನಿಯಮಗಳನ್ನು ಬದಲಾಯಿಸುವಾಗ ವಿಳಂಬ ಆಗುವುದು ಸಹಜ. ಹೀಗಾಗಿ ಆರೋಪ ಕೇಳಿ ಬರುತ್ತಿದೆ. ಎಲ್ಲವನ್ನೂ ಸರಿಪಡಿಸಲು ಇಲಾಖೆ ಪ್ರಯತ್ನ ನಡೆಸಿದೆ. ಆಹಾರ ಇಲಾಖೆಯಲ್ಲಿಯೂ ಇದೇ ರೀತಿ ಹೊಸ ಸುಧಾರಣೆ ಕ್ರಮ ಕೈಗೊಂಡಿದ್ದಾಗ ಸಾಕಷ್ಟು ಆರೋಪ ಕೇಳಿ ಬಂದಿತ್ತು. ಆದರೆ, ಈಗ ಆ ಇಲಾಖೆಯಲ್ಲಿ ರೇಷನ್ ಕಾರ್ಡ್ ಪಡೆಯುವುದಾಗಲಿ, ಅಥವಾ ಪಡಿತರ ಪಡೆಯುವುದಾಗಲೀ ಯಾವುದೇ ಗೊಂದಲ ಇಲ್ಲ ಎಂದು ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ ಎಸ್ಸಿ ಎಸ್ಟಿ ಕುಟುಂಬಗಳಿಗೆ ನೀಡುವ ಮನೆಗಳನ್ನು ಹೆಚ್ಚುವರಿಯಾಗಿದ್ದರೆ, ಸಾಮಾನ್ಯ ವರ್ಗದವರಿಗೆ ನೀಡಬೇಕೆಂಬ ಬೇಡಿಕೆ ಇದೆ. ಆದರೆ, ಎಸ್ಸಿ ಎಸ್ಟಿ ಸಮುದಾಯದವರಿಗೆ ವಿಶೇಷವಾಗಿ ನೀಡುವುದರಿಂದ ಬೇರೆ ವರ್ಗದವರಿಗೆ ಅದನ್ನು ವರ್ಗಾಯಿಸಲು ಅವಕಾಶ ಇಲ್ಲ ಎಂದು ಹೇಳಿದರು.
ಮೊಬೈಲ್ ಟವರ್ ಹಾಕಲು ನೀತಿ: ನಗರ ಪ್ರದೇಶಗಳಲ್ಲಿ ಮನೆಗಳ ಮೇಲೆ ಮೊಬೈಲ್ ಟವರ್ ಹಾಕಲು ಹೊಸ ನೀತಿ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತಂತೆ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಶೀಘ್ರವೆ ಹೊಸ ನೀತಿ ಜಾರಿಗೆ ತರಲಾಗುವುದು. ಸಾರ್ವಜನಿಕರು ಮನೆಗಳ ಮೇಲೆ ಮೊಬೈಲ್ ಟವರ್ ಹಾಕುವ ಉದ್ದೇಶ ಇದ್ದರೆ, ಮನೆ ನಿರ್ಮಾಣದ ಸಂದರ್ಭದಲ್ಲಿಯೇ ಅದನ್ನು ನಮೂದಿಸಬೇಕು. ಇಲ್ಲದಿದ್ದರೆ, ನಂತರ ಅಳವಡಿಸಲು ಮುಂದಾದರೆ, ಮನೆಯ ಯೋಜನಾ ರೂಪ ರೇಷೆಯನ್ನು ಬದಲಾಯಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.