ತಮಿಳುನಾಡು ಕರಾವಳಿಗೆ ಅಪ್ಪಳಿಸಿದ “ಗಜ’ಮಾರುತ
Team Udayavani, Nov 16, 2018, 7:01 AM IST
ಚೆನ್ನೈ: ಭಾರೀ ಭೀತಿ ಹುಟ್ಟಿಸಿದ್ದ “ಗಜ’ ಚಂಡಮಾರುತವು ಶುಕ್ರವಾರ ಮುಂಜಾನೆ ತಮಿಳುನಾಡು ಮತ್ತು ಪುದು ಚೇರಿಯ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆಯ ಪ್ರಕಾರ ಗಂಟೆಗೆ 90ರಿಂದ 100 ಕಿ.ಮೀ. ವೇಗದಲ್ಲಿ ಪಂಬನ್ ಮತ್ತು ಕಡಲೂರು ಮಧ್ಯದಲ್ಲಿ ಚಂಡಮಾರುತ ಅಪ್ಪಳಿಸಲಿದೆ. ಕರೈಕಲ್ ಸೇರಿದಂತೆ ನಾಗಪಟ್ಟಣ ಜಿಲ್ಲೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಭಾರೀ ಪ್ರಮಾ ಣದ ಮಳೆಯಾಗಿದೆ. ಅಲ್ಲದೆ 7 ಜಿಲ್ಲೆಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಎರಡೂ ರಾಜ್ಯ ಸರಕಾರಗಳೂ ಸರ್ವ ಸನ್ನದ್ಧ ವಾಗಿದ್ದು, ತಗ್ಗು ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರಗೊಳಿಸಲಾಗಿದೆ. 30,500 ಮಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ಈಗಾಗಲೇ ವಿಶಾಖಪಟ್ಟಣಂನಿಂದ ನಾಗಪಟ್ಟಣಗೆ ಹೆಲಿಕಾಪ್ಟರ್ ಮೂಲಕ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಲಾಗಿದೆ. ಚೆನ್ನೈ, ಕಡಲೂರು ಮತ್ತು ನಾಗಪಟ್ಟಣ ಗಳಲ್ಲಿ ಹಡಗುಗಳನ್ನು ಸಜ್ಜಾಗಿರಿಸಲಾಗಿದೆ. ತಂಜಾವೂರು, ತಿರುವಾರೂರು, ಪುದು ಕೊಟ್ಟಾಯ್, ನಾಗಪಟ್ಟಣ, ಕಡಲೂರು ಮತ್ತು ರಾಮನಾಥಪುರಂ ಜಿಲ್ಲಾಧಿಕಾರಿ ಗಳು ಜಿಲ್ಲಾ ಸ್ಥಳಗಳಲ್ಲಿಯೇ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆಯ ನಿಗಾ ವಹಿಸಿದ್ದಾರೆ.
ಚಂಡಮಾರುತದ ಹಿನ್ನೆಲೆಯಲ್ಲಿ ಕೆಲವೆಡೆಗಳಲ್ಲಿ ಗುರುವಾರವೇ ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಲಾಗಿತ್ತು. ಶುಕ್ರವಾರವೂ ಈ ಏಳೂ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ. ತಮಿಳುನಾಡಿನ ಕಂದಾಯ ಸಚಿವ ಜಯಕುಮಾರ್ ಅವರು ಪರಿಹಾರ ಕಾರ್ಯಾಚರಣೆಯ ಉಸ್ತುವಾರಿ ವಹಿಸಿಕೊಂಡಿದ್ದು, ಪರಿಹಾರ ಕೇಂದ್ರಗಳಿಗೆ ತೆರಳುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಈ ಮಧ್ಯೆ, ಮರೀನಾ ಸೇರಿದಂತೆ ತಮಿಳುನಾಡು ಮತ್ತು ಪುದುಚೇರಿಯ ಕಿನಾರೆಗಳಿಗೆ ಪ್ರವಾಸಿ ಗರಿಗೆ ಪ್ರವೇಶ ನಿರಾಕರಿಸಲಾಗಿದೆ.
ಅತ್ತ ಪುದುಚೇರಿಯಲ್ಲೂ ಚಂಡ ಮಾರುತ ವನ್ನು ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ವತಃ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅವರೇ ಉಸ್ತುವಾರಿ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Simple Life: ಬದುಕು ನಿರಾಡಂಬರವಾಗಿರಲಿ
Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ
BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Udupi: ಇಲ್ಲಿ ಹೊಂಡಗಳೇ ಸ್ಪೀಡ್ ಬ್ರೇಕರ್‌ಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.